560 ಪಂದ್ಯ, 17 ಟ್ರೋಫಿ; ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ದಕ್ಷಿಣ ಆಫ್ರಿಕಾದ ಮಾಜಿ ನಾಯಕ!

Farhan Behardeen: ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಫರ್ಹಾನ್ ಬೆಹರ್ದೀನ್ ತಮ್ಮ 18 ವರ್ಷಗಳ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಟ್ವಿಟರ್ ಮೂಲಕ ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

560 ಪಂದ್ಯ, 17 ಟ್ರೋಫಿ; ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ದಕ್ಷಿಣ ಆಫ್ರಿಕಾದ ಮಾಜಿ ನಾಯಕ!
ಫರ್ಹಾನ್ ಬೆಹರ್ದೀನ್
Follow us
TV9 Web
| Updated By: ಪೃಥ್ವಿಶಂಕರ

Updated on:Dec 28, 2022 | 12:44 PM

ದಕ್ಷಿಣ ಆಫ್ರಿಕಾ (South Africa) ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಫರ್ಹಾನ್ ಬೆಹರ್ದೀನ್ (Farhan Behardeen) ತಮ್ಮ 18 ವರ್ಷಗಳ ವೃತ್ತಿಜೀವನಕ್ಕೆ ವಿದಾಯ (retirement) ಹೇಳಿದ್ದಾರೆ. ಟ್ವಿಟರ್ ಮೂಲಕ ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ದೇಶೀಯ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸುತ್ತಾರಾ ಅಥವಾ ಅದರಿಂದಲೂ ನಿವೃತ್ತಿ ತೆಗೆದುಕೊಳ್ಳುತ್ತಾರಾ ಎಂಬುದನ್ನು ಅವರು ಖಚಿತಪಡಿಸಿಲ್ಲ. 2018ರ ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದ ಫರ್ಹಾನ್, ಆ ಬಳಿಕ ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ನಾಲ್ಕು ವರ್ಷಗಳಿಂದ ರಾಷ್ಟ್ರೀಯ ತಂಡಕ್ಕೆ ಮರಳಿ ಎಂಟ್ರಿಕೊಡಲು ಕಾಯುತ್ತಿದ್ದ ಫರ್ಹಾನ್, ಆ ಯತ್ನದಲ್ಲಿ ಯಶಸ್ವಿಯಾಗದೇ ಕೊನೆಗೂ ನಿವೃತ್ತಿ ನಿರ್ಧಾರಕ್ಕೆ ಬಂದಿದ್ದಾರೆ.

ಹೊಸ ಸವಾಲಿಗೆ ಸಿದ್ಧ

ತಮ್ಮ ವಿದಾಯದ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫರ್ಹಾನ್, ಕಳೆದ ಕೆಲವು ವಾರಗಳು ಸಾಕಷ್ಟು ಭಾವನಾತ್ಮಕವಾಗಿವೆ. 18 ವರ್ಷಗಳು ಬಂದು ಹೋಗಿವೆ. ನಾನು ನನ್ನ ದೇಶಕ್ಕಾಗಿ 97 ಪಂದ್ಯಗಳನ್ನು ಒಳಗೊಂಡಂತೆ ಎಲ್ಲಾ ಸ್ವರೂಪಗಳಲ್ಲಿ 560 ವೃತ್ತಿಪರ ಪಂದ್ಯಗಳನ್ನು ಆಡಿದ್ದೇನೆ. ನನ್ನ ಕ್ಯಾಬಿನೆಟ್ 17 ಟ್ರೋಫಿಗಳು ಮತ್ತು ನಾಲ್ಕು ವಿಶ್ವಕಪ್‌ಗಳನ್ನು ಒಳಗೊಂಡಿದೆ. ಈಗ ನಾನು ಹೊಸ ಸವಾಲಿಗೆ ಸಿದ್ಧ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ವೃತ್ತಿ ಜೀವನ ಹೀಗಿತ್ತು

30 ಮಾರ್ಚ್ 2012 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ಭಾರತದ ವಿರುದ್ಧ ಟಿ20 ಪಂದ್ಯದೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಫರ್ಹಾನ್, ಜನವರಿ 2013 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನಾಡಿದರು. ಅಲ್ಲದೆ ದಕ್ಷಿಣ ಆಫ್ರಿಕಾ ಪರ ಎರಡು ಟಿ20 ಮತ್ತು ಎರಡು ಏಕದಿನ ವಿಶ್ವಕಪ್‌ಗಳನ್ನು ಸಹ ಫರ್ಹಾನ್ ಆಡಿದ್ದಾರೆ. ದಕ್ಷಿಣ ಆಫ್ರಿಕಾ ಪರ ಒಟ್ಟು 59 ಏಕದಿನ ಪಂದ್ಯಗಳನ್ನಾಡಿರುವ ಫರ್ಹಾನ್, 30.68 ಸರಾಸರಿಯಲ್ಲಿ 1074 ರನ್ ಗಳಿಸಿದ್ದಾರೆ. ಇದರಲ್ಲಿ ಆರು ಅರ್ಧ ಶತಕಗಳು ಸೇರಿವೆ. ಅಂತೆಯೇ 38 ಟಿ20 ಪಂದ್ಯಗಳಲ್ಲಿ 32.37 ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಫರ್ಹಾನ್ 518 ರನ್ ಬಾರಿಸಿದ್ದು, ಇದರಲ್ಲಿ ಒಂದು ಅರ್ಧ ಶತಕವೂ ಸೇರಿದೆ. ಆದರೆ ದಕ್ಷಿಣ ಆಫ್ರಿಕಾ ಪರ ವೈಟ್ ಬಾಲ್ ಕ್ರಿಕೆಟ್ ಆಡುವ ಅವಕಾಶ ಪಡೆದುಕೊಂಡ ಫರ್ಹಾನ್​ ಅವರಿಗೆ ಟೆಸ್ಟ್ ತಂಡಕ್ಕೆ ಎಂಟ್ರಿಕೊಡಲು ಸಾಧ್ಯವಾಗಲಿಲ್ಲ.

Team India in 2023: 2023 ರಲ್ಲಿ ಟೀಂ ಇಂಡಿಯಾ ಫುಲ್ ಬ್ಯುಸಿ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಈ ಅಲ್ಪ ಅವಕಾಶಗಳ ವೃತ್ತಿ ಜೀವನದಲ್ಲಿ ತಂಡವನ್ನು ಮುನ್ನಡೆಸುವ ಅವಕಾಶವನ್ನು ಫರ್ಹಾನ್ ಪಡೆದುಕೊಂಡಿದ್ದರು. 2017 ರ ಜನವರಿಯಲ್ಲಿ ಶ್ರೀಲಂಕಾ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತು. ಈ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಾಯಿತು. ಈ ಸರಣಿಯಲ್ಲಿ ಫರ್ಹಾನ್ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವವಹಿಸಿಕೊಂಡಿದ್ದರು. ಐಪಿಎಲ್‌ನಲ್ಲೂ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದ ಫರ್ಹಾನ್, ಪಂಜಾಬ್ ಕಿಂಗ್ಸ್‌ ತಂಡದ ಪರ ಕಣಕಿಳಿದಿದ್ದರು. ಆದಾಗ್ಯೂ, ಫರ್ಹಾನ್ ಅವರ ಐಪಿಎಲ್ ವೃತ್ತಿಜೀವನ ಹೆಚ್ಚು ಕಾಲ ಉಳಿಯಲಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Wed, 28 December 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್