AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಪರ್ ಜೈಂಟ್ಸ್’ ಪರ ಕಣಕ್ಕಿಳಿಯಲಿದ್ದಾರೆ ಸ್ಮೃತಿ ಮಂಧಾನ!

Smriti Mandhana: ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ 'ದಿ ಹಂಡ್ರೆಡ್' ಲೀಗ್‌ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯುತ್ತವೆ. ಈ ಲೀಗ್‌ನಲ್ಲಿ ಮಹಿಳಾ ಮತ್ತು ಪುರುಷರ ವಿಭಾಗಗಳಿಗೆ ಪ್ರತ್ಯೇಕ ಟೂರ್ನಿಗಳನ್ನು ಆಯೋಜಿಸಲಾಗುತ್ತದೆ. ಅದರಂತೆ, ಇದೀಗ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದ ಪರ ಹೊಸ ಇನಿಂಗ್ಸ್​ ಸ್ಮೃತಿ ಮಂಧಾನ ಸಜ್ಜಾಗಿದ್ದಾರೆ.

'ಸೂಪರ್ ಜೈಂಟ್ಸ್' ಪರ ಕಣಕ್ಕಿಳಿಯಲಿದ್ದಾರೆ ಸ್ಮೃತಿ ಮಂಧಾನ!
Smriti MandhanaImage Credit source: MSG
ಝಾಹಿರ್ ಯೂಸುಫ್
|

Updated on: Jul 21, 2026 | 10:31 AM

Share

ಬಹುನಿರೀಕ್ಷಿತ ‘ದಿ ಹಂಡ್ರೆಡ್ ವುಮೆನ್ಸ್’ ಕ್ರಿಕೆಟ್ ಟೂರ್ನಿ ಇಂದಿನಿಂದ (ಜುಲೈ 21) ಶುರುವಾಗಲಿದೆ. ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ‘ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್’ ಪರ ಕಣಕ್ಕಿಳಿಯಲಿದ್ದಾರೆ. ಕಳೆದ ಬಾರಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಸ್ಮೃತಿ ವೈಯುಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದೀಗ ನೇರ ಒಪ್ಪಂದ ಮೂಲಕ ಸ್ಮೃತಿ ‘ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್’ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಸ್ಟಾರ್ ಆಟಗಾರ್ತಿಯರ ದಂಡು:

ಈ ಬಾರಿಯ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದಲ್ಲಿ ಮಹಿಳಾ ಕ್ರಿಕೆಟ್‌ನ ಸ್ಟಾರ್ ಆಟಗಾರ್ತಿಯರ ದಂಡೇ ಕಾಣಿಸಿಕೊಂಡಿದೆ. ಸ್ಮೃತಿ ಮಂಧಾನ ಅವರೊಂದಿಗೆ ಆಸ್ಟ್ರೇಲಿಯಾದ ಯಶಸ್ವಿ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಇಂಗ್ಲೆಂಡ್‌ನ ವಿಶ್ವದ ನಂ.1 ಸ್ಪಿನ್ನರ್ ಸೋಫಿ ಎಕ್ಲಿಸ್ಟೋನ್ ಜೊತೆಯಾಗಿ ಕಣಕ್ಕಿಳಿಯಲಿದ್ದಾರೆ.

ಇವರೊಂದಿಗೆ ಟೀಮ್ ಇಂಡಿಯಾದ ಸ್ಫೋಟಕ ವಿಕೆಟ್ ಕೀಪರ್-ಬ್ಯಾಟರ್ ರಿಚಾ ಘೋಷ್ ಕೂಡ ಆಯ್ಕೆಯಾಗಿದ್ದಾರೆ. ಅಂದರೆ ಸ್ಮೃತಿ ಮಂಧಾನ-ರಿಚಾ ಘೋಷ್ ಜೋಡಿಯು ಜೊತೆಯಾಗಿ ಕಣಕ್ಕಿಳಿಯಲಿದ್ದಾರೆ.

ಫ್ರಾಂಚೈಸಿ ಮರುನಾಮಕರಣ:

ಐಪಿಎಲ್‌ನ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರಾದ ಆರ್‌ಪಿಎಸ್‌ಜಿ (RPSG) ಗ್ರೂಪ್ ಈ ಮ್ಯಾಂಚೆಸ್ಟರ್ ಫ್ರಾಂಚೈಸಿಯಲ್ಲಿ ಹೂಡಿಕೆ ಮಾಡಿದೆ. ಈ ಖಾಸಗೀಕರಣದ ಬೆನ್ನಲ್ಲೇ ತಂಡದ ಹೆಸರನ್ನು ‘ಮ್ಯಾಂಚೆಸ್ಟರ್ ಒರಿಜಿನಲ್ಸ್’ ತಂಡದ ಹೆಸರನ್ನು ‘ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್’ ಎಂದು ಬದಲಾಯಿಸಲಾಗಿದೆ.

‘ದಿ ಹಂಡ್ರೆಡ್’ ಟೂರ್ನಿಯಲ್ಲಿ ಸ್ಮೃತಿ ದಾಖಲೆ:

‘ದಿ ಹಂಡ್ರೆಡ್ ವುಮೆನ್ಸ್ ‘ ಲೀಗ್ ಇತಿಹಾಸದಲ್ಲೇ ಅತಿ ವೇಗವಾಗಿ 500 ರನ್ ರನ್​ ಕಲೆಹಾಕಿದ ಆಟಗಾರ್ತಿ ಎಂಬ ದಾಖಲೆ ಸ್ಮೃತಿ ಮಂಧಾನ ಹೆಸರಿನಲ್ಲಿದೆ. ಈ ಹಿಂದೆ ಸದರ್ನ್ ಬ್ರೇವ್ ತಂಡದ ಪರ ಆಡಿದ್ದ ಸ್ಮೃತಿ, 29 ಇನ್ನಿಂಗ್ಸ್‌ಗಳಲ್ಲಿ 139.09ರ ಅದ್ಭುತ ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 676 ರನ್ ಕಲೆಹಾಕಿದ್ದಾರೆ.

ಇದನ್ನೂ ಓದಿ: ಓವರ್ ಇಲ್ಲ, ಸೂಪರ್ ಫೈವ್, ಬೋನಸ್ ರನ್: ದಿ ಹಂಡ್ರೆಡ್ ಲೀಗ್ ಹೊಸ ನಿಯಮ

ಇದೀಗ ಇಂಗ್ಲೆಂಡ್‌ನ ಖ್ಯಾತ ಎಡಗೈ ಸ್ಪಿನ್ನರ್ ಸೋಫಿ ಎಕ್ಲಿಸ್ಟೋನ್ ಮುಂದಾಳತ್ವದಲ್ಲಿ ಸ್ಮೃತಿ ಮಂಧಾನ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!