WTC Point Table: ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಯಾವ ಸ್ಥಾನದಲ್ಲಿದೆ?

South Africa vs India: ದಕ್ಷಿಣ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಈ ಪಂದ್ಯದಲ್ಲಿ ಭಾರತದ ಗೆಲುವಿನ ಕನಸಿಗೆ ಅಡ್ಡಿಯಾದರು. ಹಾಗಾದ್ರೆ ಈ ಟೆಸ್ಟ್ ಪಂದ್ಯ ಹೇಗೆ ಸಾಗಿತು?, ಗೆದ್ದ ಆಫ್ರಿಕಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಯಾವ ಸ್ಥಾನದಲ್ಲಿ ಸೋತ ಬಾರತದ ಸ್ಥಿತಿ ಹೇಗಿದೆ ಎಂಬುದನ್ನು ನೋಡೋಣ.

WTC Point Table: ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಯಾವ ಸ್ಥಾನದಲ್ಲಿದೆ?
ಟೀಂ ಇಂಡಿಯಾ
Follow us
TV9 Web
| Updated By: Vinay Bhat

Updated on:Jan 07, 2022 | 9:56 AM

ಜೋಹಾನ್ಸ್​ಬರ್ಗ್​​ನಲ್ಲಿ ಬೊಂಬಾಟ್ ಪ್ರದರ್ಶನ ತೋರಿದ ದಕ್ಷಿಣ ಆಫ್ರಿಕಾ ಭಾರತ (India vs South Africa) ವಿರುದ್ಧ 7 ವಿಕೆಟ್​ಗಳ ಜಯ ಸಾಧಿಸಿ ಸರಣಿ ಸಮಬಲ ಮಾಡಿಕೊಂಡಿದೆ. 240 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಆಫ್ರಿಕಾಕ್ಕೆ ನಾಯಕ ಡೀನ್ ಎಲ್ಗರ್ (Dean Elgar) ಅಜೇಯ 96 ರನ್ ಬಾರಿಸಿ ಗೆಲುವು ತಂದುಕೊಟ್ಟರು. ಮಳೆಯ ಅಡ್ಡಿಯ ಹೊರತಾಗಿಯೂ ನಾಲ್ಕನೇ ದಿನದಲ್ಲಿಯೇ ಗೆಲುವಿನ ಸಂಭ್ರಮವನ್ನಾಚರಿಸುವಲ್ಲಿ ಯಶಸ್ವಿಯಾಯಿತು. ಆರಂಭಿಕನಾಗಿ ಕಣಕ್ಕಿಳಿದು ಅಂತಿಮ ಹಂತದವರೆಗೂ ಕ್ರೀಸ್‌ಬಲ್ಲಿ ಭದ್ರವಾಗಿ ನೆಲೆಯೂರಿದ ದಕ್ಷಿಣ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಈ ಪಂದ್ಯದಲ್ಲಿ ಭಾರತದ ಗೆಲುವಿನ ಕನಸಿಗೆ ಅಡ್ಡಿಯಾದರು. ಹಾಗಾದ್ರೆ ಈ ಟೆಸ್ಟ್ ಪಂದ್ಯ ಹೇಗೆ ಸಾಗಿತು?, ಗೆದ್ದ ಆಫ್ರಿಕಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ (World Test Championship) ಯಾವ ಸ್ಥಾನದಲ್ಲಿ ಸೋತ ಬಾರತದ ಸ್ಥಿತಿ ಹೇಗಿದೆ ಎಂಬುದನ್ನು ನೋಡೋಣ.

ಎರಡನೇ ಟೆಸ್ಟ್​ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕಳಪೆ ಆಟ ಪ್ರದರ್ಶಿಸಿದ ಪರಿಣಾಮವಾಗಿ ಕೇವಲ 202 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಗಿತ್ತು. ನಾಯಕ ಕೆಎಲ್ ರಾಹುಲ್ (50 ರನ್) ಹಾಗೂ ಆರ್ ಅಶ್ವಿನ್ (46) ಮಾತ್ರವೇ ಉತ್ತಮ ಮೊತ್ತವನ್ನು ಗಳಿಸುವಲ್ಲಿ ಸಫಲವಾಗಿದ್ದರು. ಇದಕ್ಕೆ ಪ್ರತಿಯಾಗಿ ದಕ್ಷಿಣ ಆಪ್ರಿಕಾ ತಂಡ 229 ರನ್‌ಗಳನ್ನು ಗಳಿಸಿ ಇನ್ನಿಂಗ್ಸ್ ಅಂತ್ಯಗೊಳಿಸಿತ್ತು. ಭಾರತದ ಪರವಾಗಿ 7ವಿಕೆಟ್‌ಗಳನ್ನು ಪಡೆದು ಶಾರ್ದೂಲ್ ಠಾಕೂರ್ ಬೌಲಿಂಗ್‌ನಲ್ಲಿ ಮಿಂಚದರು.

ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿರುವ ಭಾರತ ತಂಡ 266 ರನ್‌ಗಳನ್ನು ಗಳಿಸಿ ಆಲೌಟ್ ಆಯಿತು. ಹೀಗಾಗಿ 240 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಸಾಧಾರಣ ಆರಂಭ ದೊರೆಯಿತು. ಮೊದಲ ವಿಕೆಟ್‌ಗೆ 47 ರನ್‌ಗಳಿಸಿದ್ದಾಗ 31 ರನ್‌ಗಳಿಸಿದ್ದ ಮಾರ್ಕ್ರಮ್ ವಿಕೆಟ್ ಕಳೆದುಕೊಂಡಿತ್ತು. ನಂತರ 93 ರನ್‌ಗಳಿಗೆ ದಕ್ಷಿಣ ಆಪ್ರಿಕಾ ತಂಡ 2ನೇ ವಿಕೆಟ್ ಕಳೆದುಕೊಂಡಿತು. ನಂತರ ಮೂರನೇ ವಿಕೆಟ್‌ಗೆ ವಾನ್‌ ಡರ್‌ ಡುಸ್ಸೆನ್ ಜೊತೆಗೆ 82 ರನ್‌ಗಳ ಜೊತೆಯಾಟವನ್ನು ನೀಡಿದರು ಎಲ್ಗರ್.

175 ರನ್‌ಗಳಿದ್ದಾಗ ವಾನ್‌ ಡರ್‌ ಡುಸ್ಸೆನ್ ಔಟಾದರು. ಆದರೆ ಬಳಿಕ ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಪಡೆಯುವಲ್ಲಿ ಭಾರತದ ಬೌಲರ್‌ಗಳು ಸಂಪೂರ್ಣವಾಗಿ ವಿಫಲವಾದರು. ನಾಯಕ ಡೀನ್ ಎಲ್ಗರ್ ಹಾಗೂ ಟೆಂಬಾ ಬವುಮಾ ದಕ್ಷಿಣ ಆಪ್ರಿಕಾ ತಂಡವನ್ನು ಗೆಲುವಿನ ದಡ ತಲುಪಿಸಿದರು. ಡೀನ್ ಎಲ್ಗರ್ ಅಜೇಯ 96 ರನ್‌ಗಳಿಸಿದರೆ ಟೆಂಬಾ ಬವುಮಾ 23 ರನ್‌ಗಳ ಕೊಡುಗೆ ನೀಡಿದರು.

ಈ ಗೆಲುವಿನೊಂದಿಗೆ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಿದೆ. ಗೆಲುವಿಗೂ ಮುನ್ನ ಆಫ್ರಿಕಾ 8ನೇ ಸ್ಥಾನದಲ್ಲಿತ್ತು. ಇದೀಗ ಒಂದು ಗೆಲುವು ಸಾಧಿಸಿ ಐದನೇ ಸ್ಥಾನಕ್ಕೆ ತಲುಪಿದೆ. ಭಾರತ ನಾಲ್ಕನೇ ಸ್ಥಾನದಲ್ಲಿದೆ. ಇದಕ್ಕೂ ಮುನ್ನ ಕೂಡ ಟೀಮ್ ಇಂಡಿಯಾ ಇದೇ ಸ್ಥಾನದಲ್ಲೇ ಇತ್ತು. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ ಟೇಬಲ್ ಇಲ್ಲಿದೆ.

South Africa vs India: 3ನೇ ಟೆಸ್ಟ್​ನಲ್ಲಿ ಕಮ್​ಬ್ಯಾಕ್ ಮತ್ತಷ್ಟು ಕಠಿಣ: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಕ್ಕೆ ಮತ್ತೊಂದು ದೊಡ್ಡ ಶಾಕ್

KL Rahul: ಟೀಮ್ ಇಂಡಿಯಾ ಸೋಲಿಗೆ ನಾಯಕ ಕೆಎಲ್ ರಾಹುಲ್ ನೀಡಿದ ಕಾರಣವೇನು ನೋಡಿ

Published On - 9:55 am, Fri, 7 January 22

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ