T20 World Cup 2022: ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ (South Africa T20 World Cup 2022 squad) ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಟೆಂಬಾ ಬವುಮಾ ಮುನ್ನಡೆಸಲಿದ್ದಾರೆ. ಆದರೆ ಸ್ಟಾರ್ ಬ್ಯಾಟ್ಸ್ಮನ್ ತಂಡದಿಂದ ಹೊರಗುಳಿದಿರುವುದು ಸೌತ್ ಆಫ್ರಿಕಾಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಸೌತ್ ಆಫ್ರಿಕಾ ತಂಡದ ಸ್ಪೋಟಕ ಬ್ಯಾಟ್ಸ್ಮನ್ ರಸ್ಸಿ ವಂಡರ್ ಡಸ್ಸೆನ್ ಗಾಯಗೊಂಡಿದ್ದು, ಹೀಗಾಗು ಟಿ20 ವಿಶ್ವಕಪ್ನಿಂದ ಹೊರುಗುಳಿದಿದ್ದಾರೆ.
ಓಲ್ಡ್ ಟೆಫೋರ್ಡ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದ ವೇಳೆ ಅವರ ಬೆರಳಿಗೆ ಗಂಭೀರ ಗಾಯವಾಗಿತ್ತು. ಹೀಗಾಗಿ ಡುಸ್ಸೆನ್ಗೆ 6 ವಾರಗಳ ಕಾಲ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ.
ಇನ್ನು ತಂಡದಲ್ಲಿ ಯುವ ಆಟಗಾರ ಟ್ರಿಸ್ಟಾನ್ ಸ್ಟಬ್ಸ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ 15 ಸದಸ್ಯರಲ್ಲದೇ ಮೂವರನ್ನು ಮೀಸಲು ಆಟಗಾರರನ್ನಾಗಿ ಕೂಡ ಆಯ್ಕೆ ಮಾಡಲಾಗಿದೆ. ಅದರಂತೆ ಟಿ20 ವಿಶ್ವಕಪ್‌ಗೆ ಸೌತ್ ಆಫ್ರಿಕಾ ಟಿ20 ತಂಡ ಈ ಕೆಳಗಿನಂತಿದೆ.
ಸೌತ್ ಆಫ್ರಿಕಾ ಟಿ20 ವಿಶ್ವಕಪ್ ತಂಡ ಹೀಗಿದೆ:
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲ್ಲೆ ರೊಸ್ಸೋವ್, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.
ಮೀಸಲು ಆಟಗಾರರು: ಜಾರ್ನ್ ಫಾರ್ಟುಯಿನ್, ಮಾರ್ಕೊ ಯಾನ್ಸೆನ್ ಮತ್ತು ಆಂಡಿಲ್ ಫೆಹ್ಲುಕ್ವಾಯೊ.
Published On - 4:04 pm, Tue, 6 September 22