T20 World Cup: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ಆಯ್ಕೆ ಪ್ರಕ್ರಿಯೆ ಯಾವಾಗ? ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್

T20 World Cup: ದಕ್ಷಿಣ ಆಫ್ರಿಕಾ ಸರಣಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿಗೆ ಭಾರತ ವಿಶ್ರಾಂತಿ ನೀಡಿದ್ದು, ರವೀಂದ್ರ ಜಡೇಜಾ ಮತ್ತು ದೀಪಕ್ ಚಹಾರ್ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ.

T20 World Cup: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ಆಯ್ಕೆ ಪ್ರಕ್ರಿಯೆ ಯಾವಾಗ? ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್
Sourav Ganguly
Follow us
TV9 Web
| Updated By: ಪೃಥ್ವಿಶಂಕರ

Updated on:Jun 18, 2022 | 8:30 PM

ಐಸಿಸಿ ಟಿ20 ವಿಶ್ವಕಪ್ (ICC T20 World Cup) ಈ ವರ್ಷದ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಎಲ್ಲರ ಗಮನ ಈ ಬಾರಿಯ ವಿಶ್ವಕಪ್ ಮೇಲಿದೆ. ಭಾರತ ಕೂಡ ಈ ಬಾರಿಯ ವಿಶ್ವಕಪ್‌ಗೆ ತನ್ನ ತಂಡವನ್ನು ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿದೆ. ಈ ಅನುಕ್ರಮದಲ್ಲಿ ಟೀಂ ಇಂಡಿಯಾ (Team India) ಹಲವು ಯುವ ಆಟಗಾರರಿಗೆ ಅವಕಾಶ ನೀಡುತ್ತಿದೆ. ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯೇ ಇದಕ್ಕೆ ಉದಾಹರಣೆ. ಈ ನಡುವೆ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಯಾವ ಆಟಗಾರರು ಸ್ಥಾನ ಪಡೆಯುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ದೊಡ್ಡ ಮಾತು ಹೇಳಿದ್ದಾರೆ. ಯಾವಾಗ ವಿಶ್ವಕಪ್‌ಗೆ ಟೀಂ ಇಂಡಿಯಾದ ಚಿತ್ರಣ ಸ್ಪಷ್ಟವಾಗಲಿದೆ ಎಂದು ಗಂಗೂಲಿ ಹೇಳಿದ್ದಾರೆ. ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ (Rahul Dravid) ಮತ್ತು ತಂಡದ ಆಡಳಿತವು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟಿ20 ಸರಣಿಯಿಂದ ಟಿ20 ವಿಶ್ವಕಪ್​ಗೆ ಆಟಗಾರರನ್ನು ಗುರುತಿಸಲಿದೆ ಎಂದು ಗಂಗೂಲಿ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ಸರಣಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿಗೆ ಭಾರತ ವಿಶ್ರಾಂತಿ ನೀಡಿದ್ದು, ರವೀಂದ್ರ ಜಡೇಜಾ ಮತ್ತು ದೀಪಕ್ ಚಹಾರ್ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ. ಈ ಸರಣಿಗೆ ಕೆಎಲ್ ರಾಹುಲ್ ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿತ್ತು ಆದರೆ ಅವರು ಗಾಯಗೊಂಡಿದ್ದರು. ಹಾಗಾಗಿಯೇ ರಿಷಬ್ ಪಂತ್ ಟೀಂ ಇಂಡಿಯಾ ನಾಯಕತ್ವ ವಹಿಸುತ್ತಿದ್ದಾರೆ.

ಇದನ್ನೂ ಓದಿ:IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಇದನ್ನೂ ಓದಿ
Image
Dinesh Karthik: 16 ವರ್ಷ, 36 ಪಂದ್ಯ.. 3ನೇ ಬಾರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ; ಇದು ದಿನೇಶ್ ಕಾರ್ತಿಕ್ ಟಿ20 ಕರಿಯರ್
Image
IND vs SA 5th T20 Match Live Streaming: ಹರಿಣಗಳನ್ನು ಮಣಿಸಿ ಸರಣಿ ಗೆಲ್ಲುತ್ತಾ ಭಾರತ? ಪಂದ್ಯದ ಬಗ್ಗೆ ಒಂದಿಷ್ಟು ಮಾಹಿತಿ
Image
IND vs SA: ಕಾರ್ತಿಕ್- ಹಾರ್ದಿಕ್ ಅಬ್ಬರ.. ಅವೇಶ್- ಹರ್ಷಲ್ ಮಾರಕ ದಾಳಿ; ಭಾರತಕ್ಕೆ 82 ರನ್ ಜಯ

ರಾಹುಲ್ ದ್ರಾವಿಡ್ ಯೋಜನೆ ಏನು?

ರಾಹುಲ್ ದ್ರಾವಿಡ್ ಒಂದು ಸಂಪೂರ್ಣ ಆಯ್ದ ಆಟಗಾರರೊಂದಿಗೆ ಆಡುವ ಯೋಜನೆ ಹಾಕಿಕೊಂಡಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ. ಇಂಗ್ಲಿಷ್ ಪತ್ರಿಕೆ ಟೈಮ್ಸ್ ಆಫ್ ಇಂಡಿಯಾದೊಂದಿಗೆ ಮಾತನಾಡಿದ ಗಂಗೂಲಿ, “ರಾಹುಲ್ ದ್ರಾವಿಡ್ ಈ ಬಗ್ಗೆ ಗಮನ ಹರಿಸಿದ್ದಾರೆ. ಬಹುಶಃ ಮುಂದಿನ ತಿಂಗಳು ಇಂಗ್ಲೆಂಡ್ ಪ್ರವಾಸದಲ್ಲಿ ನಾವು T20 ವಿಶ್ವಕಪ್‌ನಲ್ಲಿ ಆಡುವ ಆಟಗಾರರನ್ನು ಆಯ್ಕೆ ಮಾಡುವತ್ತಾ ಗಮನ ಹರಿಸಲಿದ್ದೇವೆ ಎಂದಿದ್ದಾರೆ.

ಭಾರತ ಬಲಿಷ್ಠ ಪುನರಾಗಮನ

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ಬಲಿಷ್ಠವಾಗಿ ಪುನರಾಗಮನ ಮಾಡಿದೆ. ಆರಂಭಿಕ ಎರಡೂ ಪಂದ್ಯಗಳಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ನೀಡಿತು ಮತ್ತು ಸರಣಿಯಲ್ಲಿ 0-2 ಹಿನ್ನಡೆಯಲ್ಲಿತ್ತು. ಹೀಗಾಗಿ ಭಾರತಕ್ಕೆ ಸೋಲಿನ ಅಪಾಯ ಎದುರಾಗಿತ್ತು. ಆದರೆ ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ ಅವರಂತಹ ಅನುಭವಿ ಆಟಗಾರರನ್ನು ಹೊಂದಿರುವ ಈ ಯುವ ತಂಡವು ಮೂರು, ನಾಲ್ಕನೇ ಟಿ20 ಪಂದ್ಯವನ್ನು ಗೆದ್ದು ಸರಣಿಯನ್ನು 2-2 ರಿಂದ ಸಮಬಲಗೊಳಿಸಿತು. ಇದೀಗ ಸರಣಿಯ ಐದನೇ ಹಾಗೂ ಕೊನೆಯ ಪಂದ್ಯ ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ಕೈವಶ ಮಾಡಿಕೊಳ್ಳಲಿದೆ.

Published On - 8:30 pm, Sat, 18 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್