ಸ್ಮೃತಿ ಮಂಧಾನಗೆ ಒಲಿದ 2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿ

ICC Women’s ODI Cricketer of the Year for 2024: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಗೆ 2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿ ಲಭಿಸಿದೆ. ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ 13 ಇನ್ನಿಂಗ್ಸ್​ಗಳನ್ನು ಆಡಿದ್ದ ಮಂಧಾನ ನಾಲ್ಕು ಭರ್ಜರಿ ಶತಕಗಳ ಸಹಿತ ಬರೋಬ್ಬರಿ 747 ರನ್ ಕಲೆಹಾಕಿದ್ದರು. ಈ ಮೂಲಕ ಕಳೆದ ವರ್ಷ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಮಹಿಳಾ ಕ್ರಿಕೆಟರ್​ಗಳ ಪಟ್ಟಿಯಲ್ಲಿ ಮಂಧಾನ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸ್ಮೃತಿ ಮಂಧಾನಗೆ ಒಲಿದ 2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿ
ಸ್ಮೃತಿ ಮಂಧಾನ
Follow us
ಪೃಥ್ವಿಶಂಕರ
|

Updated on:Jan 27, 2025 | 2:56 PM

ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಗೆ 2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಐಸಿಸಿ ಆಯ್ಕೆ ಮಾಡಿದೆ. ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ 13 ಇನ್ನಿಂಗ್ಸ್​ಗಳನ್ನು ಆಡಿದ್ದ ಮಂಧಾನ ನಾಲ್ಕು ಭರ್ಜರಿ ಶತಕಗಳ ಸಹಿತ ಬರೋಬ್ಬರಿ 747 ರನ್ ಕಲೆಹಾಕಿದ್ದರು. ಈ ಮೂಲಕ ಕಳೆದ ವರ್ಷ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಮಹಿಳಾ ಕ್ರಿಕೆಟರ್​ಗಳ ಪಟ್ಟಿಯಲ್ಲಿ ಮಂಧಾನ ಅಗ್ರಸ್ಥಾನವನ್ನು ಪಡೆದುಕೊಂಡಿದ್ದರು. ಮಂಧಾನ ಬಳಿಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡದ ಲಾರಾ ವೋಲ್ವಾರ್ಡ್ಟ್ 697 ರನ್ ಹಾಗೂ ಟ್ಯಾಮಿ ಬ್ಯೂಮಾಂಟ್ 554 ರನ್ ಮತ್ತು ಹೇಲಿ ಮ್ಯಾಥ್ಯೂಸ್ 469 ರನ್ ಕಲೆಹಾಕಿದ್ದಾರೆ.

4 ಐಸಿಸಿ ಪ್ರಶಸ್ತಿ ಗೆದ್ದ ಮಂಧಾನ

2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗುವ ಮೂಲಕ ಮಂಧಾನ ತಮ್ಮ ವೃತ್ತಿ ಬದುಕಿನಲ್ಲಿ ನಾಲ್ಕನೇ ಐಸಿಸಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ 2018 ರಲ್ಲಿ ಮೊಟ್ಟ ಮೊದಲ ಬಾರಿಗೆ 2018ರ ಮಹಿಳಾ ಏಕದಿನ ಕ್ರಿಕೆಟರ್​ ಪ್ರಶಸ್ತಿ ಗೆದ್ದಿದ್ದ ಮಂಧಾನ, ಅದೇ ವರ್ಷ 2018 ರ ವರ್ಷದ ಮಹಿಳಾ ಕ್ರಿಕೆಟರ್ ಗೌರವಕ್ಕೂ ಭಾಜನರಾಗಿದ್ದರು. 3 ವರ್ಷದ ಬಳಿಕ ಅಂದರೆ 2021 ರಲ್ಲಿ ಮತ್ತೊಮ್ಮೆ ಐಸಿಸಿ ಗೌರವಕ್ಕೆ ಪಾತ್ರರಾಗಿದ್ದ ಮಂಧಾನ 2021ರ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಯನ್ನು ಎರಡನೇ ಬಾರಿಗೆ ಗೆದ್ದುಕೊಳ್ಳುವಲ್ಲಿ ಸಫಲರಾಗಿದ್ದರು. ಇದೀಗ 2024 ರಲ್ಲಿ ಮಂಧಾನ ಎರಡನೇ ಬಾರಿಗೆ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಈ ಮೂಲಕ ನಾಲ್ಕು ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಕ್ರಿಕೆಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

ಮಂಧಾನ ವೃತ್ತಿಜೀವನ

ಸ್ಮೃತಿ ಮಂಧಾನ ಇದುವರೆಗೆ ಭಾರತ ಪರ 7 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇದರಲ್ಲಿ 57.18 ಸರಾಸರಿಯಲ್ಲಿ 2 ಶತಕಗಳ ಸಹಿತ 629 ರನ್ ಗಳಿಸಿದ್ದಾರೆ. ಹಾಗೆಯೇ 97 ಏಕದಿನ ಪಂದ್ಯಗಳಲ್ಲಿ ಮಂಧಾನ 46.25 ಸರಾಸರಿಯಲ್ಲಿ 4209 ರನ್ ಗಳಿಸಿದ್ದು, ಇದರಲ್ಲೂ 10 ಶತಕಗಳು ಸೇರಿವೆ. ಉಳಿದಂತೆ 148 ಟಿ20 ಪಂದ್ಯಗಳನ್ನಾಡಿರುವ ಮಂಧಾನ 29.38 ಸರಾಸರಿಯಲ್ಲಿ 30 ಅರ್ಧಶತಕಗಳ ಸಹಿತ 3761 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:32 pm, Mon, 27 January 25

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ