IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!

Sourav Ganguly: ಟಿ ನಟರಾಜನ್ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ. ನಮ್ಮಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಇದ್ದಾರೆ. ಹಾಗಾಗಿ ಯಾರಿಗೆ ಮಣೆ ಹಾಕಬೇಕೆಂಬುದು ಆಯ್ಕೆದಾರರು ನಿರ್ಧರಿಸುತ್ತಾರೆ.

IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!
Sourav Ganguly
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 16, 2022 | 6:28 PM

IPL 2022: ಐಪಿಎಲ್​ ಎಂಬುದು ಯುವ ಆಟಗಾರರಿಗೆ ಉತ್ತಮ ವೇದಿಕೆ. ಇಲ್ಲಿ ಮಿಂಚಿದ ಅನೇಕ ಆಟಗಾರರು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಜಸ್​ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾರಂತಹ ಆಟಗಾರರು ಐಪಿಎಲ್​ನಲ್ಲಿನ ಅದ್ಭುತ ಪ್ರದರ್ಶನದಿಂದ​ ಟೀಮ್ ಇಂಡಿಯಾದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಈ ಬಾರಿ ಕೂಡ ಅನೇಕ ಯುವ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರಲ್ಲಿ ಕೆಲವರು ಟೀಮ್ ಇಂಡಿಯಾ ಆಯ್ಕೆಗಾರರ ಗಮನ ಸೆಳೆದಿದ್ದಾರೆ. ಇನ್ನು ಕೆಲವರ ಪ್ರದರ್ಶನದಿಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರೇ ಪ್ರಭಾವಿತರಾಗಿದ್ದಾರೆ. ಹೀಗಾಗಿ ಎಲ್ಲರ ನಡುವೆ ಇಬ್ಬರು ಅನ್​ಕ್ಯಾಪ್ಡ್ ಆಟಗಾರರ ಪ್ರದರ್ಶನಕ್ಕೆ ಖುದ್ದು ಟೀಮ್ ಇಂಡಿಯಾದ ಮಾಜಿ ನಾಯಕ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಗೂಲಿ, ಈ ಬಾರಿಯ ಐಪಿಎಲ್​ನಲ್ಲಿ ಬೌಲರ್‌ಗಳ ಪ್ರಾಬಲ್ಯವನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ. ಮುಂಬೈ ಮತ್ತು ಪುಣೆಯಲ್ಲಿನ ವಿಕೆಟ್‌ಗಳು ಉತ್ತಮವಾಗಿವೆ. ಬೌಲರ್​ಗಳು ಉತ್ತಮ ಬೌನ್ಸ್ ಎಸೆಯುತ್ತಿದ್ದಾರೆ. ಸ್ಪಿನ್ನರ್‌ಗಳು ಕೂಡ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಅಲ್ಲದೆ ಯುವ ವೇಗಿಗಳೂ ಕೂಡ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಸನ್​ರೈಸರ್ಸ್​ ಹೈದರಾಬಾದ್ ತಂಡದ ಯುವ ವೇಗಿ ಉಮ್ರಾನ್ ಮಲಿಕ್ ಅವರ ಬೌಲಿಂಗ್​ನಿಂದ ನಾನು ಪ್ರಭಾವಿತನಾಗಿದ್ದೇನೆ ಎಂದು ಗಂಗೂಲಿ ತಿಳಿಸಿದ್ದಾರೆ. ವೇಗದಿಂದ ವೇಗಕ್ಕೆ ಅವರು ಮುನ್ನಡೆಯುತ್ತಿರುವುದು ಮತ್ತು ವಿಕೆಟ್ ತೆಗೆದುಕೊಳ್ಳುವ ಸಾಮರ್ಥ್ಯವು ಅದ್ಭುತ. 150 ಕಿಮೀ ವೇಗದಲ್ಲಿ ಎಷ್ಟು ಮಂದಿ ಬೌಲ್ ಮಾಡಬಹುದು? ಬಹಳಷ್ಟಿಲ್ಲ ಎಂಬುದು ನನ್ನ ಅನಿಸಿಕೆ. ಹೀಗಾಗಿ ಉಮ್ರಾನ್ ಮಲಿಕ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದರೆ ನನಗೆ ಆಶ್ಚರ್ಯವಿಲ್ಲ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಉಮ್ರಾನ್ ಮಲಿಕ್ ಅಲ್ಲದೆ, ನನಗೆ ಕುಲದೀಪ್ ಸೇನ್ ಅವರ ಬೌಲಿಂಗ್ ಕೂಡ ಅದ್ಭುತವಾಗಿದೆ. ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಕುಲದೀಪ್ ಸೇನ್ ಸೀಸನ್​ನಲ್ಲಿ ಏಳು ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ. ಆದರೆ ವಿಶೇಷವಾಗಿ ಡೆತ್ ಓವರ್​ಗಳಲ್ಲಿ ಪ್ರಭಾವಶಾಲಿಯಾಗಿದ್ದಾರೆ. ಈ ಇಬ್ಬರು ಅನ್​ಕ್ಯಾಪ್ಡ್​ ಬೌಲರ್​ಗಳ ಪ್ರದರ್ಶನಕ್ಕೆ ನಾನು ಫಿದಾ ಆಗಿದ್ದೇನೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಇದನ್ನೂ ಓದಿ
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

ಇದಾಗ್ಯೂ ಈ ಯುವ ಬೌಲರ್​ಗಳನ್ನು ಬಳಸುವಾಗ ನಾವು ಜಾಗರೂಕರಾಗಿರಬೇಕು. ಏಕೆಂದರೆ ಇಬ್ಬರಿಗೂ ಅನುಭವದ ಕೊರತೆಯಿದೆ. ಹೀಗಾಗಿ ಅವರನ್ನು ಉತ್ತಮ ಬಳಸಿಕೊಳ್ಳುವ ಮೂಲಕ ಭವಿಷ್ಯದ ಸ್ಟಾರ್ ಬೌಲರ್​ಗಳಾಗಿ ರೂಪಿಸಿಕೊಳ್ಳಬಹುದು ಎಂದು ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಈ ಇಬ್ಬರು ಬೌಲರ್​ಗಳನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡುವುದು ಆಯ್ಕೆದಾರರಿಗೆ ಬಿಟ್ಟ ವಿಷಯ ಎಂದಿದ್ದಾರೆ. ಏಕೆಂದರೆ ಟಿ ನಟರಾಜನ್ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ. ನಮ್ಮಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಇದ್ದಾರೆ. ಹಾಗಾಗಿ ಯಾರಿಗೆ ಮಣೆ ಹಾಕಬೇಕೆಂಬುದು ಆಯ್ಕೆದಾರರು ನಿರ್ಧರಿಸುತ್ತಾರೆ ಎಂದು ಗಂಗೂಲಿ ಹೇಳಿದರು.

ಈ ಬಾರಿ ಐಪಿಎಲ್​ನಲ್ಲಿ ಜಮ್ಮು ಕಾಶ್ಮೀರದ ಯುವ ವೇಗಿ ಉಮ್ರಾನ್ ಮಲಿಕ್ 12 ಪಂದ್ಯಗಳಲ್ಲಿ 18 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ 157 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ವೇಗದಲ್ಲಿ ಬೌಲಿಂಗ್ ಮಾಡಿದ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಅನ್​ಕ್ಯಾಪ್ಡ್​ ಬೌಲರ್ ಎಂಬ ದಾಖಲೆ ಕೂಡ ಉಮ್ರಾನ್ ಮಲಿಕ್ ಹೆಸರಿನಲ್ಲಿದೆ. ಹೀಗಾಗಿಯೇ ಸುನಿಲ್ ಗಾವಸ್ಕರ್ ಸೇರಿದಂತೆ ಅನೇಕ ಮಾಜಿ ಆಟಗಾರರು ಉಮ್ರಾನ್ ಮಲಿಕ್​ಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ