IND vs SA: ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್​ಗೆ ಅವಕಾಶ? ಬಿಗ್ ಅಪ್​ಡೇಟ್ ನೀಡಿದ ಗಂಗೂಲಿ

Sanju Samson: ಸಂಜು ನಾಯಕತ್ವದಲ್ಲಿ ಭಾರತ ತಂಡ ಈ ಸರಣಿಯನ್ನು 3-0 ಅಂತರದಲ್ಲಿ ಗೆಲ್ಲುವಲ್ಲೂ ಯಶಸ್ವಿಯಾಗಿತ್ತು. ಸ್ವತಃ ನಾಯಕತ್ವವಹಿಸಿಕೊಂಡಿದ್ದ ಸಂಜು ಮೂರು ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಸೇರಿದಂತೆ 100ಕ್ಕೂ ಹೆಚ್ಚು ರನ್ ಗಳಿಸಿ ತಂಡವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

IND vs SA: ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್​ಗೆ ಅವಕಾಶ? ಬಿಗ್ ಅಪ್​ಡೇಟ್ ನೀಡಿದ ಗಂಗೂಲಿ
Sanju Samson
Follow us
TV9 Web
| Updated By: ಪೃಥ್ವಿಶಂಕರ

Updated on: Sep 29, 2022 | 2:28 PM

ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa) ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಿನ್ನೆಯಿಂದ ಆರಂಭವಾಗಿದೆ. ಮೂರು ವರ್ಷಗಳ ನಂತರ ಅಂತರಾಷ್ಟ್ರೀಯ ಕ್ರಿಕೆಟ್ ಮರಳಿರುವ ಕೇರಳದ ತಿರುವನಂತಪುರಂನಲ್ಲಿ ಸರಣಿಯ ಮೊದಲ ಪಂದ್ಯ ನಡೆದಿದ್ದು, ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಎಲ್ಲಾ ವಿಭಾಗದಲ್ಲೂ ಮಿಂಚಿನ ಪ್ರದರ್ಶನ ನೀಡಿದ ಟೀಂ ಇಂಡಿಯಾ ಆಟವನ್ನು ಅಭಿಮಾನಿಗಳು ಕಣ್ತುಂಬಿಕೊಂಡರು. ಆದರೆ ತಮ್ಮದೇ ಸ್ಥಳೀಯ ಸ್ಟಾರ್ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ (Sanju Samson) ತಂಡದಲ್ಲಿ ಅವಕಾಶ ಸಿಗದಿರುವ ಬಗ್ಗೆ ಸ್ವಲ್ಪ ನಿರಾಸೆಯನ್ನು ವ್ಯಕ್ತಪಡಿಸಿದರು. ಆದರೆ ಸಂಜು ಅಭಿಮಾನಿಗಳಿಗೆ ಖುಷಿ ನೀಡುವಂತಹ ವಿಚಾರವೊಂದನ್ನು ಬಿಸಿಸಿಐ ಅಧ್ಯಕ್ಷ ಗಂಗೂಲಿ (Sourav Ganguly) ಬಹಿರಂಗಪಡಿಸಿದ್ದಾರೆ. ಟಿ20 ಸರಣಿಯಲ್ಲಿ ಸಂಜುಗೆ ಸ್ಥಾನ ಸಿಗದಿದ್ದರೂ, ಏಕದಿನ ಸರಣಿಯಲ್ಲಿ ಅವರಿಗೆ ಸ್ಥಾನ ಸಿಗುವುದು ಖಚಿತ ಎಂದು ಸೌರವ್ ಗಂಗೂಲಿ ಹೇಳಿಕೆ ನೀಡಿದ್ದಾರೆ.

ಟಿ20 ಸರಣಿಯ ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 3 ಪಂದ್ಯಗಳ ODI ಸರಣಿಯೂ ನಡೆಯಲಿದೆ. ಈ ಸರಣಿಯು ಅಕ್ಟೋಬರ್ 6 ರಿಂದ ಪ್ರಾರಂಭವಾಗಲಿದ್ದು, ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಈ ಸರಣಿಗೆ ಎರಡನೇ ದರ್ಜೆಯ ತಂಡವನ್ನು ಕಣಕ್ಕಿಳಿಸಲು ಹೊರಟಿದೆ. ಈ ಸರಣಿಗೆ ಶಿಖರ್ ಧವನ್ ಅವರನ್ನು ನಾಯಕನಾಗಿ ಕಣಕ್ಕಿಳಿಸುವುದು ಖಚಿತವಾಗಿದೆ. ಅಲ್ಲದೆ ಈ ಮೂಲಕ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾದ ಹಲವು ಆಟಗಾರರಿಗೂ ಅವಕಾಶ ನೀಡಲು ಬಿಸಿಸಿಐ ಮುಂದಾಗಿದೆ.

ಸ್ಯಾಮ್ಸನ್​ಗೆ ಏಕದಿನ ಸರಣಿಯಲ್ಲಿ ಅವಕಾಶ

ಇದನ್ನೂ ಓದಿ
Image
Ind A vs NZ A: ಮಿಂಚಿದ ರಜತ್, ಶಾರ್ದೂಲ್, ಕುಲ್ದೀಪ್; ನಾಯಕನಾಗಿ ಮೊದಲ ಪಂದ್ಯ ಗೆದ್ದ ಸಂಜು..!
Image
‘ಬಿಸಿಸಿಐ ಒತ್ತಡಕ್ಕೆ ಸಿಲುಕಿ ಸಂಜುಗೆ ತಂಡದ ನಾಯಕತ್ವ ವಹಿಸಿದೆ’; ಪಾಕ್ ಕ್ರಿಕೆಟಿಗನ ಗಂಭೀರ ಆರೋಪ
Image
T20 World Cup : ಈ ಬಾರಿಯ ಟಿ20 ವಿಶ್ವಕಪ್ ಮಿಸ್ ಮಾಡಿಕೊಳ್ಳುತ್ತಿರುವ ವಿಶ್ವದ ಸ್ಟಾರ್ ಕ್ರಿಕೆಟಿಗರಿವರು

ಅಂತಹ ಹಲವು ಆಟಗಾರರ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ ಹೆಸರು ಮುಂಚೂಣಿಯಲ್ಲಿದ್ದು, ಪ್ರತಿಭೆಯಿದ್ದರೂ ಸಂಜುಗೆ ಟೀಂ ಇಂಡಿಯಾದಲ್ಲಿ ಖಾಯಂ ಅವಕಾಶ ಸಿಗುತ್ತಿಲ್ಲ ಎಂದು ಪರಿಣಿತರು ಹಾಗೂ ಅಭಿಮಾನಿಗಳು ಕೆಂಡಕಾರುತ್ತಿದ್ದಾರೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಸ್ಯಾಮ್ಸನ್​ಗೆ ಏಕದಿನ ಸರಣಿಯಲ್ಲಿ ಅವಕಾಶ ನೀಡಲು ಸಿದ್ಧವಾಗಿದೆ. ಇದನ್ನು ಸ್ವತಃ ಬಿಸಿಸಿಐ ಅಧ್ಯಕ್ಷ ಗಂಗೂಲಿಯೇ ಖಚಿತಪಡಿಸಿದ್ದಾರೆ. ಸೆಪ್ಟೆಂಬರ್ 28 ರ ಬುಧವಾರದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿದ ಗಂಗೂಲಿ, ಮುಂಬರುವ ದಿನಗಳಲ್ಲಿ ಸಂಜುಗೆ ಅವಕಾಶಗಳು ಸಿಗುತ್ತವೆ ಎಂದು ಹೇಳಿದರು.

ಸಂಜು ಇತ್ತೀಚಿನ ಎಲ್ಲಾ ಸರಣಿಗಳಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಆದರೆ ಟಿ20 ವಿಶ್ವಕಪ್​ಗೆ ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿರುವುದರಿಂದ ಅವರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ಸಿಗುವುದಿಲ್ಲ. ಆದರೆ ಸಂಜು ಖಂಡಿತವಾಗಿಯೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಆಡಲಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ಐಪಿಎಲ್‌ನಲ್ಲಿ ನಾಯಕತ್ವವನ್ನು ಉತ್ತಮವಾಗಿ ನಿಭಾಯಿಸಿದಲ್ಲದೆ, ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ ಎಂದು ಗಂಗೂಲಿ ತಮ್ಮ ಅಭಿಪ್ರಾಯ ಹೊರಹಾಕಿದರು.

ಭಾರತ ‘ಎ’ ತಂಡದ ಪರ ಮಿಂಚಿದ ಸಂಜು

ನ್ಯೂಜಿಲೆಂಡ್ ಎ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸ್ಯಾಮ್ಸನ್‌ಗೆ ಇತ್ತೀಚೆಗೆ ಭಾರತ ಎ ತಂಡದ ನಾಯಕತ್ವವನ್ನು ನೀಡಲಾಗಿತ್ತು. ಸಂಜು ನಾಯಕತ್ವದಲ್ಲಿ ಭಾರತ ತಂಡ ಈ ಸರಣಿಯನ್ನು 3-0 ಅಂತರದಲ್ಲಿ ಗೆಲ್ಲುವಲ್ಲೂ ಯಶಸ್ವಿಯಾಗಿತ್ತು. ಸ್ವತಃ ನಾಯಕತ್ವವಹಿಸಿಕೊಂಡಿದ್ದ ಸಂಜು ಮೂರು ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಸೇರಿದಂತೆ 100ಕ್ಕೂ ಹೆಚ್ಚು ರನ್ ಗಳಿಸಿ ತಂಡವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅಲ್ಲದೆ ಸ್ಯಾಮ್ಸನ್ ಇತ್ತೀಚೆಗೆ ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ಪ್ರವಾಸದಲ್ಲಿ ಕೆಲವು ಪಂದ್ಯಗಳಲ್ಲಿ ಆಡಲು ಅವಕಾಶ ಪಡೆದಿದ್ದರು. ಇಲ್ಲಿ ಸ್ಯಾಮ್ಸನ್ ಎರಡು-ಮೂರು ಉತ್ತಮ ಮತ್ತು ಪ್ರಮುಖ ಇನ್ನಿಂಗ್ಸ್ ಆಡಿದ್ದರು. ಅದಕ್ಕೂ ಮೊದಲು ಐರ್ಲೆಂಡ್ ಪ್ರವಾಸದಲ್ಲೂ ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಅಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿದಿದ್ದ ಸಂಜು ಆಕ್ರಮಣಕಾರಿ ಅರ್ಧಶತಕ ಗಳಿಸುವ ಮೂಲಕ ಆಯ್ಕೆ ಮಂಡಳಿಗೆ ಸಂದೇಶ ರವಾನಿಸಿದ್ದರು. ಸ್ಯಾಮ್ಸನ್ ಇದುವರೆಗೂ ಭಾರತ ಪರ 16 ಟಿ20 ಹಾಗೂ 7 ಏಕದಿನ ಪಂದ್ಯಗಳನ್ನು ಆಡಿದ್ದು, ಅವಕಾಶ ಸಿಕ್ಕಾಗಲೆಲ್ಲ ಅದನ್ನು ಸದುಪಯೋಗಪಡಿಸಿಕೊಂಡಿದ್ದಾರೆ.

ಹೆಚ್ಚಿನ  ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ