AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗಿನ ಎಲ್ಲಾ ಸಂಬಂಧಕ್ಕೂ ಅಂತ್ಯ ಹಾಡಬೇಕು; ಸೌರವ್ ಗಂಗೂಲಿ

Sourav Ganguly: ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ, ಭಾರತದ ಮಾಜಿ ಕ್ರಿಕೆಟ್ ನಾಯಕ ಸೌರವ್ ಗಂಗೂಲಿ ಪಾಕಿಸ್ತಾನದೊಂದಿಗಿನ ಕ್ರಿಕೆಟ್ ಸಂಬಂಧವನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಭಯೋತ್ಪಾದನೆಯನ್ನು ಸಹಿಸಲಾಗದು ಎಂದು ಅವರು ಹೇಳಿದ್ದಾರೆ. ಬಿಸಿಸಿಐ ಕೂಡ ಈ ದಾಳಿಯನ್ನು ಖಂಡಿಸಿ, ಐಪಿಎಲ್ ಪಂದ್ಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದೆ. ಇತರ ಕ್ರಿಕೆಟಿಗರೂ ಸಹ ಗಂಗೂಲಿಯ ಅಭಿಪ್ರಾಯಕ್ಕೆ ಬೆಂಬಲ ನೀಡಿದ್ದಾರೆ.

ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗಿನ ಎಲ್ಲಾ ಸಂಬಂಧಕ್ಕೂ ಅಂತ್ಯ ಹಾಡಬೇಕು; ಸೌರವ್ ಗಂಗೂಲಿ
Sourav Ganguly
ಪೃಥ್ವಿಶಂಕರ
|

Updated on: Apr 26, 2025 | 6:59 PM

Share

ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terrorist Attack) ನಂತರ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಪಾಕಿಸ್ತಾನದೊಂದಿಗಿನ ಸಂಬಂಧದ ಬಗ್ಗೆ ಕಠಿಣ ನಿಲುವು ತೆಗೆದುಕೊಂಡಿದ್ದಾರೆ. ಪಾಕಿಸ್ತಾನದೊಂದಿಗಿನ ಸಂಬಂಧವನ್ನು 100 ಪ್ರತಿಶತ ಕೊನೆಗೊಳಿಸಬೇಕು ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುವುದು ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂದು ಗಂಗೂಲಿ ಹೇಳಿಕೆ ನೀಡಿದ್ದಾರೆ.

ಇದು ತಮಾಷೆಯಲ್ಲ

ಉಗ್ರರ ದಾಳಿಯ ಬಗ್ಗೆ ಉಗ್ರವಾಗಿ ಪ್ರತಿಕ್ರಿಯಿಸಿದ ಸೌರವ್ ಗಂಗೂಲಿ, ‘ಪಹಲ್ಗಾಮ್ ಘಟನೆ ತಮಾಷೆಯಲ್ಲ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಡೀ ದೇಶದಾದ್ಯಂತ ಈ ದಾಳಿಯನ್ನು ಖಂಡಿಸಲಾಗುತ್ತಿದೆ. ಹೀಗಾಗಿ ಪಾಕಿಸ್ತಾನದ ವಿರುದ್ಧ ಐಸಿಸಿ ಮತ್ತು ಏಷ್ಯನ್ ಪಂದ್ಯಾವಳಿಗಳಲ್ಲಿಯೂ ಆಡಬಾರದು. ಕ್ರಿಕೆಟ್ ಜೊತೆಗೆ ಪಾಕಿಸ್ತಾನದೊಂದಿಗೆ ಯಾವ ಸಂಬಂಧವೂ ಬೇಡ ಎಂದು ಗಂಗೂಲಿ ಗುಡುಗಿದ್ದಾರೆ.

ಗಂಗೂಲಿ ಮಾತ್ರವಲ್ಲದೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶ್ರೀವತ್ಸ್ ಗೋಸ್ವಾಮಿ ಪಾಕಿಸ್ತಾನದೊಂದಿಗಿನ ಕ್ರೀಡಾ ಸಂಬಂಧಗಳನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದರು. ಪಾಕಿಸ್ತಾನದೊಂದಿಗೆ ಭಾರತ ಕ್ರಿಕೆಟ್ ಆಡಬಾರದು. ಈಗ ಮಾತ್ರವಲ್ಲ, ಎಂದಿಗೂ ಉಭಯ ತಂಡಗಳು ಪಂದ್ಯವನ್ನಾಡಬಾರದು. ಅಮಾಯಕ ಭಾರತೀಯರನ್ನು ಕೊಲ್ಲುವುದು ಪಾಕಿಸ್ತಾನದ ರಾಷ್ಟ್ರೀಯ ಕ್ರೀಡೆಯಾಗಿ ಮಾರ್ಪಟ್ಟಿದೆ. ಹೀಗಿರುವಾ ಭಾರತ ಬ್ಯಾಟ್ ಮತ್ತು ಚೆಂಡಿನಿಂದ ಅಲ್ಲ, ಶೂನ್ಯ ಸಹಿಷ್ಣುತೆಯಿಂದ ಪ್ರತಿಕ್ರಿಯಿಸಬೇಕು ಎಂದಿದ್ದಾರೆ.

IPL 2025: ರೋಹಿತ್ ಶರ್ಮಾಗೆ ವಿಶೇಷ ಸ್ಮರಣಿಕೆ ನೀಡಿ ಗೌರವಿಸಿದ ಬಿಸಿಸಿಐ; ವಿಡಿಯೋ ನೋಡಿ

ಬಿಸಿಸಿಐ ಶ್ರದ್ಧಾಂಜಲಿ

ಪಹಲ್ಗಾಮ್‌ನಲ್ಲಿ ನಡೆದ ಈ ಭಯೋತ್ಪಾದಕ ದಾಳಿಯ ನಂತರ, ಬಿಸಿಸಿಐ ಕೂಡ ಈ ವಿಷಯದಲ್ಲಿ ಕಟ್ಟುನಿಟ್ಟಾಗಿದೆ. ಈ ಹೇಡಿತನದ ದಾಳಿಯನ್ನು ಖಂಡಿಸಿರುವ ಬಿಸಿಸಿಐ, ಐಪಿಎಲ್ ಪಂದ್ಯದ ವೇಳೆ ಈ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಹೈದರಾಬಾದ್-ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಒಂದು ನಿಮಿಷ ಮೌನಾಚರಣೆ ನಡೆಸಿದಲ್ಲದೆ ಆಟಗಾರರು ಕಪ್ಪು ಪಟ್ಟಿ ಧರಿಸಿ ಪಂದ್ಯವನ್ನು ಆಡಿದ್ದರು. ಈ ಪಂದ್ಯದಲ್ಲಿ ಯಾವುದೇ ಚಿಯರ್‌ಲೀಡರ್‌ಗಳಿರಲಿಲ್ಲ. ಜೊತೆಗೆ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿತ್ತು.

ಹಾಗೆಯೇ ಈ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು ಮತ್ತು ಭಾರತ ಸರ್ಕಾರ ಏನು ಹೇಳುತ್ತದೆಯೋ, ಬಿಸಿಸಿಐ ಅದನ್ನೇ ಮಾಡುತ್ತದೆ. ನಾವು ಪಾಕಿಸ್ತಾನದ ವಿರುದ್ಧ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ನಾವು ಅಮಾಯಕರೊಂದಿಗೆ ಇದ್ದು, ಇಡೀ ಘಟನೆಯನ್ನು ಖಂಡಿಸುತ್ತೇವೆ. ನಮ್ಮ ಸರ್ಕಾರ ಏನು ಹೇಳುತ್ತದೆಯೋ, ಅದನ್ನು ಮಾಡುತ್ತೇವೆ ಎಂದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು