SA vs NZ: ಮಳೆಯಿಂದ ಪಂದ್ಯ ರದ್ದಾದರೆ ಯಾರು ಫೈನಲ್​ಗೆ?

South Africa and New zealand: ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಇದೀಗ ದ್ಚಿತೀಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಮಾರ್ಚ್ 9 ರಂದು ಭಾರತ ತಂಡವನ್ನು ಎದುರಿಸಲಿದೆ.

SA vs NZ: ಮಳೆಯಿಂದ ಪಂದ್ಯ ರದ್ದಾದರೆ ಯಾರು ಫೈನಲ್​ಗೆ?
Sa Vs Nz

Updated on: Mar 06, 2025 | 6:26 AM

ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್​ಗೆ ವೇದಿಕೆ ಸಿದ್ಧವಾಗಿದೆ. ಇಂದು (ಮಾ.5) ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಆದರೆ ಈ ಪಂದ್ಯಕ್ಕೆ ಮಳೆಯ ಭೀತಿ ಇಲ್ಲದಿಲ್ಲ. ಏಕೆಂದರೆ ಲಾಹೋರ್​ನನಲ್ಲಿ ನಡೆದ ಅಫ್ಘಾನಿಸ್ತಾನ್ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು.

ಒಂದು ವೇಳೆ ಸೆಮಿಫೈನಲ್​ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ, ಅಥವಾ ಮಳೆಯ ಕಾರಣ ಪಂದ್ಯ ರದ್ದಾದರೆ ಫಲಿತಾಂಶ ನಿರ್ಣಯಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ…

  • ಸೆಮಿಫೈನಲ್ ಪಂದ್ಯಗಳ ವೇಳೆ ಮಳೆ ಬಂದು ಮ್ಯಾಚ್ ರದ್ದಾದರೆ, ಮೀಸಲು ದಿನದಾಟದಲ್ಲಿ ಪಂದ್ಯ ಮುಂದುವರೆಯಲಿದೆ. ಉದಾಹರಣೆಗೆ, ಮಾರ್ಚ್ 4 ರಂದು ನಿಗದಿಯಾಗಿರುವ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ನಡುವಣ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ, ಮಾರ್ಚ್ 6 ರಂದು ಪಂದ್ಯವನ್ನು ಮುಂದುವರೆಸಲಾಗುತ್ತದೆ.
  • ಮೀಸಲು ದಿನದಾಟದಲ್ಲೂ ಸೆಮಿಫೈನಲ್​ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಲೀಗ್ ಹಂತದ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.
  • ಅಂದರೆ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವು ಮಳೆಯ ಕಾರಣ ಅಥವಾ ಇನ್ನಿತರೆ ಕಾರಣಗಳಿಂದ ರದ್ದಾದರೆ, ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಸೌತ್ ಆಫ್ರಿಕಾ ತಂಡದ ಫೈನಲ್​ಗೆ ಅರ್ಹತೆ ಪಡೆಯಲಿದೆ.
  • ಇನ್ನು ಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ, ಅಥವಾ ಹವಾಮಾನ ವೈಪರೀತ್ಯದಿಂದಾಗಿ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಪಂದ್ಯವನ್ನು ಮಾರ್ಚ್ 10 ಕ್ಕೆ ಮುಂದೂಡಲಾಗುತ್ತದೆ.
  • ಮಾರ್ಚ್ 10 ರಂದು ಸಹ ಫೈನಲ್ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ, ಉಭಯ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಉಭಯ ತಂಡಗಳು:

ನ್ಯೂಝಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ವಿಲ್ ಒರೂಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ.

ಇದನ್ನೂ ಓದಿ: Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಸೌತ್ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ತಬ್ರೇಝ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್​, ಕಾರ್ಬಿನ್ ಬಾಷ್.

Published On - 1:04 pm, Wed, 5 March 25