ಇಂಗ್ಲೆಂಡ್ ವಿರುದ್ಧ ಸೌತ್ ಆಫ್ರಿಕಾಗೆ ಅಮೋಘ ಜಯ
South Africa vs England 1st Odi: ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ 100 ಎಸೆತಗಳಲ್ಲಿ 3 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿದ್ದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಆಂಗ್ಲರು ಕೇವಲ 31 ರನ್ ಪೇರಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಪರಿಣಾಮ ಇಂಗ್ಲೆಂಡ್ ತಂಡವು 24.3 ಓವರ್‌ಗಳಲ್ಲಿ 131 ರನ್ ಗಳಿಸಿ ಆಲೌಟ್ ಆಗಿದೆ.
ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಮೊದಲ 100 ಎಸೆತಗಳಲ್ಲಿ 3 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿದ್ದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಆಂಗ್ಲ ಪಡೆ ಕೇವಲ 31 ರನ್ ಪೇರಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಪರಿಣಾಮ ಇಂಗ್ಲೆಂಡ್ ತಂಡವು 24.3 ಓವರ್‌ಗಳಲ್ಲಿ 131 ರನ್ ಗಳಿಸಿ ಆಲೌಟ್ ಆಗಿದೆ.
131 ರನ್ ಗಳ ಸುಲಭ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಐಡೆನ್ ಮಾರ್ಕ್ರಾಮ್ 55 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 13 ಫೋರ್ ಗಳೊಂದಿಗೆ 86 ರನ್ ಬಾರಿಸಿದರು. ಮತ್ತೊಂದೆಡೆ ರಯಾನ್ ರಿಕೆಲ್ಟನ್ 31 ರನ್ ಗಳ ಕೊಡುಗೆ ನೀಡಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 20.5 ಓವರ್‌ಗಳಲ್ಲಿ 137 ರನ್ ಗಳಿಸಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
