AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?

Sourav Ganguly Biopic: ಸೌರವ್ ಗಂಗೂಲಿ ಅವರ ಜೀವನಚರಿತ್ರೆಯ ಆಧರಿಸಿದ ಚಲನಚಿತ್ರ 2026 ರಲ್ಲಿ ಚಿತ್ರೀಕರಣಗೊಳ್ಳಲಿದೆ. ಪ್ರಸಿದ್ಧ ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ಗಂಗೂಲಿ ಪಾತ್ರ ನಿರ್ವಹಿಸಲಿದ್ದಾರೆ ಎಂದು ಗಂಗೂಲಿ ಅವರೇ ಘೋಷಿಸಿದ್ದಾರೆ. ಚಿತ್ರಕಥೆ ಮತ್ತು ಕಥೆಯ ಕೆಲಸ ಪೂರ್ಣಗೊಂಡ ನಂತರ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರವು ಗಂಗೂಲಿ ಅವರ ಕ್ರಿಕೆಟ್ ವೃತ್ತಿಜೀವನ ಮತ್ತು ಬಿಸಿಸಿಐ ಅಧ್ಯಕ್ಷರಾಗಿ ಅವರ ಸೇವೆಯನ್ನು ಚಿತ್ರಿಸಲಿದೆ.

Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್​ಗೆ ನಾಯಕ ಫಿಕ್ಸ್; ಚಿತ್ರೀಕರಣ ಯಾವಾಗ ಆರಂಭ?
Sourav Ganguly
ಪೃಥ್ವಿಶಂಕರ
|

Updated on:Jun 23, 2025 | 10:25 PM

Share

ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾ ಬರಲಿದೆ ಎಂಬ ಸುದ್ದಿ ಬಹಳ ಹಿಂದೆಯೇ ಹೊರಬಿದ್ದಿತ್ತು. ಇದೀಗ ಈ ಬಯೋಪಿಕ್ (biopic)​ ಬಗ್ಗೆ ಸ್ವತಃ ಗಂಗೂಲಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದ ಗಂಗೂಲಿಗೆ ಪ್ರಪಂಚದಾದ್ಯಂತ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರ ಬಯೋಪಿಕ್​ಗೆ ಸಂಬಂಧಿಸಿದ ಕೆಲಸಗಳು ಶುರುವಾಗಿದ್ದು, ಚಿತ್ರೀಕರಣ 2026 ರಿಂದ ಪ್ರಾರಂಭವಾಗಲಿದೆ ಎಂದು ಗಂಗೂಲಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲ, ಪ್ರಸಿದ್ಧ ಬಾಲಿವುಡ್ ನಟ ರಾಜ್‌ಕುಮಾರ್ ರಾವ್, ಗಂಗೂಲಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸ್ವತಃ ಗಂಗೂಲಿ ಅವರೇ ತಿಳಿಸಿದ್ದಾರೆ.

2026 ರಲ್ಲಿ ಚಿತ್ರೀಕರಣ ಪ್ರಾರಂಭ

ಪಿಟಿಐ ಜೊತೆ ಮಾತನಾಡಿದ ಸೌರವ್ ಗಂಗೂಲಿ, ತಮ್ಮ ಜೀವನ ಚರಿತ್ರೆಯ ಕೆಲಸ ವೇಗವಾಗಿ ನಡೆಯುತ್ತಿದ್ದು, 2026 ರ ಆರಂಭದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಬಹಿರಂಗಪಡಿಸಿದರು. ಈ ಚಿತ್ರದಲ್ಲಿ ಪ್ರಸಿದ್ಧ ನಟ ರಾಜ್‌ಕುಮಾರ್ ರಾವ್ ಗಂಗೂಲಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ಚಿತ್ರಕಥೆ ಮತ್ತು ಕಥೆಯ ಕೆಲಸ ಮುಗಿದ ತಕ್ಷಣ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಗಂಗೂಲಿ ಹೇಳಿದ್ದಾರೆ. ಚಿತ್ರೀಕರಣಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಆದರೆ ಪೋಸ್ಟ್ ಪ್ರೊಡಕ್ಷನ್ಸ್​ಗೆ ಸಮಯ ತೆಗೆದುಕೊಳ್ಳಬಹುದು ಎಂದಿದ್ದಾರೆ.

ಗಂಗೂಲಿ, ಟೀಂ ಇಂಡಿಯಾ ಪರ 113 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 42.17 ಸರಾಸರಿಯಲ್ಲಿ 7212 ರನ್ ಗಳಿಸಿದ್ದಾರೆ. ಇದರಲ್ಲಿ 16 ಶತಕಗಳು ಸೇರಿದ್ದು, ಅವರ ಗರಿಷ್ಠ ವೈಯಕ್ತಿಕ ಸ್ಕೋರ್ 239 ರನ್ ಆಗಿದೆ. ಏಕದಿನ ಕ್ರಿಕೆಟ್‌ನಲ್ಲಿ, ಅವರು 311 ಪಂದ್ಯಗಳನ್ನಾಡಿದ್ದು, 42.02 ಸರಾಸರಿಯಲ್ಲಿ 11363 ರನ್ ಗಳಿಸಿದ್ದಾರೆ. ಇದರಲ್ಲಿ 22 ಶತಕಗಳು ಸೇರಿವೆ. ಈ ಸ್ವರೂಪದಲ್ಲಿ ಅವರ ಅತ್ಯಧಿಕ ವೈಯಕ್ತಿಕ ಸ್ಕೋರ್ 183 ರನ್ ಆಗಿದೆ.

ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗಿನ ಎಲ್ಲಾ ಸಂಬಂಧಕ್ಕೂ ಅಂತ್ಯ ಹಾಡಬೇಕು; ಸೌರವ್ ಗಂಗೂಲಿ

ಬಿಸಿಸಿಐ ಅಧ್ಯಕ್ಷರಾಗಿದ್ದ ಗಂಗೂಲಿ

ಸೌರವ್ ಗಂಗೂಲಿ ಅವರನ್ನು 2019 ರಲ್ಲಿ ಬಿಸಿಸಿಐ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಈ ಮೂಲಕ ಬಿಸಿಸಿಐ ಅಧ್ಯಕ್ಷರಾದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಗಂಗೂಲಿ ಪಾತ್ರರಾಗಿದ್ದರು. ಅವರಿಗೂ ಮೊದಲು, ವಿಜಯನಗರದ ಮಹಾರಾಜ್ ಕುಮಾರ್ ಈ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡ ಮೊದಲ ನಾಯಕರಾಗಿದ್ದರು.

ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ಬಗ್ಗೆ ಹೇಳುವುದಾದರೆ, ಅವರು ಇತ್ತೀಚೆಗೆ ಭೂಲ್ ಚೂಕ್ ಮಾಫ್ ಚಿತ್ರದಲ್ಲಿ ಅದ್ಭುತ ಅಭಿನಯ ಮಾಡಿದ್ದು, ಪ್ರೇಕ್ಷಕರು ರಾಜ್‌ಕುಮಾರ್ ರಾವ್ ಅವರ ನಟನೆಯನ್ನು ಶ್ಲಾಘಿಸಿದ್ದರು. ಇದಲ್ಲದೆ ಅವರ ಸ್ತ್ರೀ, ಸ್ತ್ರೀ 2, ಶ್ರೀಕಾಂತ್, ಮಿಸ್ಟರ್ ಅಂಡ್ ಮಿಸ್ ಮಾಹಿ, ರೂಹಿ, ಛಲಾಂಗ್ ಸಿನಿಮಾಗಳು ಜನಪ್ರಿಯತೆ ಗಳಿಸಿವೆ. ಇವೆಲ್ಲದರ ಜೊತೆಗೆ, ಅವರು ಅನೇಕ ಚಲನಚಿತ್ರಗಳಲ್ಲಿಯೂ ಕೆಲಸ ಮಾಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Mon, 23 June 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ