INDW vs SAW: ಭರ್ಜರಿ ಶತಕ ಸಿಡಿಸಿದ ಶಫಾಲಿ, ಸ್ಮೃತಿ ಮಂಧಾನ

Smriti Mandhana and Shafali Varma: ಭಾರತ ಮಹಿಳಾ ತಂಡದ ಆರಂಭಿಕರಾದ ಸ್ಮತಿ ಮಂಧಾನ ಹಾಗೂ ಶಫಾಲಿ ವರ್ಮಾ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಅಬ್ಬರದ ಬ್ಯಾಟಿಂಗ್​ನೊಂದಿಗೆ ಮೊದಲ ವಿಕೆಟ್​ಗೆ 292 ರನ್​ಗಳ ಜೊತೆಯಾಟವಾಡಿದ್ದಾರೆ.

INDW vs SAW: ಭರ್ಜರಿ ಶತಕ ಸಿಡಿಸಿದ ಶಫಾಲಿ, ಸ್ಮೃತಿ ಮಂಧಾನ
Smriti Mandhana - Shafali Varma
Follow us
ಝಾಹಿರ್ ಯೂಸುಫ್
|

Updated on:Jun 28, 2024 | 2:56 PM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕರಾದ ಶಫಾಲಿ ವರ್ಮಾ (Shafali Verma) ಹಾಗೂ ಸ್ಮತಿ ಮಂಧಾನ (Smriti Mandhana) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ನಾಯಕಿಯ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು. ಅಲ್ಲದೆ ಕೇವಲ 40 ಓವರ್​ಗಳಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 200ರ ಗಡಿದಾಟಿಸಿದರು.

ಅತ್ತ ಟೀಮ್ ಇಂಡಿಯಾ 200 ರನ್​ಗಳ ಗಡಿದಾಟುತ್ತಿದ್ದಂತೆ ಇತ್ತ 113 ಎಸೆತಗಳಲ್ಲಿ ಶಫಾಲಿ ವರ್ಮಾ ಶತಕ ಪೂರೈಸಿದರು. ಇದರ ಬೆನ್ನಲ್ಲೇ 122 ಎಸೆತಗಳಲ್ಲಿ ಸ್ಮೃತಿ ಮಂಧಾನ ಕೂಡ ಭರ್ಜರಿ ಶತಕ ಸಿಡಿಸಿದರು.

ಶಫಾಲಿ ವರ್ಮಾರ ಚೊಚ್ಚಲ ಟೆಸ್ಟ್ ಶತಕದ ಸಂಭ್ರಮ:

ಇನ್ನು ಶತಕದ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿ 50 ಓವರ್​ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಮೊತ್ತವನ್ನು 271 ಕ್ಕೆ ತಂದು ನಿಲ್ಲಿಸಿದರು. ಈ ಹಂತದಲ್ಲಿ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ ಸ್ಮೃತಿ 161 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 27 ಫೋರ್​ಗಳೊಂದಿಗೆ 149 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಮೊದಲ ವಿಕೆಟ್​ನ 292 ರನ್​ಗಳ ಜೊತೆಯಾಟ ಅಂತ್ಯವಾಯಿತು.

ಸದ್ಯ ಕ್ರೀಸ್​ನಲ್ಲಿ ಶಫಾಲಿ ವರ್ಮಾ (148) ಹಾಗೂ ಶುಭಾ ಸತೀಶ್ (5) ಬ್ಯಾಟಿಂಗ್ ಮುಂದುವರೆಸಿದ್ದು, 54 ಓವರ್​ಗಳ ಮುಕ್ತಾಯದ ವೇಳೆ ಟೀಮ್ ಇಂಡಿಯಾ 1 ವಿಕೆಟ್ ಕಳೆದುಕೊಂಡು 304 ರನ್ ಕಲೆಹಾಕಿದೆ.

ಭಾರತ ಪ್ಲೇಯಿಂಗ್ 11: ಸ್ಮೃತಿ ಮಂಧಾನ , ಶಫಾಲಿ ವರ್ಮಾ , ಶುಭಾ ಸತೀಶ್ , ಹರ್ಮನ್​ಪ್ರೀತ್ ಕೌರ್ (ನಾಯಕಿ) , ಜೆಮಿಮಾ ರೊಡ್ರಿಗಸ್ , ರಿಚಾ ಘೋಷ್ (ವಿಕೆಟ್ ಕೀಪರ್) , ದೀಪ್ತಿ ಶರ್ಮಾ , ಪೂಜಾ ವಸ್ತ್ರಾಕರ್ , ಸ್ನೇಹ ರಾಣಾ , ರೇಣುಕಾ ಠಾಕೂರ್ ಸಿಂಗ್ , ರಾಜೇಶ್ವರಿ ಗಾಯಕ್ವಾಡ್.

ಇದನ್ನೂ ಓದಿ: ಬಾಬರ್ ಆಝಂ ದಾಖಲೆ ಉಡೀಸ್: ರೋಹಿತ್ ಶರ್ಮಾ ವಿಶ್ವದ ನಂಬರ್ 1 ಕ್ಯಾಪ್ಟನ್

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಲಾರಾ ವೊಲ್ವಾರ್ಡ್ಟ್ (ನಾಯಕಿ), ಸುನೆ ಲೂಸ್, ಅನ್ನೆಕೆ ಬಾಷ್, ಮಾರಿಝನ್ನೆ ಕಪ್, ಡೆಲ್ಮಿ ಟಕರ್, ನಾಡಿನ್ ಡಿ ಕ್ಲರ್ಕ್, ಆನ್ನೆರಿ ಡೆರ್ಕ್ಸೆನ್, ಸಿನಾಲೊ ಜಫ್ತಾ (ವಿಕೆಟ್ ಕೀಪರ್), ಮಸಾಬಟಾ ಕ್ಲಾಸ್, ನಾನ್ಕುಲುಲೆಕೊ ಮ್ಲಾಬಾ, ತುಮಿ ಸೆಖುಖುನೆ.

Published On - 1:39 pm, Fri, 28 June 24

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ