SL vs NZ: ಕಿವೀಸ್ ಮೇಲೆ ಲಂಕನ್ನರ ಸವಾರಿ: ಸರಣಿ ಕ್ಲೀನ್ ಸ್ವೀಪ್

Sri Lanka vs New Zealand: ನ್ಯೂಝಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಶ್ರೀಲಂಕಾ ತಂಡವು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ 63 ರನ್​ಗಳ ಜಯ ಸಾಧಿಸಿದ್ದ ಲಂಕಾ ಪಡೆಯು ದ್ವಿತೀಯ ಟೆಸ್ಟ್​ನಲ್ಲಿ ಇನಿಂಗ್ಸ್​ನೊಂದಿಗೆ 154 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

SL vs NZ: ಕಿವೀಸ್ ಮೇಲೆ ಲಂಕನ್ನರ ಸವಾರಿ: ಸರಣಿ ಕ್ಲೀನ್ ಸ್ವೀಪ್
SL vs NZ
Follow us
ಝಾಹಿರ್ ಯೂಸುಫ್
|

Updated on:Sep 29, 2024 | 1:13 PM

ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಶ್ರೀಲಂಕಾ ತಂಡ ಅಮೋಘ ಗೆಲುವು ದಾಖಲಿಸಿದೆ. ಗಾಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡದ ನಾಯಕ ನಾಯಕ ಧನಂಜಯ ಡಿಸಿಲ್ವಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆಡಿದ ಶ್ರೀಲಂಕಾ ಪರ ದಿನೇಶ್ ಚಂಡಿಮಲ್ (116), ಏಂಜೆಲೊ ಮ್ಯಾಥ್ಯೂಸ್ (88) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಇನ್ನು ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಮಿಂದು ಮೆಂಡಿಸ್ 250 ಎಸೆತಗಳಲ್ಲಿ 16 ಫೋರ್ ಹಾಗೂ 4 ಸಿಕ್ಸ್​ಗಳೊಂದಿಗೆ ಅಜೇಯ 182 ರನ್ ಬಾರಿಸಿದರು. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಕುಸಾಲ್ ಮೆಂಡಿಸ್ 109 ಎಸೆತಗಳಲ್ಲಿ 106 ರನ್​ ಕಲೆಹಾಕಿದರು. ಈ ಮೂಲಕ ಶ್ರೀಲಂಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 602 ರನ್ ಕಲೆಹಾಕಿ ಡಿಕ್ಲೇರ್ ಘೋಷಿಸಿತು.

ಎರಡಂಕಿಗೆ ನ್ಯೂಝಿಲೆಂಡ್ ಆಲೌಟ್:

602 ರನ್​ಗಳ ಪ್ರಥಮ ಇನಿಂಗ್ಸ್​ಗೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ನ್ಯೂಝಿಲೆಂಡ್​ ತಂಡವು ಯಾವುದೇ ಹಂತದಲ್ಲೂ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಆರಂಭಿಕರಾದ ಟಾಮ್ ಲಾಥಮ್ (2) ಹಾಗೂ ಡೆವೊನ್ ಕಾನ್ವೆ (9) ಬೇಗನೆ ವಿಕೆಟ್ ಒಪ್ಪಿಸಿದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೇನ್ ವಿಲಿಯಮ್ಸನ್ 7 ರನ್​ಗಳಿಸಿ ಔಟಾದರು.

ಇದರ ಬೆನ್ನಲ್ಲೇ ಅಜಾಝ್ ಪಟೇಲ್ (8) ಹಾಗೂ ರಚಿನ್ ರವೀಂದ್ರ (10) ಕೂಡ ವಿಕೆಟ್ ಕೈಚೆಲ್ಲಿದರು. ಇನ್ನು ಡೇರಿಲ್ ಮಿಚೆಲ್ (13), ಟಾಮ್ ಬ್ಲಂಡೆಲ್ (1) ಹಾಗೂ ಗ್ಲೆನ್ ಫಿಲಿಪ್ಸ್ (0) ವಿಕೆಟ್ ಕಬಳಿಸುವ ಮೂಲಕ ಪ್ರಭಾತ್ ಜಯಸೂರ್ಯ 5 ವಿಕೆಟ್​ಗಳ ಸಾಧನೆ ಮಾಡಿದರು.

ಈ ಹಂತದಲ್ಲಿ ಮಿಚೆಲ್ ಸ್ಯಾಂಟ್ನರ್ 51 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 29 ರನ್ ಬಾರಿಸಿದರು. ಆದರೆ ಮತ್ತೊಂದೆಡೆ ಪ್ರಭಾತ್ ಜಯಸೂರ್ಯ ಸ್ಪಿನ್ ಮೋಡಿಯೊಂದಿಗೆ ಟಿಮ್ ಸೌಥಿ (2) ಗೆ ಪೆವಿಲಿಯನ್ ಹಾದಿ ತೋರಿಸಿದರು. ಈ ಮೂಲಕ ಶ್ರೀಲಂಕಾ ನ್ಯೂಝಿಲೆಂಡ್ ತಂಡವನ್ನು ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 88 ರನ್​ಗಳಿಗೆ ಆಲೌಟ್ ಮಾಡಿತು. ಶ್ರೀಲಂಕಾ ಪರ 18 ಓವರ್​ಗಳನ್ನು ಎಸೆದ ಪ್ರಭಾತ್ ಜಯಸೂರ್ಯ 6 ಮೇಡನ್​ಗಳೊಂದಿಗೆ ಕೇವಲ 42 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು.

ಫಾಲೋಆನ್ ಹೇರಿದ ಆತಿಥೇಯರು:

ಪ್ರಥಮ ಇನಿಂಗ್ಸ್​ನಲ್ಲಿ 514 ರನ್​ಗಳ ಹಿನ್ನಡೆ ಹೊಂದಿದ್ದ ನ್ಯೂಝಿಲೆಂಡ್ ಮೇಲೆ ಶ್ರೀಲಂಕಾ ಫಾಲೋಆನ್ ಹೇರಿತು. ಅದರಂತೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಕಿವೀಸ್ ಪರ ಡೆವೊನ್ ಕಾನ್ವೆ (61) ಹಾಗೂ ಕೇನ್ ವಿಲಿಯಮ್ಸನ್ (46) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಟಾಮ್ ಬ್ಲಂಡೆಲ್ 60 ರನ್ ಬಾರಿಸಿದರೆ, ಗ್ಲೆನ್ ಫಿಲಿಪ್ಸ್ 78 ರನ್​ ಚಚ್ಚಿದರು.

ಇತ್ತ ಫಿಲಿಪ್ಸ್ ಹಾಗೂ ಬ್ಲಂಡೆಲ್ ವಿಕೆಟ್ ಸಿಗುತ್ತಿದ್ದಂತೆ ಮತ್ತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಶ್ರೀಲಂಕಾ ಬೌಲರ್​ಗಳು ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ನ್ಯೂಝಿಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 360 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಶ್ರೀಲಂಕಾ ತಂಡವು ಇನಿಂಗ್ಸ್ ಹಾಗೂ 154 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಶ್ರೀಲಂಕಾ ಪರ ಮೊದಲ ಇನಿಂಗ್ಸ್​ನಲ್ಲಿ ಪ್ರಭಾತ್ ಜಯಸೂರ್ಯ 6 ವಿಕೆಟ್ ಕಬಳಿಸಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ ನಿಶಾನ್ ಪೀರಿಸ್ 6 ವಿಕೆಟ್ ಪಡೆದು ಮಿಂಚಿದರು.

ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ , ದಿಮುತ್ ಕರುಣಾರತ್ನೆ , ದಿನೇಶ್ ಚಂಡಿಮಲ್ , ಏಂಜೆಲೊ ಮ್ಯಾಥ್ಯೂಸ್ , ಕಮಿಂದು ಮೆಂಡಿಸ್ , ಧನಂಜಯ ಡಿ ಸಿಲ್ವ (ನಾಯಕ) , ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್) , ಮಿಲನ್ ಪ್ರಿಯನಾಥ್ ರಥನಾಯಕೆ , ಪ್ರಭಾತ್ ಜಯಸೂರ್ಯ , ನಿಶಾನ್ ಪೀರಿಸ್ , ಅಸಿತ ಫೆರ್ನಾಂಡೋ.

ಇದನ್ನೂ ಓದಿ: IPL 2025: ಏನಿದು RTM ಆಯ್ಕೆ: ಇದನ್ನು ಬಳಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲಾಥಮ್ , ಡೆವೊನ್ ಕಾನ್ವೇ , ಕೇನ್ ವಿಲಿಯಮ್ಸನ್ , ರಚಿನ್ ರವೀಂದ್ರ , ಡೇರಿಲ್ ಮಿಚೆಲ್ , ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ಮಿಚೆಲ್ ಸ್ಯಾಂಟ್ನರ್ , ಟಿಮ್ ಸೌಥಿ (ನಾಯಕ) , ಅಜಾಝ್ ಪಟೇಲ್ , ವಿಲಿಯಂ ಒರೂರ್ಕೆ.

Published On - 1:13 pm, Sun, 29 September 24

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ