Smriti Mandhana Fastest Century: ಅಬ್ಬರ ಸಿಡಿಲಬ್ಬರ.. ಆಸ್ಟ್ರೇಲಿಯಾ ವಿರುದ್ಧ ಮಿಂಚಿನ ಶತಕ ಸಿಡಿಸಿದ ಸ್ಮೃತಿ ಮಂಧಾನ

Smriti Mandhana Fastest Century: ದೆಹಲಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಸ್ಮೃತಿ ಮಂಧಾನ ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗದ ಶತಕ ಸಿಡಿಸಿದ್ದಾರೆ. 50 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿ, ಅವರು ಬೆತ್ ಮೂನಿ ಅವರ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.

Smriti Mandhana Fastest Century: ಅಬ್ಬರ ಸಿಡಿಲಬ್ಬರ.. ಆಸ್ಟ್ರೇಲಿಯಾ ವಿರುದ್ಧ ಮಿಂಚಿನ ಶತಕ ಸಿಡಿಸಿದ ಸ್ಮೃತಿ ಮಂಧಾನ
Smriti Mandhana

Updated on: Sep 20, 2025 | 8:16 PM

ದೆಹಲಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ (India Women vs Australia Women) ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಏಕದಿನ ಇತಿಹಾಸದಲ್ಲಿ ಅತಿವೇಗದ ಶತಕ ಸಿಡಿಸಿದ್ದಾರೆ. ಆಸ್ಟ್ರೇಲಿಯಾ ನೀಡಿರುವ 412 ರನ್​ಗಳ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿರುವ ಸ್ಮೃತಿ ಅತೀ ವೇಗದ ಏಕದಿನ ಅರ್ಧಶತಕದ ಜೊತೆಗೆ ಅತೀ ವೇಗದ ಶತಕ ಸಿಡಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಕೇವಲ 50 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಸ್ಮೃತಿ, ಇದೇ ಪಂದ್ಯದಲ್ಲಿ 57 ಎಸೆತಗಳಲ್ಲಿ ಶತಕ ಬಾರಿಸಿದ್ದ ಆಸೀಸ್ ನಾಯಕ ಬೆಥ್ ಮೂನಿ ಅವರ ದಾಖಲೆಯನ್ನು ಕೆಲವೇ ನಿಮಿಷಗಳಲ್ಲಿ ಮುರಿದಿದ್ದಾರೆ.

63 ಎಸೆತಗಳಲ್ಲಿ 125 ರನ್

ಕೇವಲ 50 ಎಸೆತಗಳಲ್ಲಿ 14 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಾಯದಿಂದ ಶತಕ ಪೂರೈಸಿದ ಸ್ಮೃತಿ ಮಂಧಾನಗೆ ತಮ್ಮ ಇನ್ನಿಂಗ್ಸ್ ಅನ್ನು ಹೆಚ್ಚು ಮುಂದಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಮಂಧಾನ ತಮ್ಮ ಇನ್ನಿಂಗ್ಸ್​ನಲ್ಲಿ 63 ಎಸೆತಗಳನ್ನು ಎದುರಿಸಿ 17 ಬೌಂಡರಿ ಮತ್ತು ಐದು ಸಿಕ್ಸರ್​ಗಳ ಸಹಾಯದಿಂದ 125 ರನ್ ಗಳಿಸಿ ಔಟಾದರು. ಈ ಸರಣಿಯಲ್ಲಿ ಸ್ಮೃತಿ ಅವರ ಸತತ ಎರಡನೇ ಶತಕವಾಗಿದ್ದು, ಇದಕ್ಕೂ ಮುನ್ನ ಎರಡನೇ ಏಕದಿನ ಪಂದ್ಯದಲ್ಲೂ ಮಂಧಾನ ಶತಕ ಬಾರಿಸಿದ್ದರು. ಆ ಪಂದ್ಯದಲ್ಲಿಯೂ ಸ್ಮೃತಿ 91 ಎಸೆತಗಳಲ್ಲಿ 14 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ 117 ರನ್ ಸಿಡಿಸಿದ್ದರು.

2ನೇ ವೇಗದ ಏಕದಿನ ಶತಕ

ಇದೀಗ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಶತಕ ಸಿಡಿಸಿರುವ ಸ್ಮೃತಿ ಮಂಧಾನ, ಮಹಿಳಾ ಏಕದಿನ ಪಂದ್ಯಗಳಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸ್ಮೃತಿ ಅವರ ಈ ಶತಕ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ದಾಖಲಾದ ಎರಡನೇ ಅತಿ ವೇಗದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಹಿಳಾ ಏಕದಿನ ಪಂದ್ಯಗಳಲ್ಲಿ ವೇಗದ ಶತಕದ ದಾಖಲೆ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಅವರ ಹೆಸರಿನಲ್ಲಿದ್ದು, 2012 ರಲ್ಲಿ ನ್ಯೂಜಿಲೆಂಡ್ ವಿರುದ್ಧ 45 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಬೆತ್ ಮೂನಿ, ಟೀಂ ಇಂಡಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 57 ಎಸೆತಗಳಲ್ಲಿ ಶತಕ ಬಾರಿಸಿದರು.

ಆಸೀಸ್ ವಿರುದ್ಧ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂಧಾನ

ಒಂದೇ ವರ್ಷದಲ್ಲಿ ನಾಲ್ಕು ಶತಕ

ಇದರ ಜೊತೆಗೆ 2025 ರಲ್ಲಿ ಸ್ಮೃತಿ ಅವರ ನಾಲ್ಕನೇ ಏಕದಿನ ಶತಕ ಇದಾಗಿದೆ. ಇದು ಮಾತ್ರವಲ್ಲದೆ 2024 ರಲ್ಲಿಯೂ ಸ್ಮೃತಿ ನಾಲ್ಕು ಶತಕಗಳನ್ನು ಬಾರಿಸಿದ್ದರು. ಈ ಮೂಲಕ ಸತತ ಎರಡು ವರ್ಷಗಳಲ್ಲಿ ಅತಿ ಹೆಚ್ಚು ಏಕದಿನ ಶತಕಗಳನ್ನು ಬಾರಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Sat, 20 September 25