AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವದಂತಿಗಳ ನಡುವೆ ಹರ್ಮನ್‌ಪ್ರೀತ್ ನಾಯಕತ್ವವನ್ನು ಕೊಂಡಾಡಿದ ಸ್ಮೃತಿ ಮಂಧಾನ

ಭಾರತೀಯ ವನಿತಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ಹೊಸ ನಾಯಕಿಯಾಗಿದ್ದಾರೆ. ಹರ್ಮನ್‌ಪ್ರೀತ್ ಕೌರ್ ರಾಜೀನಾಮೆ ನಂತರ ನಾಯಕತ್ವ ಬದಲಾವಣೆಯಾಗಿದ್ದು, ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳು ಹಬ್ಬಿದ್ದವು. ಸ್ಮೃತಿ ಮಂಧಾನ ಈ ಎಲ್ಲಾ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಅವರ ದಶಕದ ನಾಯಕತ್ವವನ್ನು ಶ್ಲಾಘಿಸಿ, ತಂಡ ಒಗ್ಗಟ್ಟಾಗಿ ಮುನ್ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವದಂತಿಗಳ ನಡುವೆ ಹರ್ಮನ್‌ಪ್ರೀತ್ ನಾಯಕತ್ವವನ್ನು ಕೊಂಡಾಡಿದ ಸ್ಮೃತಿ ಮಂಧಾನ
ಹರ್ಮನ್​ಪ್ರೀತ್ ಕೌರ್, ಸ್ಮೃತಿ ಮಂಧಾನImage Credit source: PTI
ಪೃಥ್ವಿಶಂಕರ
|

Updated on:Oct 07, 2026 | 10:07 PM

Share

ಭಾರತೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಹೊಸ ಯುಗ ಆರಂಭವಾಗಿದೆ. ಕಳೆದ 10 ವರ್ಷಗಳಿಂದ ಭಾರತ ವನಿತಾ ಪಡೆಯನ್ನು ಮುನ್ನಡೆಸಿಕೊಂಡು ಬಂದಿದ್ದ ಹರ್ಮನ್‌ಪ್ರೀತ್ ಕೌರ್ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಉಪನಾಯಕಿಯಾಗಿದ್ದ ಸ್ಮೃತಿ ಮಂಧಾನ ಆಯ್ಕೆಯಾಗಿದ್ದಾರೆ. ಈ ಬದಲಾವಣೆಯಾಗಿ ಕೆಲವೇ ಗಂಟೆಗಳು ಕಳೆದಿವೆ. ಅದಾಗಲೇ ಇವರಿಬ್ಬರ ನಡುವೆ ಏನೂ ಸರಿ ಇಲ್ಲ. ಇಬ್ಬರ ನಡುವೆ ಮನಸ್ತಾಪವಿದೆ. ಒಬ್ಬರಿಗೊಬ್ಬರು ಮುಖ ಕೂಡ ನೋಡುತ್ತಿಲ್ಲ ಎಂಬ ವಂದಿಗಳು ಹಬ್ಬಿದ್ದವು. ಆದರೀಗ ಈ ವದಂತಿಗಳಿಗೆ ತಿರುಗೇಟು ನೀಡುವ ಕೆಲಸವನ್ನು ನೂತನ ನಾಯಕಿ ಸ್ಮೃತಿ ಮಂಧಾನ ಮಾಡಿದ್ದಾರೆ. ಹರ್ಮನ್‌ಪ್ರೀತ್ ಕೌರ್ ಅವರ ದಶಕದ ನಾಯಕತ್ವ ಅತ್ಯುತ್ತಮವಾಗಿಯತ್ತು ಎಂದು ಸ್ಮೃತಿ ಬಣ್ಣಿಸಿದ್ದಾರೆ.

ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ಸ್ಮೃತಿ, ‘ಇಷ್ಟು ವರ್ಷಗಳಿಂದ ನಿಮ್ಮೊಂದಿಗೆ ಆಡುವುದು ಸಂತೋಷವಾಗಿದೆ. ನಿಮ್ಮ 10 ವರ್ಷಗಳ ನಾಯಕತ್ವ ಅದ್ಭುತವಾಗಿದೆ. ಒಟ್ಟಾಗಿ, ನಮ್ಮ ದೇಶಕ್ಕಾಗಿ ಇನ್ನೂ ಅನೇಕ ಸಾಧನೆಗಳನ್ನು ಸಾಧಿಸಲು ನಾವು ಶ್ರಮಿಸುತ್ತೇವೆ’ ಎಂದಿದ್ದಾರೆ.

Smriti

Smriti

ಮೇಲೆ ಹೇಳಿದಂತೆ ಹರ್ಮನ್‌ಪ್ರೀತ್ ಸುಮಾರು 10 ವರ್ಷಗಳ ಕಾಲ ತಂಡವನ್ನು ಮುನ್ನಡೆಸಿದರು. ಅವರ ನಾಯಕತ್ವದಲ್ಲಿ, ಭಾರತ ನವೆಂಬರ್ 2025 ರಲ್ಲಿ ತನ್ನ ಮೊದಲ ಏಕದಿನ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹಾಗೆಯೇ 2023 ಮತ್ತು 2026 ರಲ್ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಗಳನ್ನು ಗೆದ್ದಿತು. ನಾಯಕತ್ವದಿಂದ ಬಿಡುಗಡೆಗೊಂಡರೂ ಹರ್ಮನ್‌ಪ್ರೀತ್ ಅವರನ್ನು ಭಾರತೀಯ ತಂಡದ ಭಾಗವಾಗಿಯೇ ಉಳಿದುಕೊಂಡಿದ್ದು, ಮುಂಬರುವ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ಹಳೆಯ ಫಾರ್ಮ್​ ಮರಳಿ ಪಡೆಯುವ ಇರಾದೆಯಲ್ಲಿದ್ದಾರೆ.

ಹೊಸ ಅಧ್ಯಾಯದ ಆರಂಭ

ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಚಾ ಘೋಷ್, ಹರ್ಮನ್‌ಪ್ರೀತ್ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದು, ‘ನಾಯಕತ್ವದ ಅಧ್ಯಾಯ ಕೊನೆಗೊಳ್ಳುತ್ತಿದ್ದರೂ, ನಾಯಕಿಯ ಪ್ರಭಾವ ಎಂದಿಗೂ ಕೊನೆಗೊಳ್ಳುವುದಿಲ್ಲ. ಹರ್ಮನ್‌ಪ್ರೀತ್ ಭಾರತೀಯ ಕ್ರಿಕೆಟ್ ಮತ್ತು ತಂಡದ ಆಟಗಾರ್ತಿಯರಿಗಾಗಿ ಬಹಳಷ್ಟು ಮಾಡಿದ್ದಾರೆ. ಹರ್ಮನ್‌ಪ್ರೀತ್ ಅವರ ನಂಬಿಕೆ, ಮಾರ್ಗದರ್ಶನ, ಹೋರಾಟಗಳು ಮತ್ತು ಅವರು ಒಟ್ಟಿಗೆ ಕಳೆದ ಕ್ಷಣಗಳಿಗೆ ನಾನು ಕೃತಜ್ಞತೆ ವ್ಯಕ್ತಪಡಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ನಾಯಕಿಯಾಗಿ ಹರ್ಮನ್‌ಪ್ರೀತ್ ಯುಗಾಂತ್ಯ; ಸ್ಮೃತಿ ಮಂಧಾನಗೆ ನಾಯಕತ್ವ?

ಸುರೇಶ್ ರೈನಾ ಶ್ಲಾಘನೆ

ಭಾರತದ ಮಾಜಿ ಆಲ್‌ರೌಂಡರ್ ಸುರೇಶ್ ರೈನಾ ಕೂಡ ಹರ್ಮನ್‌ಪ್ರೀತ್ ಅವರ ನಾಯಕತ್ವದ ಅವಧಿಯನ್ನು ಶ್ಲಾಘಿಸಿದ್ದು, ‘ಇದು ಧೈರ್ಯ, ವ್ಯಕ್ತಿತ್ವ ಮತ್ತು ಲೆಕ್ಕವಿಲ್ಲದಷ್ಟು ಸ್ಮರಣೀಯ ಕ್ಷಣಗಳಿಂದ ತುಂಬಿದ ಅದ್ಭುತ ಪ್ರಯಾಣವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 pm, Wed, 7 October 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ