AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dale Steyn: ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಗನ್ ಬೌಲರ್ ಡೇಲ್ ಸ್ಟೇನ್

dale steyn retiremet: ದಕ್ಷಿಣ ಆಫ್ರಿಕಾ ಪರ ಡೇಲ್ ಸ್ಟೇನ್ ಟೆಸ್ಟ್ ನಲ್ಲಿ 435 ವಿಕೆಟ್ ಪಡೆದಿದ್ದರೆ, ಏಕದಿನದಲ್ಲಿ 196 ಮತ್ತು ಟಿ20 ಯಲ್ಲಿ 64 ವಿಕೆಟ್ ಕಬಳಿಸಿದ್ದಾರೆ.

Dale Steyn: ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಗನ್ ಬೌಲರ್ ಡೇಲ್ ಸ್ಟೇನ್
ಡೇಲ್ ಸ್ಟೇನ್ (ದಕ್ಷಿಣ ಆಫ್ರಿಕಾ)
TV9 Web
| Edited By: |

Updated on:Aug 31, 2021 | 10:03 PM

Share

ದಕ್ಷಿಣ ಆಫ್ರಿಕಾದ (South Africa) ವೇಗದ ಬೌಲರ್ ಡೇಲ್ ಸ್ಟೇನ್ (Dale Steyn) ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಮಂಗಳವಾರ ಸೋಷಿಯಲ್ ಮೀಡಿಯಾ ಮೂಲಕ ಸ್ಟೇನ್ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿಯನ್ನು ಘೋಷಿಸಿದರು. ಸೌತ್ ಆಫ್ರಿಕಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 635 ವಿಕೆಟ್ ಪಡೆದಿರುವ ಸ್ಟೇನ್ ಕಳೆದ ಕೆಲ ವರ್ಷಗಳಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಇದಾಗ್ಯೂ ಲೀಗ್ ಕ್ರಿಕೆಟ್ ಮೂಲಕ ರಾಷ್ಟ್ರೀಯ ತಂಡಕ್ಕೆ ಮರಳುವ ವಿಶ್ವಾಸದಲ್ಲಿದ್ದರು. ಇದೀಗ ಟಿ20 ವಿಶ್ವಕಪ್​ಗೂ ಮುನ್ನ ವಿದಾಯ ಘೋಷಿಸಿ ಈ ಬಾರಿಯ ಚುಟುಕು ಕದನಕ್ಕೆ ಅಲಭ್ಯರಾಗುವುದನ್ನು ಖಚಿತಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾ ಪರ ಡೇಲ್ ಸ್ಟೇನ್ 93 ಟೆಸ್ಟ್​ನಿಂದ 435 ವಿಕೆಟ್ ಪಡೆದಿದ್ದರೆ, 125 ಏಕದಿನ ಪಂದ್ಯಗಳಿಂದ 196 ಮತ್ತು 47 ಟಿ20 ಪಂದ್ಯಗಳಿಂದ 64 ವಿಕೆಟ್ ಕಬಳಿಸಿದ್ದಾರೆ. ಇದೀಗ ತಮ್ಮ 17 ವರ್ಷಗಳ ವೃತ್ತಿಜೀವನದ ನಿವೃತ್ತಿಯನ್ನು ಟ್ವಿಟರ್‌ ಮೂಲಕ ಸ್ಟೇನ್ ಘೋಷಿಸಿದ್ದಾರೆ. ಅತ್ಯಂತ ಭಾವನಾತ್ಮಕ ಪೋಸ್ಟ್‌ನಲ್ಲಿ, ಡೇಲ್ ಸ್ಟೇನ್ ತಮ್ಮ ತಂಡದ ಆಟಗಾರರು, ಎಲ್ಲಾ ಅಭಿಮಾನಿಗಳು, ಕುಟುಂಬ ಮತ್ತು ಪತ್ರಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

ಸ್ಟೇನ್ 2004 ರಲ್ಲಿ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದರು. 2005 ರಲ್ಲಿ ಸೆಂಚೂರಿಯನ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಇಲೆವೆನ್ ವಿರುದ್ಧ ಆಫ್ರಿಕಾ ಇಲೆವೆನ್ ಪರ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡಿದ್ದರು. ಹಾಗೆಯೇ ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಪಾದಾರ್ಪಣೆ ಮಾಡಿದ್ದ ಸ್ಟೇನ್ ವೇಗದ ಅಸ್ತ್ರದೊಂದಿಗೆ ಹೊಸ ಸಂಚಲನ ಸೃಷ್ಟಿಸಿದ್ದರು. ದಶಕಗಳ ಕಾಲ ದಕ್ಷಿಣ ಆಫ್ರಿಕಾ ತಂಡದ ಖಾಯಂ ಸದಸ್ಯರಾಗಿದ್ದ ಸ್ಟೇನ್ ಕಳೆದ ಕೆಲ ವರ್ಷಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು.

ಡಿಸೆಂಬರ್ 2015 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡರು. ಇದರಿಂದ ಚೇತರಿಸಿಕೊಂಡರು ಹಿಂತಿರುಗಿದರೂ ದುರದೃಷ್ಟವಶಾತ್, 2016 ರಲ್ಲಿ ಪರ್ತ್ ಟೆಸ್ಟ್‌ನಲ್ಲಿ ಮತ್ತೊಮ್ಮೆ ಗಾಯಗೊಂಡರು. ಆ ಬಳಿಕ ಕೆಲ ಕಾಲ ತಂಡದಿಂದ ಹೊರಗುಳಿದಿದ್ದರು. ಇದಾಗ್ಯೂ 2018 ರಲ್ಲಿ ಭಾರತ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಕ್ರಿಕೆಟ್ ಅಂಗಳಕ್ಕೆ ಮರಳಿದ್ದರು. ಆದರೆ ಕೇಪ್ ಟೌನ್ ನಲ್ಲಿ ಮತ್ತೆ ಹಿಮ್ಮಡಿ ಗಾಯಕ್ಕೊಳಗಾಗಿ ತಂಡದಿಂದ ಹೊರಗುಳಿದರು.

2018-19ರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಆಡುವ ಮೂಲಕ ಟೆಸ್ಟ್ ಅಖಾಡಕ್ಕೆ ಯಶಸ್ವಿ ಪುನರಾಗಮನ ಮಾಡಿದರು. ಐಪಿಎಲ್ 2019 ರ ಸಮಯದಲ್ಲಿ ಮತ್ತೆ ಭುಜದ ಸಮಸ್ಯೆಗೆ ಒಳಗಾಗಿ ಹೊರನಡೆದಿದ್ದರು. ಹೀಗಾಗಿ 2019 ರ ವಿಶ್ವಕಪ್​ನಲ್ಲಿ ಆಡಲಾಗಿರಲಿಲ್ಲ. ಹಾಗೆಯೇ 2019 ರಲ್ಲೇ ಟೆಸ್ಟ್‌ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ ಸೀಮಿತ ಓವರ್​ ಕ್ರಿಕೆಟ್​ನತ್ತ ಗಮನ ಹರಿಸುವುದಾಗಿ ತಿಳಿಸಿದ್ದರು. ಇನ್ನು ಕಳೆದ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಹೆಚ್ಚಿನ ಅವಕಾಶ ದೊರೆತಿರಲಿಲ್ಲ. ಹೀಗಾಗಿ ಕ್ರಿಕೆಟ್​ನಿಂದ ಕೆಲ ವಿಶ್ರಾಂತಿ ಪಡೆಯುವುದಾಗಿ ಘೋಷಿಸಿ ಐಪಿಎಲ್​ 2021 ರಿಂದ ಸ್ಟೇನ್ ಹೊರಗುಳಿದಿದ್ದರು. ಆ ಬಳಿಕ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದರು.

ವಯಸ್ಸು ಮಾಗಿದಂತೆ ವೇಗದ ಮೊನಚು ಕಳೆದುಕೊಂಡಿದ್ದ ಸ್ಟೇನ್ ರಾಷ್ಟ್ರೀಯ ತಂಡಕ್ಕೆ ಮರಳುವ ಆಸೆ ಹೊಂದಿದ್ದರು. ಆದರೆ ಪ್ರಸ್ತುತ ತಂಡದಲ್ಲಿ ರಬಾಡ್, ಅನ್ರಿಕ್ ನೊಕಿಯಾಯಂತಹ ವೇಗಿಗಳು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಹೀಗಾಗಿ ಸ್ಟೇನ್​ಗೆ ಮತ್ತೆ ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟಸಾಧ್ಯ ಎಂಬುದು ಅರಿವಾಗಿತ್ತು. ಇದೇ ಕಾರಣದಿಂದ ಟಿ20 ವಿಶ್ವಕಪ್​ಗೂ ಮುನ್ನ ಕ್ರಿಕೆಟ್​ಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. 17 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಹಲವು ಲೀಗ್​ಗಳನ್ನು ಆಡಿರುವ 38ರ ಸ್ಟೇನ್ ಐಪಿಎಲ್​ನಲ್ಲಿ  RCB, ಡೆಕ್ಕನ್ ಚಾರ್ಜರ್ಸ್, ಸನ್ ರೈಸರ್ಸ್ ಹೈದರಾಬಾದ್, ಗುಜರಾತ್ ಲಯನ್ಸ್ ತಂಡಗಳ ಪರ ಕಣಕ್ಕಿಳಿದಿದ್ದರು.

ಇದನ್ನೂ ಓದಿ: ಮುಂದುವರೆದ ದರ ಸಮರ: ಭರ್ಜರಿ ರಿಚಾರ್ಜ್​ ಆಫರ್ ನೀಡಿದ ಮೂರು ಕಂಪೆನಿಗಳು

ಇದನ್ನೂ ಓದಿ: ಫ್ರೀಡಂ 251 ರೂ. ಮೊಬೈಲ್ ಕಥೆ ಏನಾಯ್ತು? ಮತ್ತೆ ಸುದ್ದಿಯಲ್ಲಿ ಕಂಪೆನಿಯ ಮಾಲೀಕ

ಇದನ್ನೂ ಓದಿ: ವಿದೇಶಿ ತಂಡದ ನಾಯಕತ್ವನ್ನು ತ್ಯಜಿಸಿ ಭಾರತದಲ್ಲಿ ಕಣಕ್ಕಿಳಿಯಲಿರುವ ಸ್ಟಾರ್ ಆಟಗಾರ

(Dale Steyn retires from all cricket)

Published On - 4:22 pm, Tue, 31 August 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?