ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್ ಮುಚ್ಚಲ್

Smriti Mandhana Wedding Canceled: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದಾಗಿರುವ ಕಾರಣ ಇದೀಗ ಬಯಲಾಗಿದೆ. ಮದುವೆಗೆ ಹಿಂದಿನ ದಿನ ಪಲಾಶ್ ಬೇರೊಬ್ಬ ಮಹಿಳೆ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದೇ ರದ್ದಾಗಲು ಕಾರಣ ಎಂದು ಸ್ಮೃತಿ ಅವರ ಬಾಲ್ಯದ ಗೆಳೆಯ ವಿದ್ಯಾನ್ ಮಾನೆ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಪಲಾಶ್ ಸಿನಿಮಾ ಹೆಸರಿನಲ್ಲಿ ತನ್ನಿಂದ 40 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದೂ ವಿದ್ಯಾನ್ ಹೇಳಿದ್ದಾರೆ. ಈ ಸ್ಫೋಟಕ ಮಾಹಿತಿ ಮಹಿಳಾ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದೆ.

ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್ ಮುಚ್ಚಲ್
Smriti, Palash

Updated on: Jan 23, 2026 | 10:20 PM

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಭಾರತ ಮಹಿಳಾ ತಂಡದ ಸೂಪರ್ ಸ್ಟಾರ್ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (palash muchhal) ಅವರು ವೈವಾಹಿಕ ಜೀವನಕ್ಕೆ ಕಾಲಿರಿಸಿ ತಿಂಗಳುಗಳು ಕಳೆದಿರಬೇಕಿತ್ತು. ಆದರೆ ಮದುವೆಗೆ ಇನ್ನೊಂದು ದಿನ ಬಾಕಿ ಇರುವಾಗ ಮದುವೆ ಮುರಿದುಬಿದ್ದಿತ್ತು. ಆ ಸಮಯದಲ್ಲಿ ಸ್ಮೃತಿ ಅವರ ತಂದೆಗೆ ಅನಾರೋಗ್ಯದ ಕಾರಣ ಮದುವೆಯನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಕಳೆದ ಡಿಸೆಂಬರ್‌ನಲ್ಲಿ ಈ ಇಬ್ಬರೂ ಮದುವೆ ರದ್ದಾಗಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ ಯಾವ ಕಾರಣಕ್ಕೆ ಮದುವೆ ರದ್ದಾಯಿತು ಎಂಬುದರ ಬಗ್ಗೆ ಇಬ್ಬರೂ ಖಚಿತವಾಗಿ ಏನನ್ನು ಹೇಳಿರಲಿಲ್ಲ. ಆದರೀಗ ಸ್ಮೃತಿ ಮಂಧಾನ ಅವರ ಬಾಲ್ಯದ ಗೆಳೆಯ ವಿದ್ಯಾನ್ ಮಾನೆ, ಪಲಾಶ್ ಮುಚ್ಚಲ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು, ಮದುವೆ ನಿಲ್ಲಲು ಕಾರಣವೇನು ಮತ್ತು ಮದುವೆಯ ಹಿಂದಿನ ದಿನ ಏನೆಲ್ಲ ನಡೆಯಿತು ಎಂಬುದನ್ನು ವಿವರಿಸಿದ್ದಾರೆ.

ಮದುವೆ ರದ್ದಾಗಲು ಇದೇ ಕಾರಣ?

ಮದುವೆ ಮನೆಯಲ್ಲಿ ಅಂದು ನಡೆದಿದ್ದೇನು ಎಂಬುದನ್ನು ವಿವರಿಸಿರುವ ವಿದ್ಯಾನ್ ಮಾನೆ, ‘ಮದುವೆ ಸಮಾರಂಭದಲ್ಲಿ ನಾನು ಕೂಡ ಹಾಜರಿದ್ದೆ. ಅಂದು ಪಲಾಶ್ ಒಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ. ಅದು ಭಯಾನಕ ದೃಶ್ಯವಾಗಿತ್ತು. ಇದಾದ ಬಳಿಕ ಪರಿಸ್ಥಿತಿ ತುಂಬಾ ಉದ್ವಿಗ್ನವಾಯಿತು, ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಥಳಿಸಿದರು. ಇದಾದ ಬಳಿಕ ಮದುವೆ ಮುರಿದುಬಿದ್ದಿತು’ ಎಂದಿದ್ದಾರೆ.

ಇನ್ನು ಪಲಾಶ್ ವಿರುದ್ಧ ವಂಚನೆ ಮತ್ತು ಆರ್ಥಿಕ ದುರುಪಯೋಗದ ಗಂಭೀರ ಆರೋಪಗಳನ್ನು ಹೊರಿಸಿರುವ ವಿದ್ಯಾನ್ ಮಾನೆ, ‘ಪಲಾಶ್ ಸಿನಿಮಾದ ಹೆಸರಿನಲ್ಲಿ ತನ್ನಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದಿದ್ದಾರೆ, ಆದರೆ ಆ ಚಿತ್ರವನ್ನು ನಿರ್ಮಿಸಲಾಗಿಲ್ಲ ಅಥವಾ ಹಣವನ್ನು ಹಿಂತಿರುಗಿಸಲಾಗಿಲ್ಲ. ನಾನು ಸ್ಮೃತಿಯ ಕುಟುಂಬದ ಮೂಲಕ ಪಲಾಶ್ ಅವರನ್ನು ಭೇಟಿಯಾದೆ. ಈ ಸಮಯದಲ್ಲಿ ಪಲಾಶ್ ನನ್ನ ಬಳಿ ಸಿನಿಮಾ ನಿರ್ದೇಶನದ ಬಗ್ಗೆ ಮಾತನಾಡಿದರು. ಅಲ್ಲದೆ ಆರು ತಿಂಗಳೊಳಗೆ ಸಿನಿಮಾವನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಹೀಗಾಗಿ ನಾನು ಪಾಲಾಶ್ ಸಿನಿಮಾದ ಮೇಲೆ ಸುಮಾರು 40 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದೆ. ಆದಾಗ್ಯೂ, ಮದುವೆ ರದ್ದಾದ ನಂತರ ಪಲಾಶ್ ನನ್ನ ಫೋನ್​ ರಿಸೀವ್ ಮಾಡುತ್ತಿಲ್ಲ ಎಂದಿದ್ದಾರೆ.

ನ. 23 ರಂದು ಮದುವೆ ನಡೆಯಬೇಕಿತ್ತು

ಮೇಲೆ ಹೇಳಿದಂತೆ ಸ್ಮೃತಿ ಮಂಧಾನ ಅವರ ವಿವಾಹವು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನವೆಂಬರ್ 23, 2025 ರಂದು ನಿಗದಿಯಾಗಿತ್ತು. ಆದಾಗ್ಯೂ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಮಂಧಾನ ಅವರ ಹಠಾತ್ ಅನಾರೋಗ್ಯದಿಂದಾಗಿ ಸಮಾರಂಭವನ್ನು ಮುಂದೂಡಲಾಯಿತು. ಇದೇ ವೇಳೆ ಪಲಾಶ್ ಕೂಡ ಅನಾರೋಗ್ಯಕ್ಕೆ ಒಳಗಾದರು. ಹೀಗಾಗಿ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕೆಲವು ದಿನಗಳ ನಂತರ, ಮಂಧಾನ ಅವರು ವಿವಾಹವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದ್ದರು. ಇದೀಗ ಸ್ಮೃತಿ ಅವರ ಬಾಲ್ಯದ ಗೆಳೆಯನ ಈ ರೀತಿಯ ಹೇಳಿಕೆ ಎಲ್ಲರನ್ನೂ ಆಘಾತಕ್ಕೊಳಗಾಗುವಂತೆ ಮಾಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:14 pm, Fri, 23 January 26