ಜಿಂಬಾಬ್ವೆ ವಿರುದ್ಧದ ಟಿ20, ಏಕದಿನ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ ಸ್ಮೃತಿ ಮಂಧಾನಾ ಅವರನ್ನು ನೇಮಿಸಿ, ಅಕ್ಟೋಬರ್ 16 ರಿಂದ ಜಿಂಬಾಬ್ವೆ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವ ಕಳೆದುಕೊಂಡಿದ್ದು, ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ರನ್ ಗಳಿಸುವ ಒತ್ತಡದಲ್ಲಿದ್ದಾರೆ. ಯುವ ಹಾಗೂ ಅನುಭವಿ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದೆ.

ಅಕ್ಟೋಬರ್ 16 ರಿಂದ ಪ್ರಾರಂಭವಾಗುವ ಜಿಂಬಾಬ್ವೆ ವಿರುದ್ಧದ ಸರಣಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಗುವಾಹಟಿಯಲ್ಲಿ ನಡೆದ ಸಭೆಯಲ್ಲಿ ಬಿಸಿಸಿಐ ಮೊದಲು, ಮಹಿಳಾ ಕ್ರಿಕೆಟ್ ತಂಡದ ನೂತನ ನಾಯಕಿಯಾಗಿ ಸ್ಮೃತಿ ಮಂಧಾನಾ ಅವರನ್ನು ನೇಮಿಸಿತು. ಅದಾದ ಬಳಿಕ ಈ ಸರಣಿಗಳಿಗೆ ಮಂಧಾನ ಅವರ ನಾಯಕತ್ವದಲ್ಲಿ ಟಿ20 ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ. ಟಿ20 ತಂಡಕ್ಕೆ ಶಫಾಲಿ ವರ್ಮಾ ಉಪನಾಯಕಿಯಾಗಿ ಆಯ್ಕೆಯಾಗಿದ್ದರೆ, ದೀಪ್ತಿ ಶರ್ಮಾರನ್ನು ಏಕದಿನ ತಂಡಕ್ಕೆ ಉಪನಾಯಕಿಯಾಗಿ ನೇಮಿಸಲಾಗಿದೆ.
ರನ್ ಗಳಿಸಬೇಕಾದ ಒತ್ತಡದಲ್ಲಿ ಹರ್ಮನ್
ಈ ಎರಡೂ ತಂಡಗಳಲ್ಲಿ ಹರ್ಮನ್ ಪ್ರೀತ್ ಕೌರ್ ಕೂಡ ಸ್ಥಾನ ಪಡೆದಿದ್ದಾರೆ. ಹರ್ಮನ್ ಪ್ರೀತ್ ಕೌರ್ ಕೆಲವು ಸಮಯದಿಂದ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದಾರೆ. ಆದರೆ ಇದರ ಹೊರತಾಗಿಯೂ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹರ್ಮನ್ ಪ್ರೀತ್ ಕೌರ್ ಏಕದಿನ ಮತ್ತು ಟಿ20 ತಂಡದ ನಾಯಕತ್ವವನ್ನು ಕಳೆದುಕೊಂಡಿದ್ದು, ಈಗ ತಂಡದಲ್ಲಿ ಉಳಿಯಬೇಕೆಂದರೆ ರನ್ ಗಳಿಸಬೇಕಾದ ಒತ್ತಡದಲ್ಲಿದ್ದಾರೆ.
ಭಾರತ- ಜಿಂಬಾಬ್ವೆ ಮುಖಾಮುಖಿ
ಭಾರತ ತಂಡ ಜಿಂಬಾಬ್ವೆ ವಿರುದ್ಧ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಟಿ20 ಪಂದ್ಯಗಳು ರಾಯ್‌ಪುರದಲ್ಲಿ ನಡೆದರೆ, ಏಕದಿನ ಪಂದ್ಯಗಳು ವಡೋದರಾದಲ್ಲಿ ನಡೆಯಲಿವೆ. ಈ ಎರಡು ತಂಡಗಳಲ್ಲೂ ಯುವ ಮತ್ತು ಅನುಭವಿ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದೆ. ಆದಾಗ್ಯೂ ಶ್ರೇಯಾಂಕ ಪಾಟೀಲ್ ಮತ್ತು ಜೆಮಿಮಾ ರೊಡ್ರಿಗಸ್ ಇಬ್ಬರೂ ತಂಡದಿಂದ ಹೊರಗುಳಿದಿದ್ದಾರೆ.
🚨 News 🚨
Here’s #TeamIndia women’s T20I and ODI squads under Smriti Mandhana’s first series as full-time captain 👏
More Details ▶️ https://t.co/jW53GaoweG
#INDvZIM | @mflone_ | @mandhana_smriti https://t.co/4zOhFgDO7h
— BCCI Women (@BCCIWomen) October 6, 2026
ಭಾರತ ಮಹಿಳಾ ಟಿ20 ತಂಡ: ಸ್ಮೃತಿ ಮಂಧಾನ (ನಾಯಕಿ), ಶೆಫಾಲಿ ವರ್ಮಾ (ಉಪನಾಯಕಿ), ನಿಕ್ಕಿ ಪ್ರಸಾದ್, ಹರ್ಮನ್‌ಪ್ರೀತ್ ಕೌರ್, ಅನುಷ್ಕಾ ಶರ್ಮಾ, ರಿಚಾ ಘೋಷ್ (ವಿಕೆಟ್‌ಕೀಪರ್), ಜಿ ಕಮಲಿನಿ (ವಿಕೆಟ್‌ಕೀಪರ್), ದೀಪ್ತಿ ಶರ್ಮಾ, ಪ್ರೇಮಾ ರಾವತ್, ಶ್ರೀ ಚರಣಿ, ನಂದಿನಿ ಶರ್ಮಾ, ಕ್ರಾಂತಿ ಗೌಡ್, ಅರುಂಧತಿ ರೆಡ್ಡಿ, ಜಿಂತಿಮಣಿ ಕಲಿತಾ, ಮಿನ್ನು ಮಣಿ.
ಭಾರತ ಮಹಿಳಾ ಏಕದಿನ ತಂಡ: ಸ್ಮೃತಿ ಮಂಧಾನ (ನಾಯಕಿ), ಶೆಫಾಲಿ ವರ್ಮಾ, ಪ್ರತೀಕಾ ರಾವಲ್, ಹರ್ಮನ್‌ಪ್ರೀತ್ ಕೌರ್, ಹರ್ಲೀನ್ ಡಿಯೋಲ್, ತೇಜಲ್ ಹಸಬ್ನಿಸ್, ದೀಪ್ತಿ ಶರ್ಮಾ (ಉಪನಾಯಕಿ), ರಿಚಾ ಘೋಷ್ (ವಿಕೆಟ್‌ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್‌ಕೀಪರ್), ವೈಷ್ಣವಿ ಶರ್ಮಾ, ನಂದಿನಿ ಶರ್ಮಾ, ಶ್ರೀ ಚರಣಿ, ಕ್ರಾಂತಿ ಗೌಡ್, ಸಯಾಲಿ ಸತ್ಘರೆ, ರೇಣುಕಾ ಠಾಕೂರ್.




