94 ಎಸೆತಗಳಲ್ಲಿ 222 ರನ್! ಕ್ಲಾಸೆನ್, ಮಿಲ್ಲರ್ ಸಿಡಿಲಬ್ಬರಕ್ಕೆ ದಂಗಾದ ಆಸ್ಟ್ರೇಲಿಯಾ; 164 ರನ್ ಸೋಲು

AUS vs SA: ಸೆಂಚುರಿಯನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಆಫ್ರಿಕಾ, ಆಸೀಸ್ ತಂಡವನ್ನು 164 ರನ್​ಗಳ ಭಾರಿ ಹಂತರದಿಂದ ಮಣಿಸಿದೆ. ಈ ಮೂಲಕ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ತಲಾ ಎರಡೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸಮಬಲ ಸಾಧಿಸಿವೆ.

94 ಎಸೆತಗಳಲ್ಲಿ 222 ರನ್! ಕ್ಲಾಸೆನ್, ಮಿಲ್ಲರ್ ಸಿಡಿಲಬ್ಬರಕ್ಕೆ ದಂಗಾದ ಆಸ್ಟ್ರೇಲಿಯಾ; 164 ರನ್ ಸೋಲು
ಆಸ್ಟ್ರೇಲಿಯಾ- ದಕ್ಷಿಣ ಆಫ್ರಿಕಾ
Follow us
|

Updated on:Sep 16, 2023 | 7:29 AM

ಸೆಂಚುರಿಯನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ (South Africa vs Australia) ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಆಫ್ರಿಕಾ, ಆಸೀಸ್ ತಂಡವನ್ನು 164 ರನ್​ಗಳ ಭಾರಿ ಹಂತರದಿಂದ ಮಣಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಹೆನ್ರಿಚ್ ಕ್ಲಾಸೆನ್ (Heinrich Klaasen) ಅವರ ಸ್ಫೋಟಕ ಶತಕ ಹಾಗೂ ಕ್ವಿಂಟನ್ ಡಿ ಕಾಕ್ ಮತ್ತು ಡೇವಿಡ್ ಮಿಲ್ಲರ್ ( David Miller) ಅವರ ಅರ್ಧಶತಕಗಳ ನೆರವಿನಿಂದ 416 ರನ್​ಗಳ ಬೃಹತ್ ಸ್ಕೋರ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಕೇವಲ 35 ಓವರ್​ಗಳನ್ನಷ್ಟೇ ಆಡಲು ಸಾಧ್ಯಾವಗಿ 252 ರನ್​ಗಳಿಗೆ ತನ್ನೇಲ್ಲ ವಿಕೆಟ್ ಕಳೆದುಕೊಂಡು, ಹರಿಣಗಳ ವಿರುದ್ಧ ಸೋಲೊಪ್ಪಿಕೊಂಡಿತು. ಈ ಮೂಲಕ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ತಲಾ ಎರಡೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸಮಬಲ ಸಾಧಿಸಿವೆ. ಇದೀಗ ನಡೆಯುವ ಅಂತಿಮ ಪಂದ್ಯದಲ್ಲಿ ಗೆಲ್ಲುವ ತಂಡ ಏಕದಿನ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಆರಂಭಿಕರಾಗಿ ಕಣಕ್ಕಿಳಿದಿದ್ದ ರಿಜಾ ಹೆಂಡ್ರಿಕ್ಸ್ ಮತ್ತು ಕ್ವಿಂಟನ್ ಡಿ ಕಾಕ್ ಸ್ಫೋಟಕ ಆರಂಭ ನೀಡಿದರು. ಆರಂಭಿಕ ಕ್ವಿಂಟನ್ ಡಿ ಕಾಕ್ 64 ಎಸೆತಗಳಲ್ಲಿ 45 ರನ್ ಮತ್ತು ರಿಜಾ 34 ಎಸೆತಗಳಲ್ಲಿ 28 ರನ್ ಗಳಿಸಿ ಅರ್ಧಶತಕದ ಜೊತೆಯಾಟ ನೀಡಿದರು. ಆ ಬಳಿಕ ಬಂದ ರಾಸ್ಸಿ ವ್ಯಾನ್ ಡೆರ್ ಡುಸೆನ್ 65 ಎಸೆತಗಳಲ್ಲಿ 62 ರನ್ ಸಿಡಿಸಿದರೆ, ನಾಯಕ ಏಡೆನ್ ಮಾರ್ಕ್ರಾಮ್ 11 ಎಸೆತಗಳಲ್ಲಿ 8 ರನ್ ಗಳಿಸಲಷ್ಟೇ ಶಕ್ತರಾದರು. ಹೀಗಾಗಿ 194 ರನ್‌ಗಳಿಗೆ ದಕ್ಷಿಣ ಆಫ್ರಿಕಾ ನಾಲ್ಕನೇ ವಿಕೆಟ್ ಕಳೆದುಕೊಂಡಿತು. ಆದರೆ ಆ ಬಳಿಕ ಜೊತೆಯಾದ ಕ್ಲಾಸೆನ್ ಹಾಗೂ ಮಿಲ್ಲರ್ ಮೈದಾನದಲ್ಲಿ ಸುನಾಮಿ ಎಬ್ಬಸಿದರು.

AUS vs SA: ಆಸೀಸ್ ವಿರುದ್ಧ 83 ಎಸೆತಗಳಲ್ಲಿ ಬರೋಬ್ಬರಿ 174 ರನ್ ಚಚ್ಚಿದ ಹೆನ್ರಿಚ್ ಕ್ಲಾಸೆನ್..!

174 ರನ್ ಚಚ್ಚಿದ ಕ್ಲಾಸೆನ್

ತಂಡದ ಪರ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಕ್ಲಾಸೆನ್ ಮತ್ತು ಆರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ ಮಿಲ್ಲರ್ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಅಲ್ಲದೆ ಇವರಿಬ್ಬರು ಐದನೇ ವಿಕೆಟ್‌ಗೆ 94 ಎಸೆತಗಳಲ್ಲಿ 222 ರನ್‌ಗಳ ಮುರಿಯದ ಜೊತೆಯಾಟ ನಡೆಸಿದರು. ಈ ವೇಳೆ ಹೆನ್ರಿಕ್ ಕ್ಲಾಸೆನ್ 83 ಎಸೆತಗಳಲ್ಲಿ 13 ಬೌಂಡರಿ ಮತ್ತು 13 ಸಿಕ್ಸರ್​ಗಳೊಂದಿಗೆ 174 ರನ್ ಚಚ್ಚಿದರೆ, ಡೇವಿಡ್ ಮಿಲ್ಲರ್ 45 ಎಸೆತಗಳಲ್ಲಿ 82 ರನ್ ಗಳಿಸಿ ಅಜೇಯರಾಗುಳಿದರು.

25 ಓವರ್‌ಗಳ ವಿಭಿನ್ನ ಕಥೆ

ಮೊದಲ 25 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ 2 ವಿಕೆಟ್ ಕಳೆದುಕೊಂಡು 120 ರನ್ ಗಳಿಸಿತ್ತು. ಇದಾದ ಬಳಿಕ ಹೆನ್ರಿಚ್ ಕ್ಲಾಸೆನ್ ಜೊತೆಗೂಡಿದ ಡೇವಿಡ್ ಮಿಲ್ಲರ್ ಮೈದಾನದಲ್ಲಿ ಬಿರುಗಾಳಿ ಎಬ್ಬಿಸಿದರು. ಇಬ್ಬರ ದಾಳಿಯ ಆಧಾರದ ಮೇಲೆ ದಕ್ಷಿಣ ಆಫ್ರಿಕಾ ಮುಂದಿನ 25 ಓವರ್‌ಗಳಲ್ಲಿ 294 ರನ್ ಕಲೆಹಾಕಿತು. ಇಷ್ಟೇ ಅಲ್ಲ, ಮಿಲ್ಲರ್ ಮತ್ತು ಕ್ಲಾಸನ್ ಕೇವಲ 94 ಎಸೆತಗಳಲ್ಲಿ 222 ರನ್‌ಗಳ ಅದ್ಭುತ ಜೊತೆಯಾಟವನ್ನು ಮಾಡಿದರು. ಅದರ ಆಧಾರದ ಮೇಲೆ ದಕ್ಷಿಣ ಆಫ್ರಿಕಾ ದಾಖಲೆಯ 7 ನೇ ಬಾರಿಗೆ 400 ರ ಗಡಿ ದಾಟಿತು.

ಆರಂಭದಲ್ಲೇ ತತ್ತರಿಸಿದ ಆಸೀಸ್ ಇನ್ನಿಂಗ್ಸ್

ಇನ್ನು ದಕ್ಷಿಣ ಆಫ್ರಿಕಾ ನೀಡಿದ ಬೃಹತ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದಿದ್ದ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಜೊತೆಯಾಟ ಕೇವಲ 16 ರನ್​ಗಳಿಗೆ ಮುರಿದು ಬಿತ್ತು. ಈ ವೇಳೆ ವಾರ್ನರ್ 12 ರನ್​ಗಳಿಗೆ ಸುಸ್ತಾದರೆ, ಟ್ರಾವಿಸ್ ಹೆಡ್ ಇಂಜುರಿಯಿಂದಾಗಿ ಪೆವಿಲಿಯನ್ ಸೇರಿಕೊಂಡರು. ಆ ಬಳಿಕ ಬಂದ ನಾಯಕ ಮಿಚೆಲ್ ಮಾರ್ಷ್ ಕೂಡ 6 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಲಬುಶೇನ್​ ಕೂಡ 20 ರನ್ ದಾಟಿ ಮುಂದುವರೆಯಲು ಸಾಧ್ಯವಾಗಲಿಲ್ಲ.

ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಅಲೆಕ್ಸ್ ಕ್ಯಾರಿ 77 ಎಸೆತಗಳಲ್ಲಿ 9 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 99 ರನ್ ಸಿಡಿಸಿ 1 ರನ್​ಗಳಿಂದ ಶತಕ ವಂಚಿತರಾದರು. ಇವರನ್ನು ಹೊರತುಪಡಿಸಿ ಟೀಮ್ ಡೇವಿಡ್ 35 ರನ್​ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ತಂಡದ ಪರ ಮತ್ತ್ಯಾರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ತಂಡ ಪೂರ್ಣ 50 ಓವರ್​ಗಳನ್ನು ಆಡಲಾಗದೆ 35ನೇ ಓವರ್​ನಲ್ಲಿ ಆಲೌಟ್ ಆಯಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:29 am, Sat, 16 September 23

ತಾಜಾ ಸುದ್ದಿ
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​