AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 T20 World Cup 2025: ಐವರ ಸೊನ್ನೆ ಸಾಧನೆ; ಕೇವಲ 10 ಎಸೆತಗಳಲ್ಲಿ ಮುಗಿದ ವಿಶ್ವಕಪ್ ಪಂದ್ಯ

U19 T20 World Cup 2025: ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವು ಸಮೋವಾವನ್ನು ಭರ್ಜರಿಯಾಗಿ ಮಣಿಸಿದೆ. ಸಮೋವಾ ತಂಡವು ಕೇವಲ 16 ರನ್‌ಗಳಿಗೆ ಆಲೌಟ್ ಆಗಿ ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಸ್ಕೋರ್ ದಾಖಲಿಸಿದೆ. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಲ್ಲಿ ಅತಿ ದೊಡ್ಡ ಗೆಲುವು ಸಾಧಿಸಿದೆ. ದಕ್ಷಿಣ ಆಫ್ರಿಕಾ ತಂಡ 10 ಎಸೆತಗಳಲ್ಲಿಯೇ ಗುರಿ ಮುಟ್ಟಿತು.

U19 T20 World Cup 2025: ಐವರ ಸೊನ್ನೆ ಸಾಧನೆ; ಕೇವಲ 10 ಎಸೆತಗಳಲ್ಲಿ ಮುಗಿದ ವಿಶ್ವಕಪ್ ಪಂದ್ಯ
ಅಂಡರ್ 19 ಟಿ20 ವಿಶ್ವಕಪ್
ಪೃಥ್ವಿಶಂಕರ
|

Updated on: Jan 20, 2025 | 7:57 PM

Share

ಜನವರಿ 18 ರಿಂದ ಆರಂಭವಾಗಿರುವ ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಮಲೇಷ್ಯಾದಲ್ಲಿ ನಡೆಯುತ್ತಿದೆ. ಟೂರ್ನಿಯ ಮೂರನೇ ದಿನವಾದ ಇಂದು ದಕ್ಷಿಣ ಆಫ್ರಿಕಾ ಹಾಗೂ ಸಮೋವಾ ತಂಡವಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಸಮೋವಾ ತಂಡವನ್ನು ಹೀನಾಯವಾಗಿ ಮಣಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡ ಈ ಟೂರ್ನಿಯಲ್ಲಿ ಅತಿ ದೊಡ್ಡ ಗೆಲುವು ಸಾಧಿಸಿದ ದಾಖಲೆ ಬರೆದಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಮೋವಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 16 ರನ್‌ಗಳಿಗೆ ಆಲೌಟ್ ಆಯಿತು. ಇತ್ತ 16 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸಮೋವಾ ತಂಡ ಕೂಡ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸ್ಕೋರ್​ಗೆ ಆಲೌಟ್ ಆದ ತಂಡವೆಂಬ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತು.

ಮಲೇಷ್ಯಾದ ದಾಖಲೆ ಉಡೀಸ್

ವಾಸ್ತವವಾಗಿ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸ್ಕೋರ್ ದಾಖಲಿಸಿದ ತಂಡಗಳ ಪಟ್ಟಿಯಲ್ಲಿ ಮಲೇಷ್ಯಾ ಮೊದಲ ಸ್ಥಾನದಲ್ಲಿತ್ತು. ಟೂರ್ನಿಯ ಪ್ರಸಕ್ತ ಸೀಸನ್​ನಲ್ಲಿಯೇ ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ಮಲೇಷ್ಯಾ ಕೇವಲ 23 ರನ್​ಗಳಿಗೆ ಆಲೌಟ್ ಆಗಿತ್ತು. ಆದರೀಗ ಸಮೋವಾ 16 ರನ್‌ಗಳಿಗೆ ಆಲೌಟ್ ಆಗಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಶೂನ್ಯಕ್ಕೆ ಐವರು ಔಟ್

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಮೋವಾ ತಂಡ 9.1 ಓವರ್​ಗಳಲ್ಲಿ ಆಲೌಟ್ ಆಗಿ ಕೇವಲ 16 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದರಲ್ಲಿ 6 ರನ್​ಗಳು ದಕ್ಷಿಣ ಆಫ್ರಿಕಾ ಉಚಿತವಾಗಿ ನೀಡಿತ್ತು. ಅಂದರೆ ಸಮೋವಾ ತಂಡದ ಆಟಗಾರ್ತಿಯರು ಬ್ಯಾಟ್​ನಿಂದ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ತಂಡದ ಪರ ನಾಯಕಿ ಅವೆಟಿಯಾ ಮಾಪು ಹಾಗೂ ಸ್ಟೆಲ್ಲಾ ಸಗಲಾಲಾ ಗರಿಷ್ಠ 3 ರನ್ ಕಲೆಹಾಕಿದರೆ, ನಾಲ್ವರು ಆಟಗಾರ್ತಿಯರು ತಲಾ 1 ರನ್​ ಬಾರಿಸಿ ಔಟಾದರು. ಉಳಿದ ಐವರಿಗೆ ಖಾತೆಯನ್ನು ತೆರೆಯಲಾಗಲಿಲ್ಲ.

10 ಎಸೆತಗಳಲ್ಲಿ ಪಂದ್ಯ ಗೆದ್ದ ಆಫ್ರಿಕಾ

ಸಮೋವಾ ತಂಡ ನೀಡಿದ 17 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 10 ಎಸೆತಗಳಲ್ಲಿಯೇ ಜಯದ ನಗೆ ಬೀರಿತು. ಇದು ಈ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಆಡಿರುವ 2 ಪಂದ್ಯಗಳಲ್ಲಿ ಸತತ ಎರಡನೇ ಗೆಲುವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ