IND vs SA: ಟೀಮ್ ಇಂಡಿಯಾ ವಿರುದ್ದದ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ
South Africa Squad: ಡೀನ್ ಎಲ್ಗರ್ (ನಾಯಕ), ತೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕಗಿಸೊ ರಬಾಡ, ಸರೆಲ್ ಎರ್ವೀ, ಬ್ಯೂರಾನ್ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್
ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ಇದೇ ತಿಂಗಳು 26 ರಿಂದ ಶುರುವಾಗಲಿದೆ. ಈ ಸರಣಿಯ ಟೆಸ್ಟ್ ಪಂದ್ಯಗಳಿಗಾಗಿ ಆತಿಥೇಯ ದಕ್ಷಿಣ ಆಫ್ರಿಕಾ 21 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ಆಟಗಾರರ ಪಟ್ಟಿಯಲ್ಲಿ ಇಬ್ಬರು ಹೊಸ ಆಟಗಾರರಿಗೆ ಸ್ಥಾನ ನೀಡಿರುವುದು ವಿಶೇಷ. ಇನ್ನು ಟೀಮ್ ಇಂಡಿಯಾ ವಿರುದ್ದ ಸೌತ್ ಆಫ್ರಿಕಾ ತಂಡವನ್ನು ಡೀನ್ ಎಲ್ಗರ್ ಮುನ್ನಡೆಸಲಿದ್ದು, ತೆಂಬಾ ಬವುಮಾ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 3 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಡಿಸೆಂಬರ್ 26 ರಿಂದ ಈ ಪ್ರವಾಸ ಆರಂಭವಾಗಲಿದ್ದು, ಮೊದಲು ಟೆಸ್ಟ್ ಸರಣಿ ನಡೆಯಲಿದೆ. ಜನವರಿ 19ರಿಂದ ಏಕದಿನ ಸರಣಿ ಆರಂಭವಾಗಲಿದೆ. ಮೊದಲ ಮೂರು ಟೆಸ್ಟ್ ಪಂದ್ಯಗಳನ್ನು ಸೆಂಚುರಿಯನ್, ಜೋಹಾನ್ಸ್‌ಬರ್ಗ್ ಮತ್ತು ಕೇಪ್ ಟೌನ್‌ನಲ್ಲಿ ಆಡಲಾಗುತ್ತದೆ.
ಇನ್ನು ಸರಣಿಗೆ ದಕ್ಷಿಣ ಆಫ್ರಿಕಾ ತನ್ನ ತಂಡದಲ್ಲಿ ಇಬ್ಬರು ಹೊಸ ಆಟಗಾರರಿಗೆ ಸ್ಥಾನ ನೀಡಿದೆ. ಅದರಂತೆ ತಂಡದಲ್ಲಿ ಸಿಸಂಡಾ ಮಗಾಲಾ ಮತ್ತು ರಿಯಾನ್ ರಿಕಲ್ಟನ್ ಅವರು ಆಯ್ಕೆಯಾಗಿದ್ದಾರೆ. ಬಲಗೈ ವೇಗದ ಬೌಲರ್ ಮಗಲಾ ಈ ಹಿಂದೆ ದಕ್ಷಿಣ ಆಫ್ರಿಕಾ ಪರ ಒಂದು ಏಕದಿನ ಮತ್ತು 4 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದಲ್ಲದೆ, ರಿಕೆಲ್ಟನ್ ಎಡಗೈ ವಿಕೆಟ್-ಕೀಪರ್ ಬ್ಯಾಟರ್ ಆಗಿದ್ದು, ಅಂತರಾಷ್ಟ್ರೀಯ ಪದಾರ್ಪಣೆ ಮಾಡುವುದನ್ನು ಎದುರು ನೋಡುತ್ತಿದ್ದಾರೆ. ಇನ್ನು ಸುದೀರ್ಘ ಸಮಯದ ಬಳಿಕ ತಂಡಕ್ಕೆ ವಾಪಸಾಗಿರುವ ಆಲಿವರ್ ಕೂಡ ಬೌಲರ್ ಕೂಡ ಆಗಿದ್ದು, ಇದುವರೆಗೆ 12 ಅಂತಾರಾಷ್ಟ್ರೀಯ ಪಂದ್ಯಗಳಿಂದ 51 ವಿಕೆಟ್ ಪಡೆದಿದ್ದಾರೆ.
ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ ಬೌಲಿಂಗ್ ಅನ್ನು ಕಗಿಸೊ ರಾಡಾಬಾ, ಅನ್ರಿಕ್ ನೋಕಿಯಾ ಮತ್ತು ಕೇಶವ್ ಮಹಾರಾಜ್ ಮುನ್ನಡೆಸಲಿದ್ದಾರೆ. ಹಾಗೆಯೇ ನಾಯಕ ಎಲ್ಗರ್, ಡಿಕಾಕ್, ಮಾರ್ಕ್ರಾಮ್ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಟೆಸ್ಟ್ ಸರಣಿಯು ಡಿಸೆಂಬರ್ 26 ರಿಂದ ಪ್ರಾರಂಭವಾಗಲಿದ್ದು, ಜನವರಿ 15 ರವರೆಗೆ ನಡೆಯಲಿದೆ.
ಟೀಮ್ ಇಂಡಿಯಾ ವಿರುದ್ದದ ಟೆಸ್ಟ್ ಸರಣಿಗಾಗಿ ದಕ್ಷಿಣ ಆಫ್ರಿಕಾ ತಂಡ ಹೀಗಿದೆ: ಡೀನ್ ಎಲ್ಗರ್ (ನಾಯಕ), ತೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕಗಿಸೊ ರಬಾಡ, ಸರೆಲ್ ಎರ್ವೀ, ಬ್ಯೂರಾನ್ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಅನ್ರಿಕ್ ನೋಕಿಯಾ, ಕೀಗನ್ ಪೀಟರ್ಸನ್, ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ, ಮಾರ್ಕೊ ಜಾನ್ಸೆನ್, ಗ್ಲೆಂಟನ್ ಸ್ಟೌರ್ಮನ್, ಪ್ರೆನೆಲನ್ ಸುಬ್ರಾಯೆನ್, ಸಿಸಂಡಾ ಮಗಾಲಾ, ರಿಯಾನ್ ರಿಕೆಲ್ಟನ್, ಡುವಾನ್ನೆ ಒಲಿವಿಯರ್.
ಇದನ್ನೂ ಓದಿ: World Record: ಬರೋಬ್ಬರಿ 15 ಸಿಕ್ಸ್: ಕ್ರಿಕೆಟ್ ಇತಿಹಾಸದ ಅತೀ ವೇಗದ ಶತಕ
ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್ಸಿಬಿ ನಾಯಕ
ಇದನ್ನೂ ಓದಿ: Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!
ಇದನ್ನೂ ಓದಿ: IPL 2022: RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಮತ್ತೆ ಬರ್ತಾರಂತೆ ABD
(South Africa announce 21 member team against India for Test and ODI series)