AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs NZ: ಯಾನ್ಸನ್, ಮಾರ್ಕ್ರಾಮ್ ಸಿಡಿಲಬ್ಬರಕ್ಕೆ ತಲೆಬಾಗಿದ ನ್ಯೂಜಿಲೆಂಡ್

T20 World Cup 2026: ಟಿ20 ವಿಶ್ವಕಪ್ 2026ರ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವು ನ್ಯೂಜಿಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ನಾಯಕ ಐಡೆನ್ ಮಾರ್ಕ್ರಾಮ್ ಅವರ ದಾಖಲೆಯ ಅರ್ಧಶತಕ (86* ರನ್) ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ನ್ಯೂಜಿಲೆಂಡ್ ನೀಡಿದ 176 ರನ್‌ಗಳ ಗುರಿಯನ್ನು ದಕ್ಷಿಣ ಆಫ್ರಿಕಾ 17.1 ಓವರ್‌ಗಳಲ್ಲಿ ಸುಲಭವಾಗಿ ಬೆನ್ನಟ್ಟಿತು.

SA vs NZ: ಯಾನ್ಸನ್, ಮಾರ್ಕ್ರಾಮ್ ಸಿಡಿಲಬ್ಬರಕ್ಕೆ ತಲೆಬಾಗಿದ ನ್ಯೂಜಿಲೆಂಡ್
Sa Vs Nz
ಪೃಥ್ವಿಶಂಕರ
|

Updated on: Feb 14, 2026 | 10:46 PM

Share

ಟಿ20 ವಿಶ್ವಕಪ್ 2026 (T20 World Cup 2026) ರ 24 ನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ (South Africa vs New Zealand) ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡ ದಕ್ಷಿಣ ಆಫ್ರಿಕಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ ಒಟ್ಟು 175 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ನಾಯಕ ಐಡೆನ್ ಮಾರ್ಕ್ರಾಮ್ ಅವರ ದಾಖಲೆಯ ಅರ್ಧಶತಕದ ನೆರವಿನಿಂದ 17.1 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

ಮಧ್ಯಮ ಓವರ್​ಗಳಲ್ಲಿ ಎಡವಿದ ಕಿವೀಸ್

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಉತ್ತಮ ಆರಂಭವನ್ನು ನೀಡಿತು. ಟಿಮ್ ಸೀಫರ್ಟ್ ಮತ್ತು ಫಿನ್ ಅಲೆನ್ ಆರಂಭಿಕರಾಗಿ 33 ರನ್‌ಗಳ ಜೊತೆಯಾಟವನ್ನು ನೀಡಿದರು. ಆದಾಗ್ಯೂ ಟಿಮ್ ಸೀಫರ್ಟ್ ಮತ್ತು ರಚಿನ್ ರವೀಂದ್ರ ಇಬ್ಬರೂ ತಲಾ 13 ರನ್ ಗಳಿಸಿ ಔಟಾದರು. ಅಲೆನ್ ಕೂಡ 31 ರನ್​ಗಳಿಗೆ ಸುಸ್ತಾದರೆ ಗ್ಲೆನ್ ಫಿಲಿಪ್ಸ್ 1 ರನ್ ಗಳಿಸಿ ಔಟಾದರು. ನಂತರ ಮಾರ್ಕ್ ಚಾಪ್ಮನ್ ಮತ್ತು ಡ್ಯಾರೆಲ್ ಮಿಚೆಲ್ ನಿರ್ಣಾಯಕ ಪಾಲುದಾರಿಕೆಯನ್ನು ನೀಡಿದರು. ಇವರಿಬ್ಬರು 44 ಎಸೆತಗಳಲ್ಲಿ ಐದನೇ ವಿಕೆಟ್‌ಗೆ 74 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು

ಮಾರ್ಕೊ ಯಾನ್ಸೆನ್ 4 ವಿಕೆಟ್

ಚಾಪ್‌ಮನ್ 48 ಮತ್ತು ಡ್ಯಾರೆಲ್ 32 ರನ್ ಗಳಿಸಿದರೆ, ನಾಯಕ ಮಿಚೆಲ್ ಸ್ಯಾಂಟ್ನರ್ 4 ರನ್ ಗಳಿಸಿ ಔಟಾದರು. ಜೇಮ್ಸ್ ನೀಶಮ್ ಮತ್ತು ಮ್ಯಾಟ್ ಹೆನ್ರಿ ಎಂಟನೇ ವಿಕೆಟ್‌ಗೆ 20 ಎಸೆತಗಳಲ್ಲಿ 30 ರನ್‌ಗಳ ಅಜೇಯ ಪಾಲುದಾರಿಕೆಯನ್ನು ಹಂಚಿಕೊಂಡರು. ದಕ್ಷಿಣ ಆಫ್ರಿಕಾ ಪರ ಮಾರ್ಕೊ ಯಾನ್ಸೆನ್ 4 ವಿಕೆಟ್ ಪಡೆದರೆ, ಲುಂಗಿ ಎನ್‌ಗಿಡಿ, ಕೇಶವ್ ಮಹಾರಾಜ್ ಮತ್ತು ಕಾರ್ಬಿನ್ ಬಾಷ್ ತಲಾ 1 ವಿಕೆಟ್ ಪಡೆದರು.

IND vs PAK Probable Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ ಖಚಿತ

ಐಡೆನ್ ಮಾರ್ಕ್ರಾಮ್ ದಾಖಲೆಯ ಅರ್ಧಶತಕ

176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಸ್ಫೋಟಕ ಆರಂಭ ಸಿಕ್ಕಿತು. ಅದರಲ್ಲೂ ನಾಯಕ ಐಡೆನ್ ಮಾರ್ಕ್ರಾಮ್ 44 ಎಸೆತಗಳಲ್ಲಿ ಅಜೇಯ 86 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಮಾತ್ರವಲ್ಲದೆ ಮಾರ್ಕ್ರಾಮ್ ಟಿ20 ವಿಶ್ವಕಪ್‌ನಲ್ಲಿ ಆಫ್ರಿಕಾ ಪರ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. ಉಳಿದಂತೆ ಡೇವಿಡ್ ಮಿಲ್ಲರ್ ಕೂಡ 17 ಎಸೆತಗಳಲ್ಲಿ ಅಜೇಯ 24 ರನ್ ಗಳಿಸಿದರು. ಕ್ವಿಂಟಾನ್ ಡಿ ಕಾಕ್ 20, ರಿಯಾನ್ ರಿಕಲ್ಟನ್ 21 ಹಾಗೂ ಡೆವಾಲ್ಡ್ ಬ್ರೆವಿಸ್ 21 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವಿಗೆ ಕೊಡುಗೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?