ICC Rankings: ರನ್ ಶಿಖರ ಕಟ್ಟುತ್ತಿರುವ ಸ್ಮೃತಿ ಮಂಧಾನಗೆ ಬಂಪರ್ ಗಿಫ್ಟ್ ನೀಡಿದ ಐಸಿಸಿ

|

Updated on: Dec 24, 2024 | 7:50 PM

Smriti Mandhana Climbs ICC Rankings: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ವುಮನ್ ಸ್ಮೃತಿ ಮಂಧಾನ ಅವರು ಇತ್ತೀಚೆಗೆ ಬಿಡುಗಡೆಯಾದ ಐಸಿಸಿ ಶ್ರೇಯಾಂಕದಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಅವರು ಏಕದಿನ ಮತ್ತು ಟಿ20 ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಸ್ಮೃತಿ ಮಂಧಾನ ಶೀಘ್ರದಲ್ಲೇ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಲು ಅವಕಾಶವಿದೆ.

ICC Rankings: ರನ್ ಶಿಖರ ಕಟ್ಟುತ್ತಿರುವ ಸ್ಮೃತಿ ಮಂಧಾನಗೆ ಬಂಪರ್ ಗಿಫ್ಟ್ ನೀಡಿದ ಐಸಿಸಿ
ಸ್ಮೃತಿ ಮಂಧಾನ
Follow us on

ಪ್ರಸ್ತುತ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಇದಕ್ಕೂ ಮುನ್ನ ಉಭಯ ತಂಡಗಳ ನಡುವೆ ಇಷ್ಟೇ ಪಂದ್ಯಗಳ ಟಿ20 ಸರಣಿ ನಡೆದಿತ್ತು. ಈ ಸರಣಿಯನ್ನು ಆತಿಥೇಯ ಭಾರತ ತಂಡ 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ಈ ಸರಣಿಯಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಸ್ಮೃತಿ ಮಂಧಾನ ಅವರ ಬ್ಯಾಟ್ ಅಬ್ಬರಿಸಿತ್ತು. ಆಡಿದ ಮೂರೂ ಪಂದ್ಯಗಳಲ್ಲೂ ಸ್ಮೃತಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದರು. ಇದೀಗ ಏಕದಿನ ಸರಣಿಯಲ್ಲಿಯೂ ಸ್ಮೃತಿ ಒಂದರ ಹಿಂದೆ ಒಂದರಂತೆ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡುತ್ತಿದ್ದಾರೆ. ಏತನ್ಮಧ್ಯೆ, ಐಸಿಸಿ ಮಹಿಳೆಯರ ಇತ್ತೀಚಿನ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ಈ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ.

ಅಗ್ರ 2ನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ

ಸದ್ಯ ಏಕದಿನದಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲೂ ಅರ್ಧಶತಕ ಸಿಡಿಸಿರುವ ಸ್ಮೃತಿ ಮಂಧಾನ ಇದೀಗ ಏಕದಿನ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದರ ಜೊತೆಗೆ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲೂ ಸ್ಮೃತಿ ಎರಡನೇ ಸ್ಥಾನ ನ್ನು ಪಡೆದಿದ್ದಾರೆ. ಟಿ20ಯಲ್ಲಿ 753 ರೇಟಿಂಗ್‌ ಪಾಯಿಂಟ್ ಪಡೆದಿರುವ ಸ್ಮೃತಿ ಮಂಧಾನ ಎರಡನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಬೆತ್ ಮೂನಿ 757 ರೇಟಿಂಗ್‌ನೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ, ಏಕದಿನದಲ್ಲಿಯೂ 739 ರೇಟಿಂಗ್‌ ಪಡೆದಿರುವ ಮಂಧಾನ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ 773 ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಆಡಿದ ಟಿ20 ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಸ್ಮೃತಿ ಮಂಧಾನ ಅರ್ಧಶತಕ ಬಾರಿಸಿದ್ದರು. ಈ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಅವರು 41 ಎಸೆತಗಳಲ್ಲಿ 62 ರನ್ ಮತ್ತು 47 ಎಸೆತಗಳಲ್ಲಿ 77 ರನ್ ಗಳಿಸಿದ್ದರು. ಇದಲ್ಲದೇ ಸರಣಿಯ ಮೊದಲ ಪಂದ್ಯದಲ್ಲಿ 53 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು.

ಏಕದಿನದಲ್ಲಿ ನಂ.1 ಆಗುವ ಅವಕಾಶ

ಏಕದಿನ ಶ್ರೇಯಾಂಕದಲ್ಲಿ ಪ್ರಸ್ತುತ ಎರಡನೇ ಸ್ಥಾನದಲ್ಲಿರುವ ಸ್ಮೃತಿ ಮಂಧಾನ ನಂಬರ್-1 ಸ್ಥಾನಕ್ಕೇರುವ ಅವಕಾಶವನ್ನು ಹೊಂದಿದ್ದಾರೆ. ವಾಸ್ತವವಾಗಿ, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ, ಅವರು 102 ಎಸೆತಗಳಲ್ಲಿ 91 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು. ಎರಡನೇ ಪಂದ್ಯದಲ್ಲೂ ಅವರು 47 ಎಸೆತಗಳಲ್ಲಿ 53 ರನ್ ಕಲೆಹಾಕಿದ್ದರು. ಹೀಗಾಗಿ ಸ್ಮೃತಿ ಮಂಧಾನ ಮುಂದಿನ ಶ್ರೇಯಾಂಕದಲ್ಲಿ ಏಕದಿನದಲ್ಲಿ ನಂಬರ್-1 ಸ್ಥಾನಕ್ಕೇರುವ ಅವಕಾಶ ಹೊಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Tue, 24 December 24