AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs SA: ಪಾಕ್ ವಿರುದ್ಧ ಕೇವಲ 13 ಓವರ್​ಗಳಲ್ಲಿ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ

Pakistan vs South Africa: ರಾವಲ್ಪಿಂಡಿ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ, ಪಾಕಿಸ್ತಾನವನ್ನು 8 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿ 1-1 ರಲ್ಲಿ ಸಮಬಲಗೊಂಡಿದೆ. ಪಾಕಿಸ್ತಾನದ ಬ್ಯಾಟಿಂಗ್ ವೈಫಲ್ಯದಿಂದಾಗಿ ದಕ್ಷಿಣ ಆಫ್ರಿಕಾ ಕೇವಲ 68 ರನ್‌ಗಳ ಗುರಿ ಪಡೆದು ಸುಲಭವಾಗಿ ಚೇಸ್ ಮಾಡಿತು. ಕೇಶವ್ ಮಹಾರಾಜ್ ಅವರ ಅದ್ಭುತ ಪ್ರದರ್ಶನ ದಕ್ಷಿಣ ಆಫ್ರಿಕಾ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು.

PAK vs SA: ಪಾಕ್ ವಿರುದ್ಧ ಕೇವಲ 13 ಓವರ್​ಗಳಲ್ಲಿ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ
Pak Vs Sa
ಪೃಥ್ವಿಶಂಕರ
|

Updated on:Oct 23, 2025 | 3:57 PM

Share

ಲಾಹೋರ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೆಸ್ಟ್ ಸರಣಿಯನ್ನು ಗೆಲ್ಲುವ ಕನಸು ಕಾಣುತ್ತಿದ್ದ ಪಾಕಿಸ್ತಾನಕ್ಕೆ (Pakistan vs South Africa) ರಾವಲ್ಪಿಂಡಿಯಲ್ಲಿ ಹೀನಾಯ ಸೋಲಿನ ಆಘಾತ ಎದುರಾಗಿದೆ. ಉಭಯ ತಂಡಗಳ ನಡುವೆ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ದಕ್ಷಿಣ ಆಫ್ರಿಕಾ 8 ವಿಕೆಟ್‌ಗಳ ಭಾರಿ ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ, ಎರಡು ಪಂದ್ಯಗಳ ಟೆಸ್ಟ್ ಸರಣಿ 1-1 ರಿಂದ ಸಮಬಲದೊಂದಿಗೆ ಅಂತ್ಯಗೊಂಡಿದೆ. ಈ ಪಂದ್ಯದಲ್ಲಿ ಗೆಲುವಿಗೆ 68 ರನ್​ಗಳ ಗುರಿ ಪಡೆದ ದಕ್ಷಿಣ ಆಫ್ರಿಕಾ 2 ವಿಕೆಟ್ ಕಳೆದುಕೊಂಡು ಕೇವಲ 13 ಓವರ್​ಗಳಲ್ಲಿ ಜಯದ ನಗೆಬೀರಿತು.

ರಾವಲ್ಪಿಂಡಿ ಪಾಕಿಸ್ತಾನಕ್ಕೆ ಹೀನಾಯ ಸೋಲು

ರಾವಲ್ಪಿಂಡಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ 333 ರನ್ ಗಳಿಸಿತು. ಇತ್ತ ದಕ್ಷಿಣ ಆಫ್ರಿಕಾ 404 ರನ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ನಂತರ 71 ರನ್​ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಪಾಕಿಸ್ತಾನ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 138 ರನ್‌ಗಳಿಗೆ ಆಲೌಟ್ ಆಗುವ ಮೂಲಕ ದಕ್ಷಿಣ ಆಫ್ರಿಕಾಕ್ಕೆ 68 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ದಕ್ಷಿಣ ಆಫ್ರಿಕಾ ಕೇವಲ 12.3 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಬೆನ್ನಟ್ಟಿತು.

ಪಾಕಿಸ್ತಾನದ ಬ್ಯಾಟಿಂಗ್ ವೈಫಲ್ಯ

ಎರಡನೇ ಇನ್ನಿಂಗ್ಸ್​ನಲ್ಲಿ ಪಾಕಿಸ್ತಾನದ ಆರು ಬ್ಯಾಟ್ಸ್‌ಮನ್‌ಗಳು ಎರಡಂಕಿಯ ತಲುಪಲು ವಿಫಲರಾದರು. ಅದರಲ್ಲಿ ನಾಲ್ವರು ತಮ್ಮ ಖಾತೆಯನ್ನು ತೆರೆಯಲಿಲ್ಲ. ಪಾಕ್ ಪರ ಬಾಬರ್ ಆಝಂ ಅತ್ಯಧಿಕ 50 ರನ್ ಗಳಿಸಿದರೆ, ಸಲ್ಮಾನ್ ಆಘಾ 28 ರನ್ ಬಾರಿಸಿದರು. ಆದರೆ ಅಗ್ರ ಮೂವರು ಬ್ಯಾಟ್ಸ್‌ಮನ್‌ಗಳಾದ ಇಮಾಮ್-ಉಲ್-ಹಕ್, ಶಫೀಕ್ ಮತ್ತು ನಾಯಕ ಮಸೂದ್ ಶೋಚನೀಯವಾಗಿ ವಿಫಲರಾದರು.

ಕಮಾಲ್ ಮಾಡಿದ ಕೇಶವ ಮಹಾರಾಜ್

ದಕ್ಷಿಣ ಆಫ್ರಿಕಾದ ಗೆಲುವಿನ ನಾಯಕ ಕೇಶವ್ ಮಹಾರಾಜ್ ಎಂದರೆ ತಪ್ಪಾಗಲಾರದು. ಮೊದಲ ಇನ್ನಿಂಗ್ಸ್‌ನಲ್ಲಿ 102 ರನ್‌ಗಳಿಗೆ 7 ವಿಕೆಟ್‌ಗಳನ್ನು ಕಬಳಿಸಿದ್ದ ಅವರು ಮೊದಲ ಇನ್ನಿಂಗ್ಸ್‌ನಲ್ಲಿ ನಿರ್ಣಾಯಕ 30 ರನ್‌ಗಳ ಕೊಡುಗೆ ಕೂಡ ನೀಡಿದ್ದರು. ಒಂದು ಹಂತದಲ್ಲಿ, ಪಾಕಿಸ್ತಾನ ಪಂದ್ಯವನ್ನು ಸುಲಭವಾಗಿ ಗೆಲ್ಲುವಂತಿತ್ತು. ಏಕೆಂದರೆ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ಪ್ರಮುಖ 8 ವಿಕೆಟ್‌ಗಳನ್ನು 210 ರನ್‌ಗಳಿಗೆ ಪಡೆದುಕೊಂಡಿದ್ದರು. ಆದರೆ ಇದರ ಹೊರತಾಗಿಯೂ, ದಕ್ಷಿಣ ಆಫ್ರಿಕಾದ ಬಾಲಂಗೋಚಿಗಳು ತಂಡವನ್ನು 404 ರನ್‌ಗಳಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಸೆನುರನ್ ಮುತ್ತುಸಾಮಿ ಅಜೇಯ 89 ರನ್ ಗಳಿಸಿದರೆ, 11 ನೇ ಸ್ಥಾನದಲ್ಲಿ ಬಂದ ಕಗಿಸೊ ರಬಾಡ 61 ಎಸೆತಗಳಲ್ಲಿ 71 ರನ್ ಬಾರಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Thu, 23 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ