AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಈತನೇ ಸೂಕ್ತ ಎಂದ ಸೌರವ್ ಗಂಗೂಲಿ

Asia Cup 2023: ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಇನ್ನು ಫೈನಲ್  ಪಂದ್ಯ ಸೆಪ್ಟೆಂಬರ್​ 17 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಕಣಕ್ಕಿಳಿಯಲಿದೆ. ಇನ್ನು ಟೀಮ್ ಇಂಡಿಯಾ ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

ಶ್ರೇಯಸ್ ಅಯ್ಯರ್ ಸ್ಥಾನಕ್ಕೆ ಈತನೇ ಸೂಕ್ತ ಎಂದ ಸೌರವ್ ಗಂಗೂಲಿ
Sourav Ganguly
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2023 | 4:09 PM

ಏಷ್ಯಾಕಪ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದೆ. ಆಗಸ್ಟ್​ 30 ರಿಂದ ಶುರುವಾಗಲಿರುವ ಏಷ್ಯನ್ ರಾಷ್ಟ್ರಗಳ ಈ ಕ್ರಿಕೆಟ್ ಕದನಕ್ಕಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಘೋಷಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್. ಗಾಯದ ಕಾರಣ ಹಲವು ತಿಂಗಳುಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಈ ಇಬ್ಬರು ಆಟಗಾರರು ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯಲ್ಲಿ ಫಿಟ್​ನೆಸ್ ಟೆಸ್ಟ್​ಗೆ ಒಳಗಾಗಿದ್ದಾರೆ. ಈ ವರದಿ ಬಂದ ಬೆನ್ನಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ.

ಒಂದು ವೇಳೆ ಶ್ರೇಯಸ್ ಅಯ್ಯರ್ ಸಂಪೂರ್ಣ ಫಿಟ್​ ಆಗಿರದಿದ್ದರೆ, ಅವರ ಬದಲಿಗೆ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಅವರನ್ನು ತಂಡಕ್ಕೆ ಆಯ್ಕೆ ಮಾಡುವುದು ಸೂಕ್ತ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ.

ಗಂಗೂಲಿ ಪ್ರಕಾರ, ತಿಲಕ್ ವರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲೂ ಮಧ್ಯಮ ಕ್ರಮಾಂಕದಲ್ಲಿ ಮಿಂಚಿದ್ದರು. ಹೀಗಾಗಿ ಶ್ರೇಯಸ್ ಅಯ್ಯರ್ ಹೊರಗುಳಿದರೆ ನಾಲ್ಕನೇ ಕ್ರಮಾಂಕಕ್ಕೆ ತಿಲಕ್ ವರ್ಮಾ ಅವರನ್ನು ಆಯ್ಕೆ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ.

ಟೀಮ್ ಇಂಡಿಯಾಗೆ ಎಡಗೈ ದಾಂಡಿಗ ಅನಿವಾರ್ಯ:

ಪ್ರಸ್ತುತ ಸನ್ನಿವೇಶದಲ್ಲಿ ಟೀಮ್ ಇಂಡಿಯಾಗೆ ಎಡಗೈ ದಾಂಡಿಗನ ಅವಶ್ಯಕತೆಯಿದೆ. ಏಕೆಂದರೆ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿಯುವ ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಬಲಗೈ ದಾಂಡಿಗರು. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಹಾಗೆಯೇ ನಾಲ್ಕನೇ ಮತ್ತು ಐದನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಆಡಬಹುದು. ಇನ್ನು ಆರನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸಬಹುದು.

ಇಲ್ಲಿ ಎಡಗೈ ದಾಂಡಿಗನಾಗಿ 7ನೇ ಕ್ರಮಾಂಕದವರೆಗೆ ಕಾಯಲೇಬೇಕು. ಅಂದರೆ ರವೀಂದ್ರ ಜಡೇಜಾ ಅವರನ್ನು ಹೊರತುಪಡಿಸಿದರೆ ಟೀಮ್ ಇಂಡಿಯಾದಲ್ಲಿ ಖಾಯಂ ಎಡಗೈ ಬ್ಯಾಟರ್ ಇಲ್ಲ. ಹೀಗಾಗಿಯೇ ಮಧ್ಯಮ ಕ್ರಮಾಂಕದಲ್ಲಿ ಓರ್ವ ಎಡಗೈ ದಾಂಡಿಗನ ಅವಶ್ಯಕತೆ ಹೆಚ್ಚಿದೆ.

ಇದನ್ನೂ ಓದಿ: Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

ಇತ್ತ ಶ್ರೇಯಸ್ ಅಯ್ಯರ್ ಏಷ್ಯಾಕಪ್ ತಂಡದಿಂದ ಹೊರಗುಳಿದರೆ ಆ ಸ್ಥಾನದಲ್ಲಿ ತಿಲಕ್ ವರ್ಮಾ ಅವರನ್ನು ಕಣಕ್ಕಿಳಿಸುವುದು ಸೂಕ್ತ ನಿರ್ಧಾರ. ಆದರೆ ಇದು ಸಾಧ್ಯವಾಗುವುದು ಅಯ್ಯರ್ ಹೊರಗುಳಿದರೆ ಮಾತ್ರ ಎಂಬುದು ಇಲ್ಲಿ ಉಲ್ಲೇಖಾರ್ಹ. ಇಲ್ಲದಿದ್ದರೆ ಭಾರತ ತಂಡವು 6 ಬಲಗೈ ಬ್ಯಾಟರ್​ಗಳೊಂದಿಗೆ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಏಷ್ಯಾಕಪ್ ಫೈನಲ್ ಯಾವಾಗ?

ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಇನ್ನು ಫೈನಲ್  ಪಂದ್ಯ ಸೆಪ್ಟೆಂಬರ್​ 17 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಕಣಕ್ಕಿಳಿಯಲಿದೆ. ಇನ್ನು ಟೀಮ್ ಇಂಡಿಯಾ ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್
ಅಲೆಗಳ ಅಬ್ಬರ ಕಂಡು ಮೀನುಗಾರರರೂ ಸಮುದ್ರಕ್ಕಿಳಿಯುತ್ತಿಲ್ಲ
ಅಲೆಗಳ ಅಬ್ಬರ ಕಂಡು ಮೀನುಗಾರರರೂ ಸಮುದ್ರಕ್ಕಿಳಿಯುತ್ತಿಲ್ಲ
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು