IND vs WI: ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್: ವೆಸ್ಟ್ ಇಂಡೀಸ್ ಆಲೌಟ್
West Indies vs India, 2nd Test: ವೆಸ್ಟ್ ಇಂಡೀಸ್ ಪರ ನಾಯಕ ಕ್ರೈಗ್ ಬ್ರಾಥ್‌ವೈಟ್ (75) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.
West Indies vs India: ಪೋರ್ಟ್ ಆಫ್ ಸ್ಪೇನ್ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕರಾರುವಾಕ್ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ್ದ ವಿಂಡೀಸ್ ಪಡೆಯ ವಿರುದ್ಧ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿತ್ತು. ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (57), ರೋಹಿತ್ ಶರ್ಮಾ (80), ರವೀಂದ್ರ ಜಡೇಜಾ (61), ರವಿಚಂದ್ರನ್ ಅಶ್ವಿನ್ (56) ಅರ್ಧಶತಕ ಬಾರಿಸಿ ಮಿಂಚಿದರೆ, ವಿರಾಟ್ ಕೊಹ್ಲಿ (121) ಭರ್ಜರಿ ಶತಕ ಸಿಡಿಸಿದ್ದರು. ಪರಿಣಾಮ ಪ್ರಥಮ ಇನಿಂಗ್ಸ್ನಲ್ಲಿ ಭಾರತ ತಂಡವು 438 ರನ್ ಕಲೆಹಾಕಿತು.
ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಪರ ನಾಯಕ ಕ್ರೈಗ್ ಬ್ರಾಥ್‌ವೈಟ್ (75) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.
ಮೊಹಮ್ಮದ್ ಸಿರಾಜ್ ದಾಳಿಗೆ ತತ್ತರಿಸಿದ ವಿಂಡೀಸ್ ಪರ ಮಧ್ಯಮ ಕ್ರಮಾಂಕದಲ್ಲಿ ಅಲಿಕ್ ಅಥನಾಝ್ 37 ರನ್ಗಳಿಸಿದ್ದು 2ನೇ ಗರಿಷ್ಠ ಸ್ಕೋರ್. ಪರಿಣಾಮ ಮೊದಲ ಇನಿಂಗ್ಸ್ನಲ್ಲಿ ಕೇವಲ 255 ರನ್ಗಳಿಗೆ ಆಲೌಟ್ ಆಗುವ ಮೂಲಕ ವೆಸ್ಟ್ ಇಂಡೀಸ್ ತಂಡವು 183 ರನ್ಗಳ ಹಿನ್ನಡೆ ಅನುಭವಿಸಿತು.
ಟೀಮ್ ಇಂಡಿಯಾ ಪರ ಕರಾರುವಾಕ್ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 23.4 ಓವರ್ಗಳಲ್ಲಿ ಕೇವಲ 60 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮುಖೇಶ್ ಕುಮಾರ್ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್ ಉರುಳಿಸಿ ಉತ್ತಮ ಸಾಥ್ ನೀಡಿದರು.
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೈಗ್ ಬ್ರಾಥ್‌ವೈಟ್ (ನಾಯಕ) , ತೇಜ್ನರೈನ್ ಚಂದ್ರಪಾಲ್ , ಕಿರ್ಕ್ ಮೆಕೆಂಜಿ , ಜೆರ್ಮೈನ್ ಬ್ಲಾಕ್‌ವುಡ್ , ಅಲಿಕ್ ಅಥಾನಾಝ್ , ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್) ಜೇಸನ್ ಹೋಲ್ಡರ್ , ಅಲ್ಜಾರಿ ಜೋಸೆಫ್ , ಕೆಮರ್ ರೋಚ್ , ಜೋಮೆಲ್ ವಾರಿಕನ್ , ಶಾನನ್ ಗೇಬ್ರಿಯಲ್.
ಇದನ್ನೂ ಓದಿ: Team India: ಒಟ್ಟು 47 ಪ್ಲೇಯರ್ಸ್: ಟೀಮ್ ಇಂಡಿಯಾದಿಂದ 32 ಆಟಗಾರರು ಔಟ್..!
ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ರೋಹಿತ್ ಶರ್ಮಾ (ನಾಯಕ) , ಶುಭಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ರವಿಚಂದ್ರನ್ ಅಶ್ವಿನ್ , ಜಯದೇವ್ ಉನದ್ಕತ್ , ಮುಖೇಶ್ ಕುಮಾರ್ , ಮೊಹಮ್ಮದ್ ಸಿರಾಜ್.