India vs Sri Lanka: ಬೆಂಗಳೂರಿನಲ್ಲಿ ನಡೆಯಲಿದೆ ಭಾರತ vs ಶ್ರೀಲಂಕಾ ಡೇ ನೈಟ್ ಟೆಸ್ಟ್: ಯಾವಾಗ..?

IND vs SL Pink Ball Test Match: ಬಿಸಿಸಿಐ ಫೆಬ್ರವರಿ ಕೊನೆಯಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವಣ ಸರಣಿಯನ್ನು ಆಯೋಜಿಸಿದೆ. ಇದರಲ್ಲಿ ಎರಡು ಪಂದ್ಯಗಳ ಟೆಸ್ಟ್ ಮತ್ತು ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಒಂದು ಪಂದ್ಯ ಅಹರ್ನಿಶಿ ಟೆಸ್ಟ್​ ಪಂದ್ಯ ಆಗಿದ್ದು, ಬೆಂಗಳೂರಿನಲ್ಲಿ ನಡೆಯಲಿದೆ.

India vs Sri Lanka: ಬೆಂಗಳೂರಿನಲ್ಲಿ ನಡೆಯಲಿದೆ ಭಾರತ vs ಶ್ರೀಲಂಕಾ ಡೇ ನೈಟ್ ಟೆಸ್ಟ್: ಯಾವಾಗ..?
Virat Kohli Batting
Follow us
TV9 Web
| Updated By: Vinay Bhat

Updated on: Feb 04, 2022 | 10:18 AM

ಟೀಮ್ ಇಂಡಿಯಾ (Team India) ಸದ್ಯ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಸಜ್ಜಾಗುತ್ತಿದೆ. ಫೆಬ್ರವರಿ 6 ರಂದು ಅಹ್ಮದಾಬಾದ್​ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಬಳಿಕ ಮೂರು ಪಂದ್ಯಗಳ ಟಿ20 ಸರಣಿ ಏರ್ಪಡಿಸಿದ್ದು ಫೆ. 16ಕ್ಕೆ ಶುರುವಾಗಲಿದೆ. ವಿಂಡೀಸ್ ವಿರುದ್ಧದ ಸರಣಿ ಮುಗಿದ ಬೆನ್ನಲ್ಲೇ ಭಾರತ ಮತ್ತೊಂದು ಮಹತ್ವದ ಸರಣಿಗೆ ಸಜ್ಜಾಗಬೇಕಿದೆ. ಬಿಸಿಸಿಐ ಫೆಬ್ರವರಿ ಕೊನೆಯಲ್ಲಿ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಣ ಸರಣಿಯನ್ನು ಆಯೋಜಿಸಿದೆ. ಇದರಲ್ಲಿ ಎರಡು ಪಂದ್ಯಗಳ ಟೆಸ್ಟ್ ಮತ್ತು ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ. 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಒಂದು ಪಂದ್ಯ ಅಹರ್ನಿಶಿ ಟೆಸ್ಟ್​ ಪಂದ್ಯ ಆಗಿದ್ದು, ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಗುರುವಾರ ಖಚಿತ ಪಡಿಸಿದ್ದಾರೆ. ಹೌದು, ಸಿಲಿಕಾನ್ ಸಿಟಿಯಲ್ಲಿ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ನಡೆಯಲಿದೆ. ಪ್ರಸ್ತುತ ನಾವು ಶ್ರೀಲಂಕಾ ವಿರುದ್ಧದ ಸರಣಿಯ ಇತರೆ ಪಂದ್ಯಗಳ ಸ್ಥಳಗಳನ್ನು ಅಂತಿಮಗೊಳಿಸಿಲ್ಲ. ಶೀಘ್ರದಲ್ಲೇ ಘೋಷಿಸಲಿದ್ದೇವೆ ಎಂದು ಸ್ಪೋರ್ಟ್ಸ್​ ಸ್ಟಾರ್​ಗೆ ಮಾಹಿತಿ ನೀಡಿದ್ದಾರೆ.

ಇದು ಭಾರತದಲ್ಲಿ ನಡೆಯುವ 3ನೇ ಪಿಂಕ್‌ ಬಾಲ್‌ ಟೆಸ್ಟ್‌ ಪಂದ್ಯವಾಗಲಿದೆ. ಇದಕ್ಕೂ ಮೊದಲು 2019ರಲ್ಲಿ ಬಾಂಗ್ಲಾದೇಶ ವಿರುದ್ಧ ಕೋಲ್ಕತಾದಲ್ಲಿ, ಕಳೆದ ವರ್ಷ ಇಂಗ್ಲೆಂಡ್‌ ವಿರುದ್ಧ ಅಹ್ಮದಾಬಾದ್‌ನಲ್ಲಿ ಹಗಲು-ರಾತ್ರಿ ಟೆಸ್ಟ್‌ ಆಡಲಾಗಿತ್ತು. ಈ ಪಂದ್ಯಗಳಲ್ಲಿ ಭಾರತ ಕ್ರಮವಾಗಿ ಇನ್ನಿಂಗ್ಸ್‌/46 ರನ್‌ ಹಾಗೂ 10 ವಿಕೆಟ್‌ ಜಯ ಗಳಿಸಿತ್ತು. ಇದೀಗ ಮೂರನೇ ಡೇ- ನೈಟ್ ಟೆಸ್ಟ್ ಪಂದ್ಯವನ್ನು ಭಾರತ ಬೆಂಗಳೂರಿನಲ್ಲಿ ಇದೇ ಫೆಬ್ರವರಿ 25 ರಂದು ಆಡುವುದು ಬಹುತೇಕ ಖಚಿತವಾಗಿದೆ.

ವಿರಾಟ್ ಕೊಹ್ಲಿಗೆ 100ನೇ ಟೆಸ್ಟ್:

ಹೌದು, ಸದ್ಯ ವಿರಾಟ್ ಕೊಹ್ಲಿ 99 ಟೆಸ್ಟ್ ಪಂದ್ಯಗಳನ್ನಾಡಿದ್ದು ತನ್ನ ನೂರನೇ ಟೆಸ್ಟ್ ಪಂದ್ಯವನ್ನಾಡಬೇಕಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳು ಮುಗಿದ ನಂತರ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯವು ಕೊಹ್ಲಿ ಆಡಲಿರುವ ನೂರನೇ ಟೆಸ್ಟ್ ಪಂದ್ಯವಾಗಿದ್ದು, ಈ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವುದು ಕೊಹ್ಲಿಗೂ ವಿಶೇಷವಾಗಿದೆ. ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ವಿರಾಟ್ ಕೊಹ್ಲಿ ತನ್ನ ನೂರನೇ ಟೆಸ್ಟ್ ಪಂದ್ಯದಲ್ಲಿ ತಾನೇ ನಾಯಕನಾಗಿ ಕಣಕ್ಕಿಳಿಯಬೇಕಿತ್ತು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋತ ಬೆನ್ನಲ್ಲೇ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದು, ಬಿಸಿಸಿಐ ಭಾರತ ಟೆಸ್ಟ್ ತಂಡದ ಮುಂದಿನ ನಾಯಕ ಯಾರು ಎಂಬುದನ್ನು ಘೋಷಿಸಬೇಕಿದೆ.

ಭಾರತದಲ್ಲೇ ಐಪಿಎಲ್​:

ಕೋವಿಡ್ 19 ಪ್ರಕರಣಗಳ ಹೆಚ್ಚಳ ತೊಂದರೆಯನ್ನುಂಟು ಮಾಡದಿದ್ದರೆ ಐಪಿಎಲ್ 2022 ಅನ್ನು ಭಾರತದಲ್ಲಿ ನಡೆಸಲಾಗುವುದು ಎಂದು ಗಂಗೂಲಿ ದೃಢಪಡಿಸಿದ್ದಾರೆ. ಸ್ಥಳಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ – ಮುಂಬೈ ಮತ್ತು ಪುಣೆಯಲ್ಲಿ ಪಂದ್ಯಗಳನ್ನು ಆಯೋಜಿಸಲು ನಾವು ಎದುರು ನೋಡುತ್ತಿದ್ದೇವೆ. ನಾಕೌಟ್ ಹಂತಗಳಿಗೆ ಸ್ಥಳಗಳನ್ನು ನಂತರ ತೀರ್ಮಾನಿಸುತ್ತೇವೆ ಎಂದು ಬಿಸಿಸಿಐ ಅಧ್ಯಕ್ಷ ತಿಳಿಸಿದ್ದಾರೆ.

Virat Kohli: U19 ವಿಶ್ವಕಪ್ ಫೈನಲ್​ಗೂ ಮುನ್ನ ಕೊಹ್ಲಿಯಿಂದ ಭಾರತೀಯ ಕಿರಿಯರಿಗೆ ಫೋನ್ ಕಾಲ್: ಏನಂದ್ರು?

IND vs WI: ಟೀಮ್ ಇಂಡಿಯಾದಲ್ಲಿ ಕೊರೊನಾ: ಹೊಸ ಅಪ್ಡೇಟ್ ಏನು?, ಪಂದ್ಯ ನಡೆಯುತ್ತಾ, ಇಲ್ವಾ?: ಇಲ್ಲಿದೆ ಮಾಹಿತಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ