SA vs BAN, T20 WC: ಟಿ20 ವಿಶ್ವಕಪ್​ನಲ್ಲಿಂದು ಎರಡು ಪಂದ್ಯ: ಸೆಮೀಸ್​ನತ್ತ ಪಾಕ್ ಚಿತ್ತ: ದಕ್ಷಿಣ ಆಫ್ರಿಕಾಕ್ಕೆ ಗೆದ್ದರಷ್ಟೇ ಉಳಿಗಾಲ

T20 World Cup: ದಕ್ಷಿಣ ಆಫ್ರಿಕಾ ತಂಡ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಉಳಿಯಬೇಕಾದರೆ ಇಂದಿನ ಬಾಂಗ್ಲಾ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾಗಿದೆ. ಮತ್ತೊಂದು ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಪಾಕಿಸ್ತಾನ ಗೆದ್ದರೆ ಅಧಿಕೃತವಾಗಿ ಸೆಮಿ ಫೈನಲ್​ಗೆ ಲಗ್ಗೆಯಿಡಲಿದೆ.

SA vs BAN, T20 WC: ಟಿ20 ವಿಶ್ವಕಪ್​ನಲ್ಲಿಂದು ಎರಡು ಪಂದ್ಯ: ಸೆಮೀಸ್​ನತ್ತ ಪಾಕ್ ಚಿತ್ತ: ದಕ್ಷಿಣ ಆಫ್ರಿಕಾಕ್ಕೆ ಗೆದ್ದರಷ್ಟೇ ಉಳಿಗಾಲ
south africa vs bangladesh
Follow us
TV9 Web
| Updated By: Vinay Bhat

Updated on: Nov 02, 2021 | 9:08 AM

ಟಿ20 ವಿಶ್ವಕಪ್​ನಲ್ಲಿಂದು (T20 World Cup) ಎರಡು ಮಹತ್ವದ ಪಂದ್ಯಗಳು ನಡೆಯಲಿವೆ. ಅಬುಧಾಬಿಯಲ್ಲಿ ಶುರುವಾಗಲಿರುವ ಮೊದಲ ಪಂದ್ಯದಲ್ಲಿ ತೆಂಬ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ಮತ್ತು ಮೊಹಮ್ಮದುಲ್ಲ ನೇತೃತ್ವದ ಬಾಂಗ್ಲಾದೇಶ (South Africa vs Bangladesh) ಮುಖಾಮುಖಿ ಆಗುತ್ತಿದ್ದರೆ, ಸಂಜೆ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಬಾಬರ್ ಅಜಾಮ್​ರ (Babar Azam) ಪಾಕಿಸ್ತಾನ ಮತ್ತು ನಮೀಬಿಯಾ (Pakistan vs Namibia) ತಂಡ ಸೆಣೆಸಾಟ ನಡೆಸಲಿದೆ. ಸೋಲಿನೊಂದಿಗೆ ಅಭಿಯಾನ ಆರಂಭಿಸಿದರೂ ಬಳಿಕ ಸತತ 2 ಗೆಲುವು ದಾಖಲಿಸಿರುವ ದಕ್ಷಿಣ ಆಫ್ರಿಕಾ ತಂಡ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಉಳಿಯಬೇಕಾದರೆ ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ. ಇತ್ತ ಹ್ಯಾಟ್ರಿಕ್ ಸೋಲನುಭವಿಸಿ ಟೂರ್ನಿಯಿಂದ ಹೊರಬಿದ್ದಿರುವ ಬಾಂಗ್ಲಾ ಪಾಲಿಗೆ ಈ ಪಂದ್ಯ ಔಪಚಾರಿಕವಾಗಿದ್ದರೂ ಅಂಕಪಟ್ಟಿಯಲ್ಲಿ ಕಡೇ ಸ್ಥಾನ ತಪ್ಪಿಸಿಕೊಳ್ಳಲು ಹೋರಾಡಬೇಕಿದೆ.

ದಕ್ಷಿಣ ಆಫ್ರಿಕಾ ತಂಡ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಸೋಲನುಭವಿಸಿದ ಬಳಿಕ ಶ್ರೀಲಂಕಾ ಹಾಗೂ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ಇದೀಗ ಹ್ಯಾಟ್ರಿಕ್ ಗೆಲುವಿನ ಲೆಕ್ಕಾಚಾರದಲ್ಲಿದೆ. ಕಳೆದ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ ಸಾಹಸದಿಂದಾಗಿ ಲಂಕಾ ಪಡೆಯನ್ನು ದ.ಆಫ್ರಿಕಾ ಸೋಲಿಸಿತ್ತು. ಅನ್ರಿಚ್ ನೋಕಿಯಾ, ಡ್ವೇನ್ ಪ್ರೆಟೋರಿಯಸ್, ಟಿ20 ವಿಶ್ವ ನಂ.1 ಬೌಲರ್ ತಬರೇಜ್ ಶಮ್ಸಿ ಒಳಗೊಂಡ ಬೌಲಿಂಗ್ ಪಡೆಯೇ ತಂಡದ ದೊಡ್ಡ ಶಕ್ತಿಯಾಗಿದೆ.

ಅಂತರರಾಷ್ಟ್ರೀಯ ಟಿ20ಯಲ್ಲಿ 6 ಪಂದ್ಯಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, 6 ಬಾರಿಯೂ ದ. ಆಫ್ರಿಕಾ ಗೆಲುವು ಸಾಧಿಸಿದೆ. 4 ಅಂಕಗಳೊಂದಿಗೆ ಗುಂಪು-1ರಲ್ಲಿ ದ. ಆಫ್ರಿಕಾ 2ನೇ ಸ್ಥಾನದಲ್ಲಿದ್ದರೆ, ಆಸೀಸ್‌ 3ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ನೆಟ್‌ ರನ್‌ರೇಟ್‌ ಉತ್ತಮಗೊಳಿಸಿಕೊಳ್ಳುವ ಕಡೆಗೂ ದ. ಆಫ್ರಿಕಾ ಗಮನ ಹರಿಸಬೇಕಿದೆ.

ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ.

ಇನ್ನು ಇಂದು ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಪಾಕಿಸ್ತಾನ ಗೆದ್ದರೆ ಅಧಿಕೃತವಾಗಿ ಸೆಮಿ ಫೈನಲ್​ಗೆ ಲಗ್ಗೆಯಿಡಲಿದೆ. ಉತ್ಕೃಷ್ಟಲಯದಲ್ಲಿರುವ ಬಾಬರ್‌ ಆಜಂ (Babar Azam) ಪಡೆ ಯುಎಇನಲ್ಲಿ (UAE) ಆಡಿರುವ ಕಳೆದ 14 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ತನ್ನ ಅಜೇಯ ಓಟ ಮುಂದುವರಿಸಲು ಎದುರು ನೋಡುತ್ತಿದೆ. ನಾಯಕ ಬಾಬರ್ ಅಜಮ್ ಹಾಗೂ ಮೊಹಮದ್ ರಿಜ್ವಾನ್ ಆರಂಭಿಕ ಜೋಡಿಯೇ ಪಾಕ್ ತಂಡದ ದೊಡ್ಡ ಶಕ್ತಿಯಾಗಿದೆ. ಅಫ್ಘಾನಿಸ್ತಾನ ಎದುರು ಗೆಲುವಿಗಾಗಿ ಪರದಾಡಿದರೂ ಆಸಿಫ್ ಅಲಿ, ಒಂದೇ ಓವರ್‌ನಲ್ಲಿ 4 ಸಿಕ್ಸರ್ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದರು. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಬಲಿಷ್ಠವಾಗಿರುವ ಪಾಕಿಸ್ತಾನ ತಂಡ ಸುಲಭ ಗೆಲುವಿನ ನಿರೀಕ್ಷೆಯಲ್ಲಿದೆ.

ಇತ್ತ ಮೊದಲ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡಕ್ಕೆ ಶಾಕ್ ನೀಡಿದ್ದ ನಮೀಬಿಯ ಹಿಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಎದುರು ಸೋಲು ಕಂಡಿತ್ತು. ಇದೀಗ ಬಲಿಷ್ಠ ತಂಡದ ಸವಾಲಿಗೆ ಸನ್ನದ್ಧವಾಗಿದೆ. ನಮೀಬಿಯಾ ತಾನಾಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋತಿದ್ದು, ಸೆಮೀಸ್‌ ರೇಸ್‌ನಲ್ಲಿ ಉಳಿಯಬೇಕಾದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಉಭಯ ತಂಡಗಳು ಟಿ20 ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಪಂದ್ಯ ಕುತೂಹಲ ಮೂಡಿಸಿದೆ.

ಪಂದ್ಯ ಆರಂಭ: ಸಂಜೆ 7:30ಕ್ಕೆ

Kevin Pietersen: ಭಾರತವನ್ನು ಭಾರತೀಯರೇ ಟೀಕಿಸುತ್ತಿದ್ದರೆ ಅತ್ತ ಕೊಹ್ಲಿ ಪಡೆಯ ಬೆನ್ನಿಗೆ ನಿಂತ ವಿದೇಶಿ ಆಟಗಾರ

Jos Buttler: ಬಟ್ಲರ್ ದಾಖಲೆಯ ಶತಕ, ಸೆಮಿ ಫೈನಲ್​ಗೆ ಆಂಗ್ಲರು: ಇಂಗ್ಲೆಂಡ್-ಶ್ರೀಲಂಕಾ ಪಂದ್ಯದಲ್ಲಿ ಏನಾಯ್ತು?

(South Africa and Bangladesh would lock horns in their Group 1 Super 12 clash of the ICC T20 World Cup 2021)

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ