AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs AFG: ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿಂದು ಶ್ರೀಲಂಕಾ-ಅಫ್ಘಾನಿಸ್ತಾನ ಮುಖಾಮುಖಿ

Asia Cup 2022: ಇಂದು ಸೂಪರ್ 4 ಹಂತದ ಮೊದಲ ಪಂದ್ಯ ನಡೆಯಲಿದ್ದು ದಸನ್ ಶನಕಾ ನಾಯಕತ್ವದ ಶ್ರೀಲಂಕಾ ಹಾಗೂ ಮೊಹಮ್ಮದ್ ನಬಿ ನೇತೃತ್ವದ ಅಫ್ಘಾನಿಸ್ತಾನ (Sri Lanka vs Afghanistan) ತಂಡ ಮುಖಾಮುಖಿ ಆಗಲಿದೆ.

SL vs AFG: ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿಂದು ಶ್ರೀಲಂಕಾ-ಅಫ್ಘಾನಿಸ್ತಾನ ಮುಖಾಮುಖಿ
SL vs AFG Asia Cup 2022
TV9 Web
| Edited By: |

Updated on:Sep 03, 2022 | 9:42 AM

Share

ಏಷ್ಯಾಕಪ್ 2022 (Asia Cup 2022) ಟೂರ್ನಿಯ ಲೀಗ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು, ಇಂದಿನಿಂದ ಸೂಪರ್ 4 ಕದನ ಶುರುವಾಗಲಿದೆ. ಭಾರತ, ಪಾಕಿಸ್ತಾನ (India vs Pakistan), ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಸೂಪರ್ 4 ಹಂತಕ್ಕೆ ತೇರ್ಗಡೆಯಾಗಿದೆ. ಇಲ್ಲಿ ಅಗ್ರ ಸ್ಥಾನ ಪಡೆಯುವ ಮೊದಲ ಎರಡು ತಂಡ ಫೈನಲ್​ನಲ್ಲಿ ಸೆಣೆಸಾಟ ನಡೆಸಲಿದೆ. ಇಂದು ಸೂಪರ್ 4 ಹಂತದ ಮೊದಲ ಪಂದ್ಯ ನಡೆಯಲಿದ್ದು ದಸನ್ ಶನಕಾ ನಾಯಕತ್ವದ ಶ್ರೀಲಂಕಾ ಹಾಗೂ ಮೊಹಮ್ಮದ್ ನಬಿ ನೇತೃತ್ವದ ಅಫ್ಘಾನಿಸ್ತಾನ (Sri Lanka vs Afghanistan) ತಂಡ ಮುಖಾಮುಖಿ ಆಗಲಿದೆ.

ಲೀಗ್​ನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಜಯ ಕಂಡಿರುವ ಅಫ್ಘಾನ್ ಗೆಲ್ಲುವ ನೆಚ್ಚಿನ ತಂಡವಾಗಿದೆ. ಇತ್ತ ಬಾಂಗ್ಲಾ ವಿರುದ್ಧ ರೋಚಕ ಗೆಲುವು ಸಾಧಿಸಿ ಸೂಪರ್ 4 ಗೆ ಲಗ್ಗೆಯಿಟ್ಟಿರುವ ಸಿಂಹಳೀಯರು ಯಾವುದೇ ಕ್ಷಣದಲ್ಲಿ ಪುಟಿದೇಳುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

ಲೀಗ್‌ ಹಂತದಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ಮೂಖಾಮುಖಿ ಆಗಿತ್ತು. ಇದರಲ್ಲಿ ಅಫ್ಘಾನ್ ತಂಡ ಬರೋಬ್ಬರಿ 8 ವಿಕೆಟ್​ಗಳ ಅಮೋಘ ಗೆಲುವು ಕಂಡಿತ್ತು. ಬೌಲಿಂಗ್‌ಬ್ಯಾಟಿಂಗ್‌ನಲ್ಲಿ ಭರ್ಜರಿ ಆಟವಾಡಿದ್ದ ಅಫ್ಘಾನಿಸ್ತಾನ ಶ್ರೀಲಂಕಾವನ್ನು 105 ರನ್ನಿಗೆ ಆಲೌಟ್ ಮಾಡಿತ್ತು. ನಬಿ ಪಡೆ ಕೇವಲ 2 ವಿಕೆಟಿಗೆ 106 ರನ್‌ ಗಳಿಸಿ ಗೆಲುವು ದಾಖಲಿಸಿತ್ತು.

ಇದನ್ನೂ ಓದಿ
Image
Asia Cup 2022 Super 4: ಏಷ್ಯಾಕಪ್​ನಲ್ಲಿ ಇಂದಿನಿಂದ ಸೂಪರ್ 4 ಕದನ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
Image
PAK vs HKG: 38 ರನ್​ಗಳಿಗೆ ಹಾಂಗ್​ ಕಾಂಗ್ ಆಲೌಟ್; ಸೂಪರ್ ಸಂಡೇಯಲ್ಲಿ ಭಾರತಕ್ಕೆ ಪಾಕ್ ಎದುರಾಳಿ..!
Image
T20 World Cup: ರಾಯ್ ಬಳಿಕ ಇಂಗ್ಲೆಂಡ್ ತಂಡದ ಮತ್ತೊಬ್ಬ ಸ್ಫೋಟಕ ಬ್ಯಾಟರ್ ಟಿ20 ವಿಶ್ವಕಪ್‌ನಿಂದ ಔಟ್..!
Image
T20 World Cup: ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡದಿಂದ ಕೆಎಲ್ ರಾಹುಲ್ ಔಟ್?

ಅಫ್ಘಾನ್ ತಂಡಕ್ಕೆ ಮುಜೀಬ್ ಉರ್ ರೆಹ್ಮಾನ್ ಹಾಗೂ ರಶೀದ್ ಖಾನ್ ಬೌಲಿಂಗ್ ವಿಭಾಗದಲ್ಲಿ ದೊಡ್ಡ ಆಸ್ತಿ. ಬ್ಯಾಟಿಂಗ್​ನಲ್ಲೂ ರಶೀದ್ ಅಬ್ಬರಿಸಬಲ್ಲರು. ಹಜರತುಲ್ಲಾ ಝಜೈ ಹಾಗೂ ರಹಮಾನುಲ್ಲಾ ಗುರ್ಬಾಜ್ ಬೊಂಬಾಟ್ ಫಾರ್ಮ್​ನಲ್ಲಿದ್ದು ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಇಬ್ರಾಹಿಂ ಝದ್ರಾನ್, ನಜೀಬುಲ್ಲಾ ಝದ್ರಾನ್, ಕರೀಮ್ ಜನತ್, ಮೊಹಮ್ಮದ್ ನಬಿ ಅವರಿದ್ದು ಬಲಿಷ್ಠವಾಗಿದೆ.

ಇತ್ತ ಏಷ್ಯಾಕಪ್ ಟೂರ್ನಿಯಲ್ಲಿ ಐದು ಬಾರಿ ಟ್ರೋಫಿ ಗೆದ್ದು ಎರಡನೇ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ಶ್ರೀಲಂಕಾದಲ್ಲಿ ಈಗ ಮೊದಲಿನ ಖದರ್ ಇಲ್ಲ ಎಂಬುದು ಸರಿಯಾಗಿ ಗೋಚರಿಸುತ್ತಿದೆ. ಆದರೆ, ಕಳೆದ ಪಂದ್ಯದಲ್ಲಿ ಕಂಡ ಗೆಲುವು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಭನುಕಾ ರಾಜಪಕ್ಷ ಹಾಗೂ ನಾಯಕ ದಸುನ್‌ ಶನಕ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದಾರೆ. ಪತುಮ್‌ ನಿಸಂಕ, ವಾನಿಂದು ಹಸರಂಗ, ಮಹೀಶ ತೀಕ್ಷಣ ರಂತಹ ಸ್ಟಾರ್‌ ಆಟಗಾರರು ಇಂದು ಮಿಂಚಲೇ ಬೇಕಾದ ಒತ್ತಡದಲ್ಲಿದ್ದಾರೆ.

ಸಂಭಾವ್ಯ ಪ್ಲೇಯಿಂಗ್ XI:

ಅಫ್ಘಾನಿಸ್ತಾನ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ನಜೀಬುಲ್ಲಾ ಝದ್ರಾನ್, ಕರೀಮ್ ಜನತ್, ಮೊಹಮ್ಮದ್ ನಬಿ (ನಾಯಕ), ರಶೀದ್ ಖಾನ್, ಅಜ್ಮತುಲ್ಲಾ ಒಮರ್ಝೈ, ನವೀನ್–ಉಲ್–ಹಕ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ.

ಶ್ರೀಲಂಕಾ: ದನುಷ್ಕ ಗುಣತಿಲಕ, ಪತುಮ್‌ ನಿಸಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭನುಕಾ ರಾಜಪಕ್ಷ, ದಸುನ್‌ ಶನಕ (ನಾಯಕ), ವಾನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ ತೀಕ್ಷಣ, ದಿಲ್ಶನ್ ಮಧುಶಂಕ, ಮತೀಶ ಪತಿರಣ.

Published On - 9:42 am, Sat, 3 September 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ