SA vs NZ: ಮಳೆಯಿಂದ ಪಂದ್ಯ ರದ್ದಾದರೆ ಯಾರು ಫೈನಲ್ಗೆ?
South Africa and New zealand: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಫೈನಲ್ಗೇರಿದೆ. ಇದೀಗ ದ್ಚಿತೀಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಮಾರ್ಚ್ 9 ರಂದು ಭಾರತ ತಂಡವನ್ನು ಎದುರಿಸಲಿದೆ.

Sa Vs Nz
ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ಗೆ ವೇದಿಕೆ ಸಿದ್ಧವಾಗಿದೆ. ಇಂದು (ಮಾ.5) ಲಾಹೋರ್ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೇರಲಿದೆ. ಆದರೆ ಈ ಪಂದ್ಯಕ್ಕೆ ಮಳೆಯ ಭೀತಿ ಇಲ್ಲದಿಲ್ಲ. ಏಕೆಂದರೆ ಲಾಹೋರ್ನನಲ್ಲಿ ನಡೆದ ಅಫ್ಘಾನಿಸ್ತಾನ್ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು.
ಒಂದು ವೇಳೆ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ, ಅಥವಾ ಮಳೆಯ ಕಾರಣ ಪಂದ್ಯ ರದ್ದಾದರೆ ಫಲಿತಾಂಶ ನಿರ್ಣಯಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ…
- ಸೆಮಿಫೈನಲ್ ಪಂದ್ಯಗಳ ವೇಳೆ ಮಳೆ ಬಂದು ಮ್ಯಾಚ್ ರದ್ದಾದರೆ, ಮೀಸಲು ದಿನದಾಟದಲ್ಲಿ ಪಂದ್ಯ ಮುಂದುವರೆಯಲಿದೆ. ಉದಾಹರಣೆಗೆ, ಮಾರ್ಚ್ 4 ರಂದು ನಿಗದಿಯಾಗಿರುವ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ನಡುವಣ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ, ಮಾರ್ಚ್ 6 ರಂದು ಪಂದ್ಯವನ್ನು ಮುಂದುವರೆಸಲಾಗುತ್ತದೆ.
- ಮೀಸಲು ದಿನದಾಟದಲ್ಲೂ ಸೆಮಿಫೈನಲ್ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಲೀಗ್ ಹಂತದ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ತಂಡ ಫೈನಲ್ಗೆ ಅರ್ಹತೆ ಪಡೆಯಲಿದೆ.
- ಅಂದರೆ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ಅಥವಾ ಇನ್ನಿತರೆ ಕಾರಣಗಳಿಂದ ರದ್ದಾದರೆ, ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಸೌತ್ ಆಫ್ರಿಕಾ ತಂಡದ ಫೈನಲ್ಗೆ ಅರ್ಹತೆ ಪಡೆಯಲಿದೆ.
- ಇನ್ನು ಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ, ಅಥವಾ ಹವಾಮಾನ ವೈಪರೀತ್ಯದಿಂದಾಗಿ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಪಂದ್ಯವನ್ನು ಮಾರ್ಚ್ 10 ಕ್ಕೆ ಮುಂದೂಡಲಾಗುತ್ತದೆ.
- ಮಾರ್ಚ್ 10 ರಂದು ಸಹ ಫೈನಲ್ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ, ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.
ಉಭಯ ತಂಡಗಳು:
Published On - 1:04 pm, Wed, 5 March 25
