ಇಸ್ರೇಲ್ ಸೈನಿಕರಿಗೆ ಬೆಂಬಲ: ಸೌತ್ ಆಫ್ರಿಕಾ U19 ತಂಡದ ನಾಯಕ ವಜಾ..!

U19 World Cup 2024: ಈ ಬಾರಿಯ ಅಂಡರ್-19 ವಿಶ್ವಕಪ್ ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌತ್ ಆಫ್ರಿಕಾದಲ್ಲಿ ನಡೆಯಲಿದೆ. ಈ ಹಿಂದೆ ಶ್ರೀಲಂಕಾ ಅಂಡರ್-19 ವಿಶ್ವಕಪ್​ ಆಯೋಜನೆಯ ಹಕ್ಕನ್ನು ಹೊಂದಿತ್ತು. ಆದರೆ ನವೆಂಬರ್​ನಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿದೆ. ಹೀಗಾಗಿ 15ನೇ ಆವೃತ್ತಿಯ ಕಿರಿಯರ ವಿಶ್ವಕಪ್​ನ್ನು ಸೌತ್ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.

ಇಸ್ರೇಲ್ ಸೈನಿಕರಿಗೆ ಬೆಂಬಲ: ಸೌತ್ ಆಫ್ರಿಕಾ U19 ತಂಡದ ನಾಯಕ ವಜಾ..!
David Teeger
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 13, 2024 | 1:55 PM

ಸೌತ್ ಆಫ್ರಿಕಾ ಅಂಡರ್-19 ತಂಡದ ಕ್ಯಾಪ್ಟನ್ ಡೇವಿಡ್ ಟೀಗರ್ (David Teeger) ಅವರನ್ನು ನಾಯಕತ್ವದಿಂದ ವಜಾಗೊಳಿಸಲಾಗಿದೆ. ಇತ್ತೀಚೆಗೆ ಇಸ್ರೇಲ್ ಸೈನಿಕರನ್ನು ಹಾಡಿ ಹೊಗಳಿದ್ದ ಪರಿಣಾಮ ಇದೀಗ ತಂಡದ ನಾಯಕನ ಸ್ಥಾನದಿಂದ ಟೀಗರ್ ಅವರನ್ನು ಕೆಳಗಿಳಿಸಲಾಗಿದೆ. ಅಲ್ಲದೆ ಶೀಘ್ರದಲ್ಲೇ ತಂಡದ ನೂತನ ನಾಯಕನನ್ನು ಘೋಷಿಸುವುದಾಗಿ ಎಂದು ಕ್ರಿಕೆಟ್ ಸೌತ್ ಆಫ್ರಿಕಾ ತಿಳಿಸಿದೆ.

ಯಹೂದಿ ಅಚೀವರ್ ಅವಾರ್ಡ್ಸ್​ನಲ್ಲಿ ಭಾಗವಹಿಸಿದ್ದ ಡೇವಿಡ್ ಟೀಗರ್ ಪ್ರಶಸ್ತಿ ಪಡೆದು ಇಸ್ರೇಲ್ ಸೈನಿಕರನ್ನು ಹೊಗಳಿದ್ದರು. “ನಾನು ಈಗ ಉದಯೋನ್ಮುಖ ತಾರೆ. ಆದರೆ ನಿಜವಾದ ಉದಯೋನ್ಮುಖ ತಾರೆಗಳೆಂದರೆ ಇಸ್ರೇಲ್​ನ ಯುವ ಸೈನಿಕರು. ಈ ಪ್ರಶಸ್ತಿಯನ್ನು ನಾನು ಇಸ್ರೇಲ್​ಗಾಗಿ ಹೋರಾಡುತ್ತಿರುವ ಪ್ರತಿಯೊಬ್ಬ ಸೈನಿಕನಿಗೆ ಅರ್ಪಿಸಲು ಬಯಸುತ್ತೇನೆ ಎಂದು ತಿಳಿಸಿದ್ದರು.

ಡೇವಿಡ್ ಟೀಗರ್ ಅವರ ಈ ಹೇಳಿಕೆಗಳ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು. ಇದಕ್ಕೆ ಮುಖ್ಯ ಕಾರಣ ಗಾಝಾ ಪೆಟ್ಟಿಯಲ್ಲಿ ಇಸ್ರೇಲ್ ಸೈನಿಕರು ನಡೆಸುತ್ತಿರುವ ಮಾರಣಹೋಮ. ಅಲ್ಲದೆ ಆಟಗಾರನೊಬ್ಬ ಯುದ್ಧವನ್ನು ಬೆಂಬಲಿಸಿ ಮಾಡಿದ ಕಾಮೆಂಟ್​ಗಳ ಬಗ್ಗೆ ಸೌತ್ ಆಫ್ರಿಕಾದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿತ್ತು.

ಈ ಬಗ್ಗೆ ಪ್ಯಾಲೆಸ್ತೀನ್ ಸಾಲಿಡಾರಿಟಿ ಅಲೈಯನ್ಸ್ (PSA) ಸಂಘಟನೆಯು, ಸೌತ್ ಆಫ್ರಿಕಾದ ಕ್ರೀಡಾ ಒಕ್ಕೂಟ ಮತ್ತು ಒಲಿಂಪಿಕ್ ಸಮಿತಿಗೆ (SASCOC) ದೂರು ಸಲ್ಲಿಸಿತ್ತು. ಇದೀಗ ಅಂಡರ್ 19 ವಿಶ್ವಕಪ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಮುನ್ನಡೆಸಲು ಸಜ್ಜಾಗಿರುವ ಯುವ ಆಟಗಾರನ ವಿರುದ್ಧ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿವೆ.

ಹೀಗಾಗಿ ತಂಡದ ನಾಯಕತ್ವದಿಂದ ಡೇವಿಡ್ ಟೀಗರ್ ಅವರನ್ನು ಕೆಳಗಿಳಿಸಲು ಸೌತ್ ಆಫ್ರಿಕಾ ಕ್ರಿಕೆಟ್ ಮಂಡಳಿ​ ನಿರ್ಧರಿಸಿದೆ. ಸದ್ಯ ಡೇವಿಡ್ ಟೀಗರ್ ಸೌತ್ ಆಫ್ರಿಕಾ ತಂಡದ ನಾಯಕತ್ವದಿಂದ ವಜಾಗೊಂಡಿದ್ದು, ಇದಾಗ್ಯೂ ಆಟಗಾರನಾಗಿ ಅಂಡರ್-19 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಸೌತ್ ಆಫ್ರಿಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.

ಅಂಡರ್-19 ವಿಶ್ವಕಪ್​:

ಈ ಬಾರಿಯ ಅಂಡರ್-19 ವಿಶ್ವಕಪ್ ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌತ್ ಆಫ್ರಿಕಾದಲ್ಲಿ ನಡೆಯಲಿದೆ. ಈ ಹಿಂದೆ ಶ್ರೀಲಂಕಾ ಅಂಡರ್-19 ವಿಶ್ವಕಪ್​ ಆಯೋಜನೆಯ ಹಕ್ಕನ್ನು ಹೊಂದಿತ್ತು. ಆದರೆ ನವೆಂಬರ್​ನಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿದೆ. ಹೀಗಾಗಿ 15ನೇ ಆವೃತ್ತಿಯ ಕಿರಿಯರ ವಿಶ್ವಕಪ್​ನ್ನು ಸೌತ್ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: IPL 2024: RCB ಆಟಗಾರನಿಗೆ ಗಂಭೀರ ಗಾಯ: ಐಪಿಎಲ್​ಗೆ ಡೌಟ್..!

ಅದರಂತೆ ಇದೀಗ ಸೌತ್ ಆಫ್ರಿಕಾದ ಐದು ಸ್ಟೇಡಿಯಂಗಳಲ್ಲಿ ಟೂರ್ನಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್ ಮೈದಾನ, ಪೂರ್ವ ಲಂಡನ್‌ನ ಬಫಲೋ ಪಾರ್ಕ್ ಸ್ಟೇಡಿಯಂ, ಕಿಂಬರ್ಲಿಯಲ್ಲಿ ಕಿಂಬರ್ಲಿ ಓವಲ್ ಮೈದಾನ, ಪಾಚೆಫ್‌ಸ್ಟ್ರೂಮ್‌ನ ಜೆಬಿ ಮಾರ್ಕ್ಸ್ ಓವಲ್ ಮತ್ತು ಬೆನೋನಿಯ ವಿಲೋಮೂರ್ ಪಾರ್ಕ್ ಸ್ಟೇಡಿಯಂಗಳಲ್ಲಿ ಒಟ್ಟು 41 ಪಂದ್ಯಗಳು ನಡೆಯಲಿದೆ.

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ