AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs BAN: ಬಾಂಗ್ಲಾ ಪಡೆಯನ್ನು ಮಕಾಡೆ ಮಲಗಿಸಿದ ಲಂಕನ್ನರು

SL vs BAN: ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯು ಮುಕ್ತಾಯಗೊಂಡಿದೆ. ಕೊಲಂಬೊದಲ್ಲಿ ನಡೆದ ಈ ಸರಣಿಯಲ್ಲಿ ಆತಿಥೇಯ ಶ್ರೀಲಂಕಾ 1-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಲಂಕಾ ಪಡೆಯು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ 4ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ.

SL vs BAN: ಬಾಂಗ್ಲಾ ಪಡೆಯನ್ನು ಮಕಾಡೆ ಮಲಗಿಸಿದ ಲಂಕನ್ನರು
Sri Lanka
ಝಾಹಿರ್ ಯೂಸುಫ್
|

Updated on: Jun 28, 2025 | 1:06 PM

Share

ಬಾಂಗ್ಲಾದೇಶ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವು ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಮೊದಲ ಇನಿಂಗ್ಸ್​ನಲ್ಲಿ ಬಾಂಗ್ಲಾ 241 ರನ್​ಗಳಿಸಿ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಶ್ರೀಲಂಕಾ ಪರ ಆರಂಭಿಕ ದಾಂಡಿಗ ಪಾತುಮ್ ನಿಸ್ಸಂಕಾ 158 ರನ್​​ಗಳ ಭರ್ಜರಿ ಇನಿಂಗ್ಸ್ ಆಡಿದರು.

ಆ ಬಳಿಕ ಬಂದ ದಿನೇಶ್ ಚಂಡಿಮಲ್ 93 ರನ್​ಗಳಿಸಿದರೆ, ಕುಸಾಲ್ ಮೆಂಡಿಸ್ 84 ರನ್​ ಬಾರಿಸಿದರು. ಈ ಮೂಲಕ ಶ್ರೀಲಂಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ 458 ರನ್​ ಕಲೆಹಾಕಿತು.

300 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು ಪ್ರಭಾತ್ ಜಯಸೂರ್ಯರ ಸ್ಪಿನ್ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದ್ದಾರೆ. ಒಬ್ಬರ ಹಿಂದೆ ಒಬ್ಬರಂತೆ ವಿಕೆಟ್ ಒಪ್ಪಿಸಿದ ಬಾಂಗ್ಲಾ ಬ್ಯಾಟರ್​ಗಳು ಅಂತಿಮವಾಗಿ 133 ರನ್​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಶ್ರೀಲಂಕಾ ತಂಡವು ಇನಿಂಗ್ಸ್ ಹಾಗೂ 78 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಶ್ರೀಲಂಕಾ ಪರ ಪ್ರಭಾತ್ ಜಯಸೂರ್ಯ 18 ಓವರ್​ಗಳಲ್ಲಿ 58 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡವು 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿಸುವ ಮೂಲಕ ಶ್ರೀಲಂಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ 4ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ.

ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ , ಲಹಿರು ಉದಾರ , ದಿನೇಶ್ ಚಂಡಿಮಲ್ , ಕಮಿಂದು ಮೆಂಡಿಸ್ , ಧನಂಜಯ ಡಿ ಸಿಲ್ವಾ (ನಾಯಕ) , ಕುಸಾಲ್ ಮೆಂಡಿಸ್ ( ವಿಕೆಟ್ ಕೀಪರ್ ) , ಸೋನಾಲ್ ದಿನುಶಾ , ತಾರಿಂದು ರತ್ನಾಯಕೆ , ವಿಶ್ವ ಫೆರ್ನಾಂಡೋ , ಪ್ರಭಾತ್ ಜಯಸೂರ್ಯ , ಅಸಿತ ಫರ್ನಾಂಡೋ.

ಇದನ್ನೂ ಓದಿ: 6,6,6,6,6,6,6,6: ಪೂರನ್ ಪವರ್​ಫುಲ್ ಶತಕ

ಬಾಂಗ್ಲಾದೇಶ್ ಪ್ಲೇಯಿಂಗ್ 11: ಶಾದ್ಮನ್ ಇಸ್ಲಾಂ , ಅನಾಮುಲ್ ಹಕ್ , ಮೊಮಿನುಲ್ ಹಕ್ , ನಜ್ಮುಲ್ ಹೊಸೈನ್ ಶಾಂತೊ (ನಾಯಕ) , ಮುಶ್ಫಿಕರ್ ರಹೀಮ್ , ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ಮೆಹಿದಿ ಹಸನ್ ಮಿರಾಜ್ , ನಯೀಮ್ ಹಸನ್ , ತೈಜುಲ್ ಇಸ್ಲಾಂ , ಎಬಾಡೋತ್ ಹೊಸೈನ್ , ನಹಿದ್ ರಾಣಾ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ