AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಸೌತ್ ಆಫ್ರಿಕಾ ತಂಡದಿಂದ ಹೊರಬಿದ್ದ ಪ್ರಮುಖ ವೇಗಿ

Champions Trophy 2025: ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಲಿರುವ ಈ ಟೂರ್ನಿಯ ಬಹುತೇಕ ಮ್ಯಾಚ್​ಗಳು ಪಾಕಿಸ್ತಾನದಲ್ಲಿ ನಡೆಯಲಿದೆ. ಇನ್ನು ಟೀಮ್ ಇಂಡಿಯಾ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಲಿದೆ. ಈ ಟೂರ್ನಿಗೆ ಸೌತ್ ಆಫ್ರಿಕಾ ತಂಡದ ಇಬ್ಬರು ವೇಗಿಗಳು ಅಲಭ್ಯರಾಗಲಿದ್ದಾರೆ.

Champions Trophy 2025: ಸೌತ್ ಆಫ್ರಿಕಾ ತಂಡದಿಂದ ಹೊರಬಿದ್ದ ಪ್ರಮುಖ ವೇಗಿ
South Africa
ಝಾಹಿರ್ ಯೂಸುಫ್
|

Updated on: Feb 06, 2025 | 10:57 AM

Share

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ದಿನಗಳು ಮಾತ್ರ ಉಳಿದಿರುವಾಗಲೇ ಸೌತ್ ಆಫ್ರಿಕಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೆರಾಲ್ಡ್ ಕೋಟ್ಝಿ ಮುಂಬರುವ ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ತೊಡೆಸಂದು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಜೆರಾಲ್ಡ್ ಕೋಟ್ಝಿ ಇತ್ತೀಚೆಗಷ್ಟೇ ತಂಡಕ್ಕೆ ಮರಳಿದ್ದರು. ಆದರೀಗ ಅವರು ಮತ್ತೆ ಫಿಟ್​ನೆಸ್ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

24 ವರ್ಷದ ಜೆರಾಲ್ಡ್ ಕೋಟ್ಝಿ ಸೌತ್ ಆಫ್ರಿಕಾ ತಂಡದ ಗೇಮ್ ಚೇಂಜರ್ ಬೌಲರ್. ಇದೀಗ ಟೂರ್ನಿ ಆರಂಭಕ್ಕೂ ದಿನಗಳು ಮಾತ್ರ ಉಳಿದಿರುವಾಗ ಕೋಟ್ಝಿ ಹೊರಗುಳಿದಿರುವುದು ಆಫ್ರಿಕಾ ಪಡೆಯ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡಲಿದೆ.

ಏಕೆಂದರೆ ಇದಕ್ಕೂ ಮುನ್ನ ಮತ್ತೋರ್ವ ವೇಗಿ ಅನ್ರಿಕ್ ನೋಕಿಯ ಬೆನ್ನು ನೋವಿನ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದರು. ಇದೀಗ ಜೆರಾಲ್ಡ್ ಕೋಟ್ಝಿ ಕೂಡ ಹೊರಗುಳಿಯುತ್ತಿರುವುದರಿಂದ ಸೌತ್ ಆಫ್ರಿಕಾ ತಂಡದ ಬೌಲಿಂಗ್ ಬಲವನ್ನು ಕುಗ್ಗಿಸಲಿದೆ.

ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್​ಗಿಡಿ, ಕಗಿಸೊ ರಬಾಡ, ರಿಯಾನ್ ರಿಕೆಲ್ಟನ್, ತಬ್ರೇಝ್ ಶಂಸಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟ್ರಿಸ್ಟನ್ ಸ್ಟಬ್ಸ್.

*ಅನ್ರಿಕ್ ನೋಕಿಯ (ಗಾಯಾಳು), ಜೆರಾಲ್ಡ್ ಕೋಟ್ಝಿ (ಗಾಯಾಳು). 

ಚಾಂಪಿಯನ್ಸ್ ಟ್ರೋಫಿ 2025 ಸೌತ್ ಆಫ್ರಿಕಾ ವೇಳಾಪಟ್ಟಿ
ದಿನಾಂಕ ಪಂದ್ಯಗಳು ಕ್ರೀಡಾಂಗಣ ಸಮಯ
ಫೆಬ್ರವರಿ 21 ಅಫ್ಘಾನಿಸ್ತಾನ್ v ಸೌತ್ ಆಫ್ರಿಕಾ ರಾಷ್ಟ್ರೀಯ ಕ್ರೀಡಾಂಗಣ, ಕರಾಚಿ IST ಮಧ್ಯಾಹ್ನ 2:30
25 ಫೆಬ್ರವರಿ ಆಸ್ಟ್ರೇಲಿಯಾ v ಸೌತ್ ಆಫ್ರಿಕಾ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ IST ಮಧ್ಯಾಹ್ನ 2:30
ಮಾರ್ಚ್ 1 ಸೌತ್ ಆಫ್ರಿಕಾ v ಇಂಗ್ಲೆಂಡ್, ರಾಷ್ಟ್ರೀಯ ಕ್ರೀಡಾಂಗಣ, ಕರಾಚಿ IST ಮಧ್ಯಾಹ್ನ 2:30

ಇದನ್ನೂ ಓದಿ: ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟ IPLನ ಮೂರು ಫ್ರಾಂಚೈಸಿಗಳು..!

ಚಾಂಪಿಯನ್ಸ್ ಟ್ರೋಫಿ ಯಾವಾಗ ಶುರು?

2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಲಿರುವ ಈ ಟೂರ್ನಿಯ ಬಹುತೇಕ ಮ್ಯಾಚ್​ಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಲಿದೆ. ಇನ್ನು ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಫೆಬ್ರವರಿ 21 ರಂದು ನಡೆಯಲಿರುವ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು ಎದುರಿಸುವ ಮೂಲಕ ಸೌತ್ ಆಫ್ರಿಕಾ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ