AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ ಆಟಗಾರರಿಗೆ ಎಚ್ಚರಿಕೆ: ಸ್ಮಾರ್ಟ್​ ಗ್ಲಾಸ್ ನಿಷೇಧ!

IPL 2026 Updates: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್​) ಸ್ಮಾರ್ಟ್ ಗ್ಲಾಸ್ ಹಾಗೂ ಹೈ-ಟೆಕ್ ಗ್ಲಾಸ್​ಗಳನ್ನು ನಿಷೇಧಿಸಲಾಗಿದೆ. ಈ ನಿಷೇಧದೊಂದಿಗೆ ಐಪಿಎಲ್​ನಲ್ಲಿ ಇನ್ಮುಂದೆ ಆಟಗಾರರು ಹಾಗೂ ಸಿಬ್ಬಂದಿಗಳು ರೆಕಾರ್ಡಿಂಗ್ ಗ್ಲಾಸ್​ಗಳನ್ನು ಬಳಸುವಂತಿಲ್ಲ. ಒಂದು ವೇಳೆ ಬಳಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ. 

ಐಪಿಎಲ್​ ಆಟಗಾರರಿಗೆ ಎಚ್ಚರಿಕೆ: ಸ್ಮಾರ್ಟ್​ ಗ್ಲಾಸ್ ನಿಷೇಧ!
IPLImage Credit source: Google
ಝಾಹಿರ್ ಯೂಸುಫ್
|

Updated on:May 29, 2026 | 11:08 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಸಮಗ್ರತೆ ಮತ್ತು ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಬಿಸಿಸಿಐ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರದಂತೆ ಇನ್ಮುಂದೆ ಐಪಿಎಲ್ ಆಟಗಾರರು ಹಾಗೂ ಸಿಬ್ಬಂದಿಗಳು ಕ್ರೀಡಾಂಗಣದ ಪ್ರದೇಶಗಳಲ್ಲಿ ಯಾವುದೇ ರೀತಿಯ ಸ್ಮಾರ್ಟ್ ಗ್ಲಾಸ್ ಬಳಸುವಂತಿಲ್ಲ. ಪ್ರಸ್ತುತ ಟೂರ್ನಿಯಿಂದಲೇ ಸ್ಮಾರ್ಟ್ ಗ್ಲಾಸ್  ಅಥವಾ  ಹೈ-ಟೆಕ್ ಗ್ಲಾಸ್ ಧರಿಸದಂತೆ ಆಟಗಾರರಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಹೀಗಾಗಿ ಇನ್ಮುಂದೆ ಐಪಿಎಲ್​ ವೇಳೆ ಸ್ಮಾರ್ಟ್ ಗ್ಲಾಸ್ ಧರಿಸಲು ಅವಕಾಶ ಇರುವುದಿಲ್ಲ.

ಈ ನಿಷೇಧಕ್ಕೆ ಕಾರಣವೇನು?

  • ಸ್ಮಾರ್ಟ್ ಗ್ಲಾಸ್​ಗಳ ಮೂಲಕ ರಹಸ್ಯವಾಗಿ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬಹುದು. ಹಾಗೆಯೇ ಇಂತಹ ಗ್ಲಾಸ್​ಗಳ ಮೂಲಕ ತಂಡದ ಪ್ಲ್ಯಾನ್​ಗಳು ಸೋರಿಕೆಯಾಗಬಹುದು.
  • ಲೈವ್ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಅಥವಾ ಸ್ಪಾಟ್ ಫಿಕ್ಸಿಂಗ್ ದಂಧೆಗೆ ಇಂತಹ ಸ್ಮಾರ್ಟ್ ಗ್ಲಾಸ್​ ಬಳಕೆಯಾಗುವ ಅಪಾಯವಿದೆ.
  • ವಿಶೇಷ ತಂತ್ರಜ್ಞಾನ ಕಂಪೆನಿಗಳು ಆಟಗಾರರಿಗೆ ಮತ್ತು ತಂಡದ ಸಿಬ್ಬಂದಿಗಳಿಗೆ ವಿಶೇಷ ಸ್ಮಾರ್ಟ್​ ಗ್ಲಾಸ್ ಮಾರಾಟ ಮಾಡಲು ಪ್ರಯತ್ನಿಸುತ್ತಿವೆ ಎಂಬ ಮಾಹಿತಿಯೊಂದು ಬಿಸಿಸಿಐಗೆ ಸಿಕ್ಕಿದೆ.

ಈ ಎಲ್ಲಾ ಕಾರಣಗಳಿಂದಾಗಿ ಬಿಸಿಸಿಐ ಇಂಡಿಯನ್ ಪ್ರೀಮಿಯರ್ ಲೀಗ್​ ವೇಳೆ ಸ್ಮಾರ್ಟ್ ಗ್ಲಾಸ್ ಬಳಕೆಯನ್ನು ನಿಷೇಧಿಸಿದೆ.

ಕಠಿಣ ಕ್ರಮದ ಎಚ್ಚರಿಕೆ:

ಈ ನಿಯಮವನ್ನು ಉಲ್ಲಂಘಿಸುವ ಆಟಗಾರರು ಅಥವಾ ಸಿಬ್ಬಂದಿಗೆ ಭಾರಿ ಮೊತ್ತದ ದಂಡ ಮತ್ತು ತಕ್ಷಣದ ಅಮಾನತು ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಬಿಸಿಸಿಐ ಎಚ್ಚರಿಕೆ ನೀಡಿದೆ. ಅಲ್ಲದೆ ಪ್ರಸ್ತುತ ನಡೆಯುತ್ತಿರುವ ಕ್ವಾಲಿಫೈಯರ್-2 ಹಾಗೂ ಫೈನಲ್ ಪಂದ್ಯಗಳ ವೇಳೆ ಸ್ಮಾರ್ಟ್ ಗ್ಲಾಸ್ ಹಾಗೂ ಹೈ-ಟೆಕ್ ಗ್ಲಾಸ್​ಗಳನ್ನು ಬಳಸದಂತೆ ಸೂಚಿಸಲಾಗಿದೆ.

ಮೊಬೈಲ್ ಬಳಸುವುದು ನಿಷೇಧ:

ಆರ್​ಸಿಬಿ ಮತ್ತು ಆರ್​ಆರ್​ ನಡುವಣ ಪಂದ್ಯದ ವೇಳೆ ಡಗೌಟ್​ನಲ್ಲಿ ಮೊಬೈಲ್ ಬಳಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಪಂದ್ಯದ ವೇಳೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ.

ಹಾಗೆಯೇ ಪಂದ್ಯದ ವೇಳೆ ಫ್ರಾಂಚೈಸಿ ಮಾಲೀಕರು ಡಗೌಟ್​ಗೆ ಪ್ರವೇಶಿಸುವುದನ್ನು, ಮ್ಯಾಚ್ ನಡುವೆ ಮೈದಾನಕ್ಕೆ ಎಂಟ್ರಿ ಕೊಡುವುದನ್ನು ಹಾಗೂ ಆಟಗಾರರನ್ನು ಮಾತನಾಡಿಸುವುದನ್ನು ಬಿಸಿಸಿಐ ನಿಷೇಧಿಸಿದೆ.

ಇದನ್ನೂ ಓದಿ: ವಿಶ್ವ ದಾಖಲೆ… ಪೊಲಾರ್ಡ್​ಗೆ​ 652 ಇನಿಂಗ್ಸ್, ವೈಭವ್​ಗೆ ಜಸ್ಟ್​ 33 ಇನಿಂಗ್ಸ್​!

ಇದರ ಜೊತೆಗೆ ಇದೀಗ ಭದ್ರತೆಯನ್ನು ಕಾಪಾಡಿಕೊಳ್ಳಲು ಹಾಗೂ ಐಪಿಎಲ್​ನ ಪಾರದರ್ಶಕತೆಯನ್ನು ಹೆಚ್ಚಿಸಲು ಇಂಡಿಯನ್ ಪ್ರೀಮಿಯರ್ ಲೀಗ್ ಮಂಡಳಿ ಸ್ಮಾರ್ಟ್ ಗ್ಲಾಸ್ ಬಳಕೆಯನ್ನು ನಿಷೇಧಿಸಿದೆ.

Published On - 11:06 am, Fri, 29 May 26

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು