AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಭಾರತ- ಇಂಗ್ಲೆಂಡ್‌ ಆಟಗಾರರು

Sir Garfield Sobers Tribute: ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿ ನಿರ್ಧಾರಕ ಪಂದ್ಯ ಲಾರ್ಡ್ಸ್‌ನಲ್ಲಿ ಆರಂಭವಾಗಿದೆ. ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆಗಳಾಗಿವೆ. ವೆಸ್ಟ್ ಇಂಡೀಸ್‌ನ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್ ನಿಧನಕ್ಕೆ ಗೌರವ ಸಲ್ಲಿಸಲು ಆಟಗಾರರು ಕಪ್ಪು ಪಟ್ಟಿ ಧರಿಸಿ ಒಂದು ನಿಮಿಷ ಮೌನ ಆಚರಿಸಿದರು. ಸೋಬರ್ಸ್ ಅವರ ಅದ್ಭುತ ಕ್ರಿಕೆಟ್ ವೃತ್ತಿಜೀವನವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

IND vs ENG: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಭಾರತ- ಇಂಗ್ಲೆಂಡ್‌ ಆಟಗಾರರು
Team India
ಪೃಥ್ವಿಶಂಕರ
|

Updated on:Jul 19, 2026 | 5:35 PM

Share

ಭಾರತ ಮತ್ತು ಇಂಗ್ಲೆಂಡ್ (IND vs ENG) ನಡುವಿನ ಸರಣಿ ನಿರ್ಧಾರಕ ಪಂದ್ಯ ಲಾರ್ಡ್ಸ್‌ನಲ್ಲಿ (Lord’s) ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು. ಇನ್ನು ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಈ ಪಂದ್ಯದಲ್ಲಿ ಬುಮ್ರಾ ಹಾಗೂ ಸುಂದರ್ ಆಡುತ್ತಿಲ್ಲ. ಹಾಗೆಯೇ ದುಬೆಯನ್ನು ತಂಡದಿಂದ ಕೈಬಿಡಲಾಗಿದೆ. ಅವರ ಜಾಗದಲ್ಲಿ ರಾಹುಲ್, ಅರ್ಷದೀಪ್ ಹಾಗೂ ಪ್ರಿನ್ಸ್ ಯಾದವ್ ಆಡುತ್ತಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳ ಆಟಗಾರರು ಕೈಗೆ ಕಪ್ಪು ಪಟ್ಟಿ ಧರಿಸಿ ಮೈದಾನದಲ್ಲಿ ಮೌನಾಚರಣೆ ನಡೆಸಿದರು.

ಕಪ್ಪು ಬ್ಯಾಂಡ್ ಧರಿಸಿದ ಆಟಗಾರರು

ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಸರ್ ಗಾರ್ಫೀಲ್ಡ್ ಸೋಬರ್ಸ್ ಶುಕ್ರವಾರ ನಿಧನರಾದರು. ಅವರಿಗೆ ಗೌರವ ಸಲ್ಲಿಸಲು ಭಾರತ ಮತ್ತು ಇಂಗ್ಲೆಂಡ್ ಆಟಗಾರರು ಕಪ್ಪು ಬ್ಯಾಂಡ್ ಧರಿಸಿ ಕಣಕ್ಕಿಳಿದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಸಿಸಿಐ, ‘ಸರ್ ಗಾರ್ಫೀಲ್ಡ್ ಸೋಬರ್ಸ್ ಅವರಿಗೆ ಗೌರವ ಸಲ್ಲಿಸಲು ಟೀಂ ಇಂಡಿಯಾ ಕಪ್ಪು ಬ್ಯಾಂಡ್ ಧರಿಸಿದೆ. ಹಾಗೆಯೇ ಕ್ರಿಕೆಟ್‌ನ ಮೆಕ್ಕಾ ಲಾರ್ಡ್ಸ್‌ನಲ್ಲಿ ಪಂದ್ಯ ಪ್ರಾರಂಭವಾಗುವ ಮೊದಲು ಒಂದು ನಿಮಿಷ ಮೌನ ಆಚರಿಸಲಾಯಿತು. ಲೆಜೆಂಡರಿ ಕ್ರಿಕೆಟಿಗನಿಗೆ ಗೌರವ ಸಲ್ಲಿಸಲು ಎರಡೂ ತಂಡಗಳ ಆಟಗಾರರು ಮತ್ತು ಪ್ರೇಕ್ಷಕರು ಎದ್ದು ನಿಂತು ಮೌನಾಚರಣೆಯಲ್ಲಿ ಭಾಗಿಯಾದರು. ಇದಕ್ಕೂ ಮೊದಲು, ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಸಾಂಪ್ರದಾಯಿಕವಾಗಿ ಗಂಟೆ ಬಾರಿಸುವ ಮೂಲಕ ಆಟಕ್ಕೆ ಚಾಲನೆ ನೀಡಿದರು.

ಸೋಬರ್ಸ್ ಅವರ ವೃತ್ತಿಜೀವನ

ಸರ್ ಸೋಬರ್ಸ್ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ವೆಸ್ಟ್ ಇಂಡೀಸ್ ಪರ 93 ಟೆಸ್ಟ್ ಪಂದ್ಯಗಳನ್ನಾಡಿರುವ ಸೋಬರ್ಸ್ 57.78 ರ ಸರಾಸರಿಯಲ್ಲಿ 8032 ರನ್ ಗಳಿಸಿದ್ದಾರೆ. ಇದರಲ್ಲಿ 26 ಶತಕಗಳು ಮತ್ತು 30 ಅರ್ಧಶತಕಗಳು ಸೇರಿವೆ. ಹಾಗೆಯೇ 109 ಕ್ಯಾಚ್‌ಗಳನ್ನು ಸಹ ಹಿಡಿದಿದ್ದಾರೆ. ಬೌಲಿಂಗ್‌ನಲ್ಲೂ ಮಿಂಚಿರುವ ಅವರು 93 ಟೆಸ್ಟ್‌ಗಳಲ್ಲಿ 34 ಸರಾಸರಿಯಲ್ಲಿ 235 ವಿಕೆಟ್‌ಗಳನ್ನು ಪಡೆದಿದ್ದಾರೆ, ಇದರಲ್ಲಿ ಆರು ಬಾರಿ ಐದು ವಿಕೆಟ್‌ಗಳ ಸಾಧನೆಯೂ ಸೇರಿದೆ. ಒಟ್ಟಾರೆಯಾಗಿ, ಅವರ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ, ಸೋಬರ್ಸ್ 383 ಪಂದ್ಯಗಳನ್ನು ಆಡಿದ್ದು, 86 ಶತಕಗಳು ಸೇರಿದಂತೆ 54.87 ಸರಾಸರಿಯಲ್ಲಿ 28314 ರನ್‌ಗಳನ್ನು ಗಳಿಸಿದ್ದಾರೆ. ಹಾಗೆಯೇ 36 ಬಾರಿ ಐದು ವಿಕೆಟ್‌ಗಳು ಸೇರಿದಂತೆ 1043 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Sun, 19 July 26

Follow Us
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ