MIW vs RCBW, WPL 2023: ಮಂಧಾನ vs ಕೌರ್: ಡಬ್ಲ್ಯೂಪಿಎಲ್ನಲ್ಲಿಂದು ಹೈವೋಲ್ಟೇಜ್ ಕದನ: ಸ್ಮೃತಿ ಪಡೆಯ ಮಾಸ್ಟರ್ ಪ್ಲಾನ್ ಏನು?
Mumbai Indians Women vs Royal Challengers Bangalore Women: ಸೋಲಿನ ನಡುವೆಯೇ ಸ್ಮೃತಿ ಮಂಧಾನ ನಾಯಕತ್ವದ ಆರ್ಸಿಬಿ ತಂಡ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ (MIW vs RCBW) ತಂಡವನ್ನು ಎದುರಿಸಲು ಸಜ್ಜಾಗಿದೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಇಂದು ಆರ್ಸಿಬಿ-ಮುಂಬೈ ಕದನ ಏರ್ಪಡಿಸಲಾಗಿದ್ದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.
ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ (WPL 2023) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ತನ್ನ ಮೊದಲ ಪಂದ್ಯದಲ್ಲೇ ಸೋಲು ಕಂಡಿದೆ. ದುಬಾರಿ ಬೌಲಿಂಗ್ಗೆ ಬೆಲೆತೆತ್ತ ಆರ್ಸಿಬಿ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ವಿರುದ್ಧ ಮಂಡಿಯೂರಿತು. ಇದೀಗ ಈ ಸೋಲಿನ ನಡುವೆಯೇ ಸ್ಮೃತಿ ಮಂಧಾನ ನಾಯಕತ್ವದ ಆರ್ಸಿಬಿ ತಂಡ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ (MIW vs RCBW) ತಂಡವನ್ನು ಎದುರಿಸಲು ಸಜ್ಜಾಗಿದೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಇಂದು ಆರ್ಸಿಬಿ-ಮುಂಬೈ ಕದನ ಏರ್ಪಡಿಸಲಾಗಿದ್ದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ಮೊದಲ ಪಂದ್ಯದಲ್ಲಿ 200+ ರನ್ ಕಲೆಹಾಕಿ ಭರ್ಜರಿ ಫಾರ್ಮ್ನಲ್ಲಿರುವ ಎಂಐ ತಂಡದ ಎದುರು ಬೆಂಗಳೂರು ಯಾವರೀತಿ ಪ್ರದರ್ಶನ ನೀಡುತ್ತೆ ಎಂಬುದು ನೋಡಬೇಕಿದೆ.
ಆರ್ಸಿಬಿ ಮಹಿಳಾ ತಂಡದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ಡೆಲ್ಲಿ ವಿರುದ್ಧದ ಮೊದಲ ಪಂದ್ಯದಲ್ಲಿ ಬೌಲರ್ಗಳು ನೀರಿನಂತೆ ರನ್ ಹರಿ ಬಿಟ್ಟರು. ವಿಕೆಟ್ ಕೀಳಲು ಪರದಾಡಿದರು. ಫೀಲ್ಡಿಂಗ್ ಕೂಡ ಕಳಪೆ ಮಟ್ಟದ್ದಾಗಿತ್ತು. ಈ ಎಲ್ಲ ತಪ್ಪುಗಳನ್ನು ಸರಿ ಪಡಿಸಿ ಮುಂಬೈ ವಿರುದ್ಧ ಗೆಲ್ಲಲೇ ಬೇಕಿದೆ. ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ. ಇವರಿಂದಲೂ ಒಂದೊಳ್ಳೆ ಇನ್ನಿಂಗ್ಸ್ ಬರಬೇಕಿದೆ. ರಿಚಾ ಘೋಷ್, ಸೋಫಿ ಡಿವೈನ್, ದಿಶಾ ಕಸಟ್ ಕಡೆಯಿಂದ ಕೊಡುಗೆ ಬೇಕಾಗಿದೆ. ರೇಣುಕಾ ಸಿಂಗ್, ಮೆಘನ್ ಸ್ಕಟ್, ಪ್ರೀತಿ ಬೋಸೆ ಬೌಲಿಂಗ್ನಲ್ಲಿ ಮಾರಕವಾಗಬೇಕಿದೆ.
ರಾಹುಲ್ ಆಡದಿರುವುದು ಖುಷಿ ತಂದಿದೆ, ಆಡಿದ್ದರೆ ವೃತ್ತಿಜೀವನವೇ ಕೊನೆಗೊಳ್ಳುತ್ತಿತ್ತು ಎಂದ ವಿಶ್ವಕಪ್ ಹೀರೋ
ಮುಂಬೈ ತಂಡ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಬೊಂಬಾಟ್ ಫಾರ್ಮ್ನಲ್ಲಿದ್ದಾರೆ. ಹೇಲಿ ಮ್ಯಾಥ್ಯೂಸ್, ಅಮೆಲಿಯಾ ಕರ್, ನೇಟ್ ಸಿವರ್ ಕೂಡ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇವರಿಗೆ ಯಾಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್ ಸಾಥ್ ನೀಡಿದರೆ ತಂಡ ಮತ್ತೊಮ್ಮೆ ದೊಡ್ಡ ಮೊತ್ತ ಕಲೆಹಾಕಲಿದೆ. ಸೈಕಾ ಇಶಾಕ್, ಅಮೆಲಿಯಾ ಕರ್, ನೇಟ್ ಸಿವರ್ ಬೌಲಿಂಗ್ನಲ್ಲಿ ಕೂಡ ಕೊಡುಗೆ ನೀಡುತ್ತಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಮುಂಬೈ ಬ್ರಬೋರ್ನ್ ಸ್ಟೇಡಿಯಂನಲ್ಲಿ ಸಂಜೆ 7.30 ಕ್ಕೆ ಶುರುವಾಗಲಿದ್ದು, ಟಾಸ್ 7.00 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್, ಎಲ್ಲಿಸ್ ಪೆರ್ರಿ, ಡಾನ್ ವ್ಯಾನ್ ನೀಕರ್ಕ್, ಕೋಮಲ್ ಜಂಜಾದ್, ಆಶಾ ಶೋಭನಾ, ಎರಿನ್ ಬರ್ನ್ಸ್, ಪ್ರೀತಿ ಬೋಸ್, ರೇಣುಕಾ ಸಿಂಗ್, ಸೋಫಿ ಡಿವೈನ್, ಹೀದರ್ ನೈಟ್, ಮೇಗನ್ ಶುಟ್, ಕನಿಕಾ ಅಹುಜಾ, ದೀಕ್ಷಾ ಕಾಸತ್, ಇಂದ್ರಾಣಿ ರಾಯ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕಾ ಪಾಟೀಲ್.
ಮುಂಬೈ ಇಂಡಿಯನ್ಸ್: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಯಾಸ್ತಿಕಾ ಭಾಟಿಯಾ, ಅಮನ್‌ಜೋತ್ ಕೌರ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯಾನ್, ನೇಟ್ ಸಿವರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹುಮೈರಾ ಖಾಜಿ, ಪ್ರಿಯಾಂಕಾ ಬಾಲಾ, ಸೋನಮ್ ಯಾದವ್, ನೀಲಂ ಬಿಶ್ತ್, ಸಿ ವಾಂಗ್, ಹೀದರ್ ಗ್ರಹಾಂ, ಪೂಜಾ ವಸ್ತ್ರಾಕರ್, ಅಮೆಲಿಯಾ ಕರ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:04 am, Mon, 6 March 23