
ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ, ವಿಶ್ವ ಕ್ರಿಕೆಟ್ನ ದಿಗ್ಗಜ ಆಲ್ರೌಂಡರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಸರ್ ಗಾರ್ಫೀಲ್ಡ್ ಸೋಬರ್ಸ್ (Sir Garfield Sobers) ತಮ್ಮ 89 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸೋಬರ್ಸ್ ಇಂದು ನಿಧನರಾಗಿದ್ದಾರೆ. ಜುಲೈ 28 ರಂದು 90ನೇ ವರ್ಷಕ್ಕೆ ಕಾಲಿಡಬೇಕಿದ್ದ ಸೋಬರ್ಸ್ ತಮ್ಮ ಹುಟ್ಟುಹಬ್ಬಕ್ಕೆ 11 ದಿನಗಳ ಮೊದಲು ಅಂದರೆ ಜುಲೈ 17 ರಂದು ಕೊನೆಯುಸಿರೆಳಿದಿದ್ದಾರೆ. ಬಾರ್ಬಡೋಸ್‌ನಿಂದ ವಿಂಡೀಸ್ ತಂಡವನ್ನು ಪ್ರತಿನಿಧಿಸಿದ್ದ ಗ್ಯಾರಿ ಸೋಬರ್ಸ್ ದೀರ್ಘಕಾಲದವರೆಗೆ ವೆಸ್ಟ್ ಇಂಡೀಸ್ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದರು.
ಜುಲೈ 28, 1936 ರಂದು ಬಾರ್ಬಡೋಸ್‌ನ ಸೇಂಟ್ ಮೈಕೆಲ್‌ನಲ್ಲಿ ಜನಿಸಿದ ಗಾರ್ಫೀಲ್ಡ್ ಸೋಬರ್ಸ್ 1952 ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ನಂತರ ಎರಡೇ ವರ್ಷಗಳಲ್ಲಿ ಅಂದರೆ 1954 ರಲ್ಲಿ ವೆಸ್ಟ್ ಇಂಡೀಸ್ ತಂಡದ ಪರ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಮುಂದಿನ 20 ವರ್ಷಗಳ ಕಾಲ, ಸೋಬರ್ಸ್ ತಮ್ಮ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಟೆಸ್ಟ್ ಕ್ರಿಕೆಟ್ ಅನ್ನು ಸ್ಮರಣೀಯವಾಗಿಸಿದರು. ಎಡಗೈ ಬ್ಯಾಟಿಂಗ್ ಮತ್ತು ಎಡಗೈ ಮಧ್ಯಮ ವೇಗದ ಬೌಲರ್ ಆಗಿದ್ದ ಸೋಬರ್ಸ್ ಅವರನ್ನು ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಆಲ್‌ರೌಂಡರ್ ಎಂದು ಪರಿಗಣಿಸಲಾಗಿದೆ.
ಸರ್ ಸೋಬರ್ಸ್ 1965 ರಿಂದ 1972 ರವರೆಗೆ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ನಾಯಕರಾಗಿದ್ದರು, ಈ ಅವಧಿಯಲ್ಲಿ 39 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದರು. ಇದಲ್ಲದೆ, ಯಾವುದೇ ರೀತಿಯ ಕ್ರಿಕೆಟ್‌ನಲ್ಲಿ ಒಂದೇ ಓವರ್‌ನಲ್ಲಿ ಸತತ ಆರು ಸಿಕ್ಸರ್‌ಗಳನ್ನು ಹೊಡೆದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆ ಅವರ ಹೆಸರಿನಲ್ಲಿದೆ. ಕಾರ್ಡಿಫ್‌ನಲ್ಲಿ ನಡೆದ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಅವರು ಈ ಐತಿಹಾಸಿಕ ಸಾಧನೆ ಮಾಡಿದ್ದರು. ಅವರ ಬ್ಯಾಟಿಂಗ್ ಪರಾಕ್ರಮದಿಂದಾಗಿ ಸೋಬರ್ಸ್ ಟೆಸ್ಟ್ ಕ್ರಿಕೆಟ್‌ನಲ್ಲಿ 57.78 ಸರಾಸರಿಯನ್ನು ಹೊಂದಿದ್ದರೆ, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 54.87 ರ ಸರಾಸರಿ ಹೊಂದಿದ್ದರು.
One of the greatest cricketers to have ever graced the game, Sir Garfield Sobers, has sadly passed away. Our thoughts are with his family, friends and @windiescricket as we say goodbye to an ICC Hall of Famer.https://t.co/IyeYerI0ok
— ICC (@ICC) July 17, 2026
ಸರ್ ಸೋಬರ್ಸ್ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ವೆಸ್ಟ್ ಇಂಡೀಸ್ ಪರ 93 ಟೆಸ್ಟ್ ಪಂದ್ಯಗಳನ್ನಾಡಿರುವ ಸೋಬರ್ಸ್ 57.78 ರ ಸರಾಸರಿಯಲ್ಲಿ 8032 ರನ್ ಗಳಿಸಿದ್ದಾರೆ. ಇದರಲ್ಲಿ 26 ಶತಕಗಳು ಮತ್ತು 30 ಅರ್ಧಶತಕಗಳು ಸೇರಿವೆ. ಹಾಗೆಯೇ 109 ಕ್ಯಾಚ್‌ಗಳನ್ನು ಸಹ ಹಿಡಿದಿದ್ದಾರೆ. ಬೌಲಿಂಗ್‌ನಲ್ಲೂ ಮಿಂಚಿರುವ ಅವರು 93 ಟೆಸ್ಟ್‌ಗಳಲ್ಲಿ 34 ಸರಾಸರಿಯಲ್ಲಿ 235 ವಿಕೆಟ್‌ಗಳನ್ನು ಪಡೆದಿದ್ದಾರೆ, ಇದರಲ್ಲಿ ಆರು ಬಾರಿ ಐದು ವಿಕೆಟ್‌ಗಳ ಸಾಧನೆಯೂ ಸೇರಿದೆ. ಒಟ್ಟಾರೆಯಾಗಿ, ಅವರ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ, ಸೋಬರ್ಸ್ 383 ಪಂದ್ಯಗಳನ್ನು ಆಡಿದ್ದು, 86 ಶತಕಗಳು ಸೇರಿದಂತೆ 54.87 ಸರಾಸರಿಯಲ್ಲಿ 28314 ರನ್‌ಗಳನ್ನು ಗಳಿಸಿದ್ದಾರೆ. ಹಾಗೆಯೇ 36 ಬಾರಿ ಐದು ವಿಕೆಟ್‌ಗಳು ಸೇರಿದಂತೆ 1043 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.
Published On - 9:16 pm, Fri, 17 July 26