WTC Final 2025: ಕ್ರಿಕೆಟ್ ಕಾಶಿಯಲ್ಲಿ ಸೌತ್ ಆಫ್ರಿಕಾ vs ಆಸ್ಟ್ರೇಲಿಯಾ ನಡುವೆ ಗದಾಯುದ್ಧ

WTC Final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಟೆಸ್ಟ್​ ಕ್ರಿಕೆಟ್​ನ ಗದಾಯುದ್ಧದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಜೂನ್ 11 ರಿಂದ ಶುರುವಾಗಲಿರುವ ಈ ಪಂದ್ಯಕ್ಕೆ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನ ಆತಿಥ್ಯವಹಿಸುತ್ತಿರುವುದು ವಿಶೇಷ.

WTC Final 2025: ಕ್ರಿಕೆಟ್ ಕಾಶಿಯಲ್ಲಿ ಸೌತ್ ಆಫ್ರಿಕಾ vs ಆಸ್ಟ್ರೇಲಿಯಾ ನಡುವೆ ಗದಾಯುದ್ಧ
Sa Vs Aus
Follow us
ಝಾಹಿರ್ ಯೂಸುಫ್
|

Updated on: Jan 06, 2025 | 10:54 AM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯಕ್ಕೆ ದಿನಾಂಕ ನಿಗದಿಯಾಗಿದೆ. ಜೂನ್ 11 ರಿಂದ ಶುರುವಾಗಲಿರುವ WTC ಫೈನಲ್ ಪಂದ್ಯದಲ್ಲಿ ಈ ಬಾರಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಈ ಪಂದ್ಯಕ್ಕೆ ಇಂಗ್ಲೆಂಡ್​ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸುತ್ತಿರುವುದು ವಿಶೇಷ. ಇದಕ್ಕೂ ಮುನ್ನ ನಡೆದ 2021ರ ಮತ್ತು 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಗಳಿಗೆ ಇಂಗ್ಲೆಂಡ್​ನ ಓವಲ್ ಮೈದಾನ ಆತಿಥ್ಯವಹಿಸಿತ್ತು.

ಈ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ಅಂತಿಮ ಹಣಾಹಣಿಯನ್ನು ಆಯೋಜಿಸಲು ಐಸಿಸಿ ನಿರ್ಧರಿಸಿದೆ. ಅದರಂತೆ ಜೂನ್ 11 ರಿಂದ 15 ರವರೆಗೆ ಫೈನಲ್ ಪಂದ್ಯ ಜರುಗಲಿದೆ. ಈ ಪಂದ್ಯದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಸೌತ್ ಆಫ್ರಿಕಾ ಮತ್ತು ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.

ಮೀಸಲು ದಿನದಾಟ:

ಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಇನ್ನಿತರ ಕಾರಣಗಳಿಂದ ದಿನದಾಟ ನಡೆಯದಿದ್ದರೆ ಮೀಸಲು ದಿನದಾಟದ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಇದಕ್ಕಾಗಿ ಜೂನ್ 16 ಮೀಸಲು ದಿನವಾಗಿ ಘೋಷಿಸಲಾಗಿದೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಫಲಿತಾಂಶವನ್ನು ನಿರೀಕ್ಷಿಸಬಹುದು.

ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ ಎರಡು ಬಾರಿ ಫೈನಲ್ ಫೈಟ್ ನಡೆದಿದೆ. 2021 ರಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿತ್ತು. ಅಂತಿಮ ಪಂದ್ಯದಲ್ಲಿ ಭಾರತ ತಂಡವನ್ನು ಬಗ್ಗು ಬಡಿದು ನ್ಯೂಝಿಲೆಂಡ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು.

ಇನ್ನು 2023 ರಲ್ಲಿ ಟೀಮ್ ಇಂಡಿಯಾ ಮತ್ತೆ ಫೈನಲ್​ಗೆ ಪ್ರವೇಶಿಸಿತ್ತು. ಆದರೆ ಫೈನಲ್ ಫೈಟ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸೋಲನುಭವಿಸಿತು. ಇದೀಗ ಮೂರನೇ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅಂತಿಮ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಸೌತ್ ಆಫ್ರಿಕಾ ತಂಡ ಎದುರಿಸಲಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಒಂದೇ ಒಂದು ಪಂದ್ಯವಾಡದೇ 37.5 ಲಕ್ಷ ರೂ. ಪಡೆದ ಮೂವರು ಆಟಗಾರರು

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಭಾರತೀಯ ಕಾಲಮಾನ ಸಂಜೆ 3.30 ಕ್ಕೆ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ನಲ್ಲಿ ಹಾಗೂ ಡಿಸ್ನಿ ಹಾಟ್​ ಸ್ಟಾರ್ ಆ್ಯಪ್ ಮತ್ತು ವೆಬ್​ಸೈಟ್​​ಗಳಲ್ಲಿ ಲೈವ್ ವೀಕ್ಷಿಸಬಹುದು.

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ