AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs SA: ಆಂಗ್ಲರಿಗೆ ಭಾರೀ ಮುಖಭಂಗ: 27 ವರ್ಷಗಳ ನಂತರ ಇಂಗ್ಲೆಂಡ್‌ನಲ್ಲಿ ಏಕದಿನ ಸರಣಿ ಗೆದ್ದ ದಕ್ಷಿಣ ಆಫ್ರಿಕಾ

England vs South Africa 2nd ODI: ಗುರುವಾರ ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ವಿರುದ್ಧ 5 ರನ್‌ಗಳ ಜಯ ಸಾಧಿಸುವ ಮೂಲಕ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿತು. ಮ್ಯಾಥ್ಯೂ ಬ್ರೀಟ್ಜ್ಕೆ ಅವರ ಐತಿಹಾಸಿಕ 85 ರನ್‌ಗಳ ಇನ್ನಿಂಗ್ಸ್ ಈ ಗೆಲುವಿಗೆ ಕಾರಣವಾಯಿತು. ಈ ಮೂಲಕ 27 ವರ್ಷಗಳ ನಂತರ ಆಂಗ್ಲರ ನೆಲದಲ್ಲಿ ODI ಸರಣಿ ವಶಪಡಿಸಿಕೊಂಡಿದೆ.

ENG vs SA: ಆಂಗ್ಲರಿಗೆ ಭಾರೀ ಮುಖಭಂಗ: 27 ವರ್ಷಗಳ ನಂತರ ಇಂಗ್ಲೆಂಡ್‌ನಲ್ಲಿ ಏಕದಿನ ಸರಣಿ ಗೆದ್ದ ದಕ್ಷಿಣ ಆಫ್ರಿಕಾ
Eng Vs Sa
ಪ್ರೀತಿ ಭಟ್​, ಗುಣವಂತೆ
| Updated By: Vinay Bhat|

Updated on: Sep 05, 2025 | 8:10 AM

Share

ಬೆಂಗಳೂರು (ಸೆ. 05): ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ (South Africa) ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಸದ್ಯ ಮೊದಲ ಎರಡು ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ದಕ್ಷಿಣ ಆಫ್ರಿಕಾ ಸರಣಿಯನ್ನು ಗೆದ್ದಿದೆ. 1998 ರ ನಂತರ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಇಂಗ್ಲೆಂಡ್‌ನಲ್ಲಿ ಏಕದಿನ ಸರಣಿಯನ್ನು ಗೆದ್ದಿತು. 2017 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ ತನ್ನ ಕೊನೆಯ ದ್ವಿಪಕ್ಷೀಯ ಏಕದಿನ ಸರಣಿಯನ್ನು ಗೆದ್ದುಕೊಂಡಿತು. ಸರಣಿಯ ಎರಡನೇ ಏಕದಿನ ಪಂದ್ಯವನ್ನು ಸೆಪ್ಟೆಂಬರ್ 4 ರಂದು ಲಾರ್ಡ್ಸ್‌ನಲ್ಲಿ ನಡೆಸಲಾಯಿತು, ಇದರಲ್ಲಿ ದಕ್ಷಿಣ ಆಫ್ರಿಕಾ 5 ರನ್‌ಗಳ ಜಯ ಸಾಧಿಸಿತು. ಎರಡೂ ತಂಡಗಳ ನಡುವೆ ಹೈ ಸ್ಕೋರಿಂಗ್ ಪಂದ್ಯ ನಡೆದಿದ್ದು, ಕೊನೆಯ ಓವರ್ ವರೆಗೂ ರೋಚಕತೆ ಸೃಷ್ಟಿಸಿತ್ತು.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್

ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಎರಡನೇ ಪಂದ್ಯದಲ್ಲಿ, ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅಂತಹ ಪರಿಸ್ಥಿತಿಯಲ್ಲಿ, ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 330 ರನ್ ಗಳಿಸಿತು. ಪ್ರವಾಸಿ ತಂಡದ ಪರ ಮ್ಯಾಥ್ಯೂ ಬ್ರೀಟ್ಜ್ಕೆ ಅತ್ಯಧಿಕ 85 ರನ್ ಗಳಿಸಿದರು. ಇದರ ಹೊರತಾಗಿ, ಟ್ರಿಸ್ಟಾನ್ ಸ್ಟಬ್ಸ್ ಕೂಡ 58 ರನ್‌ಗಳ ಇನ್ನಿಂಗ್ಸ್ ಆಡಿದರು.

ಇದನ್ನೂ ಓದಿ
Image
ಏಕದಿನ ವಿಶ್ವಕಪ್; ಭಾರತ ತಂಡದಿಂದ ಹೊರಬಿದ್ದ ಸ್ಟಾರ್ ವಿಕೆಟ್ ಕೀಪರ್
Image
ಅತ್ಯಂತ ಕಡಿಮೆ ಬೆಲೆಗೆ ಸಿಗಲಿದೆ ವಿಶ್ವಕಪ್ ಟಿಕೆಟ್; ಇಂದೇ ಖರೀದಿಸಿ
Image
ಪಂಜಾಬ್‌ ಪ್ರವಾಹ ಪರಿಹಾರ ನಿಧಿಗೆ ಪಂಜಾಬ್ ಕಿಂಗ್ಸ್ ದೇಣಿಗೆ
Image
ವಿಚಾರಣೆಗೆ ಬರುವಂತೆ ಶಿಖರ್ ಧವನ್​ಗೆ ಸಮನ್ಸ್ ನೀಡಿದ ಇಡಿ

ಐಡೆನ್ ಮಾರ್ಕ್ರಾಮ್ (49), ಡೆವಾಲ್ಡ್ ಬ್ರೆವಿಸ್ (42), ರಯಾನ್ ರಿಕಲ್ಟನ್ (35) ಮತ್ತು ಕಾರ್ಬಿನ್ ಬಾಷ್ (32*) ಕೂಡ ಉತ್ತಮ ಇನ್ನಿಂಗ್ಸ್ ಆಡಿದರು. ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್ 4 ವಿಕೆಟ್ ಪಡೆದರು. ಆದಿಲ್ ರಶೀದ್ 2 ವಿಕೆಟ್ ಪಡೆದರೆ, ಜಾಕೋಬ್ ಬೆಥೆಲ್ 1 ವಿಕೆಟ್ ಪಡೆದರು.

World Cup 2025: ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ

ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್ ಸೋತಿತು

331 ರನ್‌ಗಳ ಗುರಿಯನ್ನು ಬೆನ್ನಟ್ಟಲು ಇಂಗ್ಲೆಂಡ್ ಕೂಡ ಉತ್ತಮವಾಗಿ ಬ್ಯಾಟಿಂಗ್ ಮಾಡಿತು. ಜೋ ರೂಟ್ 61 ರನ್ ಗಳಿಸಿದರು ಮತ್ತು ಜೋಸ್ ಬಟ್ಲರ್ ಕೂಡ 61 ರನ್ ಸಿಡಿಸಿದರು. ಜಾಕೋಬ್ ಬೆಥೆಲ್ 58 ರನ್ ಚಚ್ಚಿದರು. ವಿಲ್ ಜಾಕ್ಸ್ (39) ಮತ್ತು ನಾಯಕ ಹ್ಯಾರಿ ಬ್ರೂಕ್ (33) ಸಹ ಕೊಡುಗೆ ನೀಡಿದರು. ಕೊನೆಯಲ್ಲಿ, ಜೋಫ್ರಾ ಆರ್ಚರ್ ಕೂಡ ವೇಗದಲ್ಲಿ 27 ರನ್ ಗಳಿಸಿ ಅಜೇಯರಾಗಿ ಉಳಿದರು. ಇದರ ಹೊರತಾಗಿಯೂ, ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್ ಕೇವಲ 5 ರನ್‌ಗಳಿಂದ ಪಂದ್ಯವನ್ನು ಸೋತಿತು.

ನಿಗದಿತ 50 ಓವರ್‌ಗಳಲ್ಲಿ ಇಂಗ್ಲೆಂಡ್ 9 ವಿಕೆಟ್‌ಗಳಿಗೆ 325 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್ ಗೆಲ್ಲಲು 16 ರನ್‌ಗಳ ಅಗತ್ಯವಿತ್ತು. ದಕ್ಷಿಣ ಆಫ್ರಿಕಾ ಪರ, ನಾಂಡ್ರೆ ಬರ್ಗರ್ 3 ವಿಕೆಟ್ ಪಡೆದರು, ಕೇಶವ್ ಮಹಾರಾಜ್ 2 ವಿಕೆಟ್ ಪಡೆದರು ಮತ್ತು ಲುಂಗಿ ಎನ್‌ಗಿಡಿ, ಕಾರ್ಬಿನ್ ಬಾಷ್ ಮತ್ತು ಸೆನುರನ್ ಮುತ್ತು ಸಾಮಿ ತಲಾ 1 ವಿಕೆಟ್ ಕಿತ್ತರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ