ಏಕದಿನ ವಿಶ್ವಕಪ್ನ 23ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಸೌತ್ ಆಫ್ರಿಕಾ ಭರ್ಜರಿ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ಹಂಗಾಮಿ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ (174) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಸೌತ್ ಆಫ್ರಿಕಾ ತಂಡ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 382 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಪರ ಮಹಮ್ಮದುಲ್ಲಾ (111) ಶತಕ ಬಾರಿಸಿದರೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಂತಿಮವಾಗಿ ಬಾಂಗ್ಲಾದೇಶ್ ತಂಡವು 46.4 ಓವರ್ಗಳಲ್ಲಿ 233 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಸೌತ್ ಆಫ್ರಿಕಾ ತಂಡವು 149 ರನ್ಗಳ ಆಮೋಘ ಗೆಲುವು ದಾಖಲಿಸಿತು.
ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು ಇದುವರೆಗೆ 25 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 19 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ ತಂಡ 8 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ.
ಬಾಂಗ್ಲಾದೇಶ್ (ಪ್ಲೇಯಿಂಗ್ XI): ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮೆಹಿದಿ ಹಸನ್ ಮಿರಾಝ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್.
ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಝ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯಟ್ಝಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲಿಝಾಡ್ ವಿಲಿಯಮ್ಸ್.
ಲಿಝಾರ್ಡ್ ವಿಲಿಯಮ್ಸ್ ಎಸೆದ 47ನೇ ಓವರ್ನ 4ನೇ ಎಸೆತದಲ್ಲಿ ಡೇವಿಡ್ ಮಿಲ್ಲರ್ಗೆ ಕ್ಯಾಚ್ ನೀಡಿದ ಮುಸ್ತಫಿಜುರ್ ರೆಹಮಾನ್.
46.4 ಓವರ್ಗಳಲ್ಲಿ 233 ರನ್ಗಳಿಸಿ ಆಲೌಟ್ ಆದ ಬಾಂಗ್ಲಾದೇಶ್ ತಂಡ.
149 ರನ್ಗಳ ಭರ್ಜರಿ ಜಯ ಸಾಧಿಸಿದ ಸೌತ್ ಆಫ್ರಿಕಾ ತಂಡ.
ಜೆರಾಲ್ಡ್ ಕೊಯಟ್ಝಿ ಎಸೆದ 46ನೇ ಓವರ್ನ 4ನೇ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಹೊಡೆತ ಬಾರಿಸಿದ ಮಹಮದುಲ್ಲಾ…ಬೌಂಡರಿ ಲೈನ್ನಲ್ಲಿ ಕ್ಯಾಚ್.
111 ಎಸೆತಗಳಲ್ಲಿ 111 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಬಾಂಗ್ಲಾ ತಂಡದ ಅನುಭವಿ ಬ್ಯಾಟರ್ ಮಹಮದುಲ್ಲಾ.
ಕ್ರೀಸ್ನಲ್ಲಿ ಮುಸ್ತಫಿಜುರ್ ರೆಹಮಾನ್ ಹಾಗೂ ಶೊರಿಫುಲ್ ಇಸ್ಲಾಂ ಬ್ಯಾಟಿಂಗ್
104 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ ಶತಕ ಪೂರೈಸಿದ ಮಹಮದುಲ್ಲಾ.
ಶತಕದ ಬೆನ್ನಲ್ಲೇ ಕಗಿಸೊ ರಬಾಡ ಎಸೆದ 45ನೇ ಓವರ್ನ 5ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಮಹಮದುಲ್ಲಾ.
45 ಓವರ್ಗಳ ಮುಕ್ತಾಯದ ವೇಳೆಗೆ ಬಾಂಗ್ಲಾದೇಶ್ ತಂಡದ ಸ್ಕೋರ್
ಕ್ರೀಸ್ನಲ್ಲಿ ಮುಸ್ತಫಿಜುರ್ ರೆಹಮಾನ್ ಹಾಗೂ ಮಹಮದುಲ್ಲಾ ಬ್ಯಾಟಿಂಗ್.
ಜೆರಾಲ್ಡ್ ಕೊಯಟ್ಝಿ ಎಸೆದ 44ನೇ ಓವರ್ನ 5ನೇ ಎಸೆತದಲ್ಲಿ ಲಾಂಗ್ ಆಫ್ನತ್ತ ಆಕರ್ಷಕ ಸಿಕ್ಸ್ ಸಿಡಿಸಿದ ಮಹಮದುಲ್ಲಾ.
ಈ ಸಿಕ್ಸ್ನೊಂದಿಗೆ ಮಹಮದುಲ್ಲಾ ವೈಯುಕ್ತಿಕ ಸ್ಕೋರ್ 97 ಕ್ಕೇರಿಕೆ.
ಕ್ರೀಸ್ನಲ್ಲಿ ಮುಸ್ತಫಿಜುರ್ ರೆಹಮಾನ್ ಹಾಗೂ ಮಹಮದುಲ್ಲಾ ಬ್ಯಾಟಿಂಗ್
ಮಾರ್ಕೊ ಯಾನ್ಸೆನ್ ಎಸೆದ 40ನೇ ಓವರ್ನ ಮೊದಲ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಮಹಮದುಲ್ಲಾ.
ಕ್ರೀಸ್ನಲ್ಲಿ ಮುಸ್ತಫಿಜುರ್ ರೆಹಮಾನ್ ಹಾಗೂ ಮಹಮದುಲ್ಲಾ ಬ್ಯಾಟಿಂಗ್.
ಸೌತ್ ಆಫ್ರಿಕಾ ತಂಡದ ಗೆಲುವಿಗೆ ಕೇವಲ 2 ವಿಕೆಟ್ಗಳ ಅವಶ್ಯಕತೆ.
ಲಿಝಾರ್ಡ್ ವಿಲಿಯಮ್ಸ್ ಎಸೆದ 39ನೇ ಓವರ್ನ 2ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಬಾರಿಸಿದ ಮಹಮದುಲ್ಲಾ.
ಇದು ಬಾಂಗ್ಲಾದೇಶ್ ಇನಿಂಗ್ಸ್ನ ಮೊದಲ ಸಿಕ್ಸ್.
5ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಮುಸ್ತಫಿಜುರ್ ರೆಹಮಾನ್.
ಕಗಿಸೊ ರಬಾಡ ಎಸೆದ 37ನೇ ಓವರ್ನ ನಾಲ್ಕನೇ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದ ಹಸನ್ ಮಹಮೂದ್.
ಕ್ರೀಸ್ನಲ್ಲಿ ಮುಸ್ತಫಿಜುರ್ ರೆಹಮಾನ್ ಹಾಗೂ ಮಹಮದುಲ್ಲಾ ಬ್ಯಾಟಿಂಗ್.
ಭರ್ಜರಿ ಬೌಲಿಂಗ್ ಮೂಲಕ ಗೆಲುವಿನತ್ತ ಮುನ್ನಡೆಯುತ್ತಿರುವ ಸೌತ್ ಆಫ್ರಿಕಾ ತಂಡ
67 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಬಾಂಗ್ಲಾದೇಶ್ ತಂಡದ ಅನುಭವಿ ಬ್ಯಾಟರ್ ಮಹಮದುಲ್ಲಾ.
ಕಗಿಸೊ ರಬಾಡ ಎಸೆದ 35ನೇ ಓವರ್ನ ಕೊನೆಯ ಎಸೆತದಲ್ಲಿ ಥರ್ಡ್ಮ್ಯಾನ್ ಫೀಲ್ಡರ್ನತ್ತ ಫೋರ್ ಬಾರಿಸಿದ ಹಸನ್ ಮಹಮೂದ್.
35 ಓವರ್ಗಳ ಮುಕ್ತಾಯದ ವೇಳೆಗೆ ಬಾಂಗ್ಲಾದೇಶ್ ತಂಡದ ಸ್ಕೋರ್ 148 ರನ್ಗಳು.
30 ಓವರ್ಗಳ ಮುಕ್ತಾಯದ ವೇಳೆಗೆ 125 ರನ್ ಕಲೆಹಾಕಿದ ಬಾಂಗ್ಲಾದೇಶ್.
7 ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಸೌತ್ ಆಫ್ರಿಕಾ ತಂಡ.
ಕ್ರೀಸ್ನಲ್ಲಿ ಹಸನ್ ಮಹಮೂದ್ ಹಾಗೂ ಮಹಮದುಲ್ಲಾ ಬ್ಯಾಟಿಂಗ್.
ಜೆರಾಲ್ಡ್ ಕೊಯಟ್ಝಿ ಎಸೆದ 29ನೇ ಓವರ್ನ ಮೂರನೇ ಎಸೆತದಲ್ಲಿ ಬೌಲರ್ಗೆ ಕ್ಯಾಚ್ ನೀಡಿದ ನಾಸುಮ್ ಅಹ್ಮದ್.
19 ಎಸೆತಗಳಲ್ಲಿ 19 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ಬ್ಯಾಟರ್ ನಾಸುಮ್ ಅಹ್ಮದ್.
ಜೆರಾಲ್ಡ್ ಕೊಯಟ್ಝಿ ಎಸೆದ 26ನೇ ಓವರ್ನ 3ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಮಹಮದುಲ್ಲಾ.
ಈ ಫೋರ್ನೊಂದಿಗೆ ಶತಕ ಪೂರೈಸಿದ ಬಾಂಗ್ಲಾದೇಶ್ ತಂಡ.
ಕ್ರೀಸ್ನಲ್ಲಿ ನಾಸುಮ್ ಅಹ್ಮದ್ ಹಾಗೂ ಮಹಮದುಲ್ಲಾ ಬ್ಯಾಟಿಂಗ್.
25 ಓವರ್ಗಳ ಮುಕ್ತಾಯದ ವೇಳೆಗೆ 93 ರನ್ ಕಲೆಹಾಕಿದ ಬಾಂಗ್ಲಾದೇಶ್ ತಂಡ.
6 ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಸೌತ್ ಆಫ್ರಿಕಾ.
ಕ್ರೀಸ್ನಲ್ಲಿ ಮೆಹದಿ ಹಸನ್ ಮಿರಾಝ್ ಹಾಗೂ ಮಹಮದುಲ್ಲಾ ಬ್ಯಾಟಿಂಗ್.
ಕೇಶವ್ ಮಹಾರಾಜ್ ಎಸೆದ 22ನೇ ಓವರ್ನ ಕೊನೆಯ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಹೊಡೆತ ಬಾರಿಸಿದ ಮೆಹದಿ ಹಸನ್ ಮಿರಾಝ್…ಬೌಂಡರಿ ಲೈನ್ನಲ್ಲಿ ಕ್ಯಾಚ್. ಸೌತ್ ಆಫ್ರಿಕಾ ತಂಡಕ್ಕೆ 6ನೇ ಯಶಸ್ಸು.
19 ಎಸೆತಗಳಲ್ಲಿ 11 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಮೆಹದಿ ಹಸನ್ ಮಿರಾಝ್.
20 ಓವರ್ಗಳಲ್ಲಿ 72 ರನ್ ಕಲೆಹಾಕಿದ ಬಾಂಗ್ಲಾದೇಶ್ ಬ್ಯಾಟರ್ಗಳು.
ಕ್ರೀಸ್ನಲ್ಲಿ ಮೆಹದಿ ಹಸನ್ ಮಿರಾಝ್ ಹಾಗೂ ಮಹಮದುಲ್ಲಾ ಬ್ಯಾಟಿಂಗ್
ಔಟಾದ ಬ್ಯಾಟರ್ಗಳ ಪಟ್ಟಿ:
18 ಓವರ್ಗಳ ಮುಕ್ತಾಯದ ವೇಳೆಗೆ 64 ರನ್ ಕಲೆಹಾಕಿದ ಬಾಂಗ್ಲಾದೇಶ್ ಬ್ಯಾಟರ್ಗಳು.
5 ವಿಕೆಟ್ಗಳನ್ನು ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಸೌತ್ ಆಫ್ರಿಕಾ.
ಕ್ರೀಸ್ನಲ್ಲಿ ಮೆಹದಿ ಹಸನ್ ಮಿರಾಝ್ ಹಾಗೂ ಮಹಮದುಲ್ಲಾ ಬ್ಯಾಟಿಂಗ್
ಕಗಿಸೊ ರಬಾಡ ಎಸೆದ 15ನೇ ಓವರ್ನ ಕೊನೆಯ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದ ಲಿಟ್ಟನ್ ದಾಸ್ (22).
ಬಾಂಗ್ಳಾದೇಶ್ ತಂಡದ 5ನೇ ವಿಕೆಟ್ ಪತನ.
15 ಓವರ್ಗಳ ಮುಕ್ತಾಯದ ವೇಳೆಗೆ 58 ರನ್ ಕಲೆಹಾಕಿದ ಬಾಂಗ್ಲಾದೇಶ್ ತಂಡ.
ಬಾಂಗ್ಲಾದೇಶ್ ತಂಡಕ್ಕೆ 383 ರನ್ಗಳ ಗುರಿ ನೀಡಿರುವ ಸೌತ್ ಆಫ್ರಿಕಾ.
ಜೆರಾಲ್ಡ್ ಕೊಯಟ್ಝಿ ಎಸೆದ 12ನೇ ಓವರ್ನ 5ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಮುಶ್ಫಿಕುರ್ ರಹೀಮ್.
17 ಎಸೆತಗಳಲ್ಲಿ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಬಾಂಗ್ಲಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮುಶ್ಫಿಕುರ್.
10 ಓವರ್ಗಳ ಮುಕ್ತಾಯದ ವೇಳೆಗೆ ಕೇವಲ 35 ರನ್ ಕಲೆಹಾಕಿದ ಬಾಂಗ್ಲಾದೇಶ್ ತಂಡ.
3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಸೌತ್ ಆಫ್ರಿಕಾ ಬೌಲರ್ಗಳು.
ಕ್ರೀಸ್ನಲ್ಲಿ ಲಿಟ್ಟನ್ ದಾಸ್ ಹಾಗೂ ಮುಶ್ಫಿಕುರ್ ರಹೀಮ್ ಬ್ಯಾಟಿಂಗ್
ಬಾಂಗ್ಲಾದೇಶ್ ತಂಡಕ್ಕೆ 383 ರನ್ಗಳ ಗುರಿ ನೀಡಿರುವ ಸೌತ್ ಆಫ್ರಿಕಾ.
ಲಿಝಾರ್ಡ್ ವಿಲಿಯಮ್ಸ್ ಎಸೆದ 8ನೇ ಓವರ್ನ 2ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್.
ಕ್ರೀಸ್ನಲ್ಲಿ ಲಿಟ್ಟನ್ ದಾಸ್ ಹಾಗೂ ಮುಶ್ಫಿಕುರ್ ರಹೀಮ್ ಬ್ಯಾಟಿಂಗ್
ಮಾರ್ಕೊ ಯಾನ್ಸೆನ್ 7ನೇ ಓವರ್ನ ಮೊದಲ ಎಸೆತದಲ್ಲೇ ಹೆನ್ರಿಕ್ ಕ್ಲಾಸೆನ್ಗೆ ಕ್ಯಾಚ್ ನೀಡಿ ನಿರ್ಗಮಿಸಿದ ತಂಝಿದ್ ಹಸನ್ (12)
2ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ನಜ್ಮುಲ್ ಹೊಸೈನ್ ಶಾಂಟೊ (0).
ಬಾಂಗ್ಲಾದೇಶ್ ತಂಡಕ್ಕೆ ಆರಂಭಿಕ ಆಘಾತ ನೀಡಿದ ಸೌತ್ ಆಫ್ರಿಕಾ.
ಲಿಝಾರ್ಡ್ ವಿಲಿಯಮ್ಸ್ ಎಸೆದ 6ನೇ ಓವರ್ನ 2ನೇ ಎಸೆತದಲ್ಲಿ ಸ್ಕ್ವೇರ್ ಕಟ್ ಮೂಲಕ ಆಕರ್ಷಕ ಬೌಂಡರಿ ಬಾರಿಸಿದ ಎಡಗೈ ದಾಂಡಿಗ ತಂಝಿದ್ ಹಸನ್.
ಕೊನೆಯ ಎಸೆತದಲ್ಲಿ ಮತ್ತೊಂದು ಫೋರ್ ಬಾರಿಸಿದ ಲಿಟ್ಟನ್ ದಾಸ್.
ಮಾರ್ಕೊ ಯಾನ್ಸೆನ್ ಎಸೆದ 5ನೇ ಓವರ್ನ 3ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಲಿಟ್ಟನ್ ದಾಸ್.
5 ಓವರ್ಗಳ ಮುಕ್ತಾಯದ ವೇಳೆಗೆ ಬಾಂಗ್ಲಾ ತಂಡದ ಸ್ಕೋರ್ 19 ರನ್ಗಳು.
ಕ್ರೀಸ್ನಲ್ಲಿ ಲಿಟ್ಟನ್ ದಾಸ್ ಹಾಗೂ ತಂಝಿದ್ ಹಸನ್ ಬ್ಯಾಟಿಂಗ್.
ಮೊದಲ ಓವರ್ನಲ್ಲಿ ಕೇವಲ 2 ರನ್ ನೀಡಿದ ಎಡಗೈ ವೇಗಿ ಮಾರ್ಕೊ ಯಾನ್ಸೆನ್.
ಕ್ರೀಸ್ನಲ್ಲಿ ಲಿಟ್ಟನ್ ದಾಸ್ ಹಾಗೂ ತಂಝಿದ್ ಹಸನ್ ಬ್ಯಾಟಿಂಗ್
ಬಾಂಗ್ಲಾದೇಶ್ ತಂಡಕ್ಕೆ 383 ರನ್ಗಳ ಗುರಿ ನೀಡಿರುವ ಸೌತ್ ಆಫ್ರಿಕಾ.
ಹಸನ್ ಮಹಮೂದ್ ಎಸೆದ ಕೊನೆಯ ಓವರ್ನ ಮೊದಲ ಎಸೆತದಲ್ಲೇ ಸ್ಟ್ರೈಟ್ ಹಿಟ್ ಸಿಕ್ಸ್ ಬಾರಿಸಿದ ಹೆನ್ರಿಕ್ ಕ್ಲಾಸೆನ್.
2ನೇ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದ ಕ್ಲಾಸೆನ್ (90).
4ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಸಿಡಿಸಿದ ಎಡಗೈ ದಾಂಡಿಗ ಡೇವಿಡ್ ಮಿಲ್ಲರ್.
50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 382 ರನ್ ಕಲೆಹಾಕಿದ ಸೌತ್ ಆಫ್ರಿಕಾ.
ಬಾಂಗ್ಲಾದೇಶ್ ತಂಡಕ್ಕೆ 383 ರನ್ಗಳ ಕಠಿಣ ಗುರಿ
ಶೊರಿಫುಲ್ ಇಸ್ಲಾಂ ಎಸೆದ 49ನೇ ಓವರ್ನಲ್ಲಿ 19 ರನ್ ಬಾರಿಸಿದ ಡೇವಿಡ್ ಮಿಲ್ಲರ್.
ಕೊನೆಯ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಬಾರಿಸಿದ ಮಿಲ್ಲರ್.
ಕೊನೆಯ ಓವರ್ ಬಾಕಿ, ಕ್ರೀಸ್ನಲ್ಲಿ ಡೇವಿಡ್ ಮಿಲ್ಲರ್ ಹಾಗೂ ಹೆನ್ರಿಕ್ ಕ್ಲಾಸೆನ್ ಬ್ಯಾಟಿಂಗ್.
ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ ಎಸೆದ 47ನೇ ಓವರ್ನ 3ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಸಿಡಿಸಿದ ಹೆನ್ರಿಕ್ ಕ್ಲಾಸೆನ್.
4ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್.
5ನೇ ಎಸೆತದಲ್ಲಿ ಪುಲ್ ಶಾಟ್ ಮೂಲಕ ಮತ್ತೊಂದು ಭರ್ಜರಿ ಸಿಕ್ಸ್ ಬಾರಿಸಿದ ಕ್ಲಾಸೆನ್.
ಹಸನ್ ಮಹಮೂದ್ ಎಸೆದ 46ನೇ ಓವರ್ನ ಮೊದಲ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಕ್ವಿಂಟನ್ ಡಿಕಾಕ್.
140 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 15 ಫೋರ್ಗಳೊಂದಿಗೆ 174 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ದಾಂಡಿಗ ಡಿಕಾಕ್.
ಮುಸ್ತಫಿಜುರ್ ರೆಹಮಾನ್ ಎಸೆದ 45ನೇ ಓವರ್ನ ಮೊದಲ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಡಿಕಾಕ್.
45 ಓವರ್ಗಳ ಮುಕ್ತಾಯದ ವೇಳೆಗೆ 309 ರನ್ ಕಲೆಹಾಕಿದ ಸೌತ್ ಆಫ್ರಿಕಾ.
ಬೃಹತ್ ಮೊತ್ತದತ್ತ ಸಾಗುತ್ತಿರುವ ಸೌತ್ ಆಫ್ರಿಕಾ ಸ್ಕೋರ್.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ (174) ಹಾಗೂ ಹೆನ್ರಿಕ್ ಕ್ಲಾಸೆನ್ (53) ಬ್ಯಾಟಿಂಗ್.
ಶಕೀಬ್ ಅಲ್ ಹಸನ್ ಎಸೆದ 43ನೇ ಓವರ್ನಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳನ್ನು ಬಾರಿಸಿದ ಕ್ವಿಂಟನ್ ಡಿಕಾಕ್.
ಇದರೊಂದಿಗೆ 129 ಎಸೆತಗಳಲ್ಲಿ 150 ರನ್ ಪೂರೈಸಿದ ಡಿಕಾಕ್.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ಹೆನ್ರಿಕ್ ಕ್ಲಾಸೆನ್ ಬ್ಯಾಟಿಂಗ್.
ಶೊರಿಫುಲ್ ಇಸ್ಲಾಂ ಎಸೆದ 42ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಕ್ವಿಂಟನ್ ಡಿಕಾಕ್.
137 ರನ್ ಬಾರಿಸಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಸೌತ್ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್.
40 ಓವರ್ಗಳ ಮುಕ್ತಾಯದ ವೇಳೆಗೆ 238 ರನ್ ಕಲೆಹಾಕಿದ ಸೌತ್ ಆಫ್ರಿಕಾ ತಂಡ.
4ನೇ ವಿಕೆಟ್ಗೆ 75 ರನ್ಗಳ ಜೊತೆಯಾಟವಾಡಿರುವ ಡಿಕಾಕ್-ಕ್ಲಾಸೆನ್.
ಬೃಹತ್ ಮೊತ್ತದ ಸಾಗುತ್ತಿರುವ ಸೌತ್ ಆಫ್ರಿಕಾ ತಂಡದ ಸ್ಕೋರ್.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ (120) ಹಾಗೂ ಹೆನ್ರಿಕ್ ಕ್ಲಾಸೆನ್ (40) ಬ್ಯಾಟಿಂಗ್.
101 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಶತಕ ಪೂರೈಸಿದ ಕ್ವಿಂಟನ್ ಡಿಕಾಕ್.
35 ಓವರ್ಗಳ ಮುಕ್ತಾಯದ ವೇಳೆಗೆ 196 ರನ್ ಕಲೆಹಾಕಿದ ಸೌತ್ ಆಫ್ರಿಕಾ ತಂಡ.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ಹೆನ್ರಿಕ್ ಕ್ಲಾಸೆನ್ ಬ್ಯಾಟಿಂಗ್.
ಶಕೀಬ್ ಅಲ್ ಹಸನ್ 31ನೇ ಓವರ್ನ 4ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ಗೆ ಯತ್ನಿಸಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಐಡೆನ್ ಮಾರ್ಕ್ರಾಮ್.
69 ಎಸೆತಗಳಲ್ಲಿ 60 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್.
30 ಓವರ್ಗಳ ಮುಕ್ತಾಯದ ವೇಳೆಗೆ 165 ರನ್ ಕಲೆಹಾಕಿದ ಸೌತ್ ಆಫ್ರಿಕಾ.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ (90) ಹಾಗೂ ಐಡೆನ್ ಮಾರ್ಕ್ರಾಮ್ (60) ಬ್ಯಾಟಿಂಗ್.
3ನೇ ವಿಕೆಟ್ಗೆ 130 ರನ್ಗಳ ಜೊತೆಯಾಟವಾಡಿದ ಡಿಕಾಕ್-ಮಾರ್ಕ್ರಾಮ್.
ಮೆಹದಿ ಹಸನ್ ಮಿರಾಝ್ ಎಸೆದ 26ನೇ ಓವರ್ನ ಕೊನೆಯ ಎಸೆತದಲ್ಲಿ ಡೀಪ್ ಬ್ಯಾಕ್ವರ್ಡ್ ಪಾಯಿಂಟ್ನತ್ತ ಫೋರ್ ಬಾರಿಸಿದ ಐಡೆನ್ ಮಾರ್ಕ್ರಾಮ್.
ಈ ಫೋರ್ನೊಂದಿಗೆ 57 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್.
25 ಓವರ್ಗಳ ಮುಕ್ತಾಯದ ವೇಳೆಗೆ 131 ರನ್ ಕಲೆಹಾಕಿದ ಸೌತ್ ಆಫ್ರಿಕಾ.
ರೀಝ ಹೆಂಡ್ರಿಕ್ಸ್ ಹಾಗೂ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ವಿಕೆಟ್ ಕಬಳಿಸಲಷ್ಟೇ ಶಕ್ತರಾದ ಬಾಂಗ್ಲಾ ಬೌಲರ್ಗಳು.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್.
ಮಹಮದುಲ್ಲಾ ಎಸೆದ 22ನೇ ಓವರ್ನ 5ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಕ್ವಿಂಟನ್ ಡಿಕಾಕ್.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್.
20 ಓವರ್ಗಳ ಮುಕ್ತಾಯದ ವೇಳೆಗೆ 99 ರನ್ ಕಲೆಹಾಕಿದ ಸೌತ್ ಆಫ್ರಿಕಾ.
ಕ್ರೀಸ್ನಲ್ಲಿ ಎಡಗೈ ದಾಂಡಿಗ ಕ್ವಿಂಟನ್ ಡಿಕಾಕ್ (59) ಹಾಗೂ ಬಲಗೈ ಬ್ಯಾಟರ್ ಐಡೆನ್ ಮಾರ್ಕ್ರಾಮ್ (26) ಬ್ಯಾಟಿಂಗ್.
ರೀಝ ಹೆಂಡ್ರಿಕ್ಸ್ ಹಾಗೂ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಬಾಂಗ್ಲಾದೇಶ್.
ಹಸನ್ ಮಹಮೂದ್ ಎಸೆದ 18ನೇ ಓವರ್ನ ಮೊದಲ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಕ್ವಿಂಟನ್ ಡಿಕಾಕ್.
ಈ ಫೋರ್ನೊಂದಿಗೆ 47 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಎಡಗೈ ದಾಂಡಿಗ ಕ್ವಿಂಟನ್ ಡಿಕಾಕ್.
ಸೌತ್ ಆಫ್ರಿಕಾ ತಂಡದಿಂದ ಉತ್ತಮ ಬ್ಯಾಟಿಂಗ್.
ಹಸನ್ ಮಹಮೂದ್ ಎಸೆದ 16ನೇ ಓವರ್ನ 4ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಕ್ವಿಂಟನ್ ಡಿಕಾಕ್.
45 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 46 ರನ್ ಬಾರಿಸಿರುವ ಕ್ವಿಂಟನ್ ಡಿಕಾಕ್.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್.
ಶಕೀಬ್ ಅಲ್ ಹಸನ್ ಎಸೆದ 15ನೇ ಓವರ್ನ ಮೊದಲ ಎಸೆತದಲ್ಲೇ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಕ್ವಿಂಟನ್ ಡಿಕಾಕ್.
15 ಓವರ್ಗಳ ಮುಕ್ತಾಯದ ವೇಳೆಗೆ ಸೌತ್ ಆಫ್ರಿಕಾ ತಂಡದ ಸ್ಕೋರ್ 67 ರನ್ಗಳು.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್.
12 ಓವರ್ ಮುಕ್ತಾಯದ ವೇಳೆ ಅರ್ಧಶತಕ ಪೂರೈಸಿದ ಸೌತ್ ಆಫ್ರಿಕಾ ತಂಡ.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್.
ರೀಝ ಹೆಂಡ್ರಿಕ್ಸ್ ಹಾಗೂ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಔಟ್.
10 ಓವರ್ಗಳ ಮುಕ್ತಾಯದ ವೇಳೆಗೆ 44 ರನ್ ಕಲೆಹಾಕಿದ ಸೌತ್ ಆಫ್ರಿಕಾ ತಂಡ.
ರೀಝ ಹೆಂಡ್ರಿಕ್ಸ್ ಹಾಗೂ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಬಾಂಗ್ಲಾದೇಶ್.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್.
ಸ್ಪಿನ್ನರ್ ಮೆಹದಿ ಹಸನ್ ಮಿರಾಝ್ ಎಸೆದ 8ನೇ ಓವರ್ನ 5ನೇ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್..ಅಂಪೈರ್ ತೀರ್ಪು ಔಟ್.
7 ಎಸೆತಗಳಲ್ಲಿ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್.
ಬಾಂಗ್ಲಾದೇಶ್ ತಂಡದಿಂದ ಉತ್ತಮ ಬೌಲಿಂಗ್.
ಎಡಗೈ ವೇಗಿ ಶೊರಿಫುಲ್ ಇಸ್ಲಾಂ ಎಸೆದ 7ನೇ ಓವರ್ನ ಮೊದಲ ಎಸೆತದಲ್ಲೇ ರೀಝ ಹೆಂಡ್ರಿಕ್ಸ್ ಕ್ಲೀನ್ ಬೌಲ್ಡ್. ಬಾಂಗ್ಲಾದೇಶ್ ತಂಡಕ್ಕೆ ಮೊದಲ ಯಶಸ್ಸು.
19 ಎಸೆತಗಳಲ್ಲಿ 12 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ರೀಝ ಹೆಂಡ್ರಿಕ್ಸ್.
ಮೆಹದಿ ಹಸನ್ ಮಿರಾಝ್ 6ನೇ ಓವರ್ನ 4ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಬಾರಿಸಿದ ಕ್ವಿಂಟನ್ ಡಿಕಾಕ್.
ಇದು ಸೌತ್ ಆಫ್ರಿಕಾ ಇನಿಂಗ್ಸ್ನ ಮೊದಲ ಸಿಕ್ಸರ್.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ರೀಝ ಹೆಂಡ್ರಿಕ್ಸ್ ಬ್ಯಾಟಿಂಗ್.
ಶೊರಿಫುಲ್ ಇಸ್ಲಾಂ ಎಸೆದ 5ನೇ ಓವರ್ನ ಮೂರನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಕ್ವಿಂಟನ್ ಡಿಕಾಕ್.
5 ಓವರ್ಗಳ ಮುಕ್ತಾಯದ ವೇಳೆಗೆ ಸೌತ್ ಆಫ್ರಿಕಾ ತಂಡದ ಸ್ಕೋರ್ 25 ರನ್ಗಳು.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ರೀಝ ಹೆಂಡ್ರಿಕ್ಸ್ ಬ್ಯಾಟಿಂಗ್.
ಮುಸ್ತಫಿಜುರ್ ರೆಹಮಾನ್ ಎಸೆದ 3ನೇ ಓವರ್ನ 2ನೇ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ ಫೋರ್ ಬಾರಿಸಿದ ರೀಝ ಹೆಂಡ್ರಿಕ್ಸ್.
ಸೌತ್ ಆಫ್ರಿಕಾ ತಂಡದಿಂದ ಉತ್ತಮ ಬ್ಯಾಟಿಂಗ್.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ರೀಝ ಹೆಂಡ್ರಿಕ್ಸ್ ಬ್ಯಾಟಿಂಗ್.
ಸ್ಪಿನ್ನರ್ ಮೆಹದಿ ಹಸನ್ ಮಿರಾಝ್ 2ನೇ ಓವರ್ನಲ್ಲಿ ನೀಡಿದ್ದು ಕೇವಲ 3 ರನ್ಗಳು ಮಾತ್ರ.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ರೀಝ ಹೆಂಡ್ರಿಕ್ಸ್ ಬ್ಯಾಟಿಂಗ್.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಸೌತ್ ಆಫ್ರಿಕಾ ತಂಡ
ಮುಸ್ತಫಿಜುರ್ ರೆಹಮಾನ್ ಎಸೆದ ಮೊದಲ ಓವರ್ನ 4ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಕ್ವಿಂಟನ್ ಡಿಕಾಕ್. ಇದು ಸೌತ್ ಆಫ್ರಿಕಾ ಇನಿಂಗ್ಸ್ನ ಮೊದಲ ಬೌಂಡರಿ.
ಕ್ರೀಸ್ನಲ್ಲಿ ಕ್ವಿಂಟನ್ ಡಿಕಾಕ್ ಹಾಗೂ ರೀಝ ಹೆಂಡ್ರಿಕ್ಸ್ ಬ್ಯಾಟಿಂಗ್.
ಮೈಸೂರು: ಅರಮನೆ ಬಲರಾಮ ಗೇಟ್ ಬಳಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸಚಿವರಾದ ಕೆ.ಹೆಚ್.ಮುನಿಯಪ್ಪ, ವೆಂಕಟೇಶ್, ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕ ತನ್ವೀರ್ ಸೇಠ್ ಸೇರಿ ಹಲವರು ಭಾಗಿಯಾಗಿದ್ದರು.
ಮೈಸೂರು: ಅದ್ದೂರಿ ದಸರಾ ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂಬೂ ಸವಾರಿ ವೀಕ್ಷಣೆ ಮಾಡಲು ಹಾಕಿದ್ದ ಗ್ಯಾಲರಿಯಲ್ಲಿ ಕುಳಿತಿದ್ದ ರೈತರು ಅದ್ಧೂರಿ ದಸರಾವನ್ನು ವಿರೋಧಿಸಿ ಘೋಷಣೆ ಕೂಗಿದ್ದರು. ಈ ವಿಚಾರವಾಗಿ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಜೀಪ್ನಲ್ಲಿ ಕರೆದೊಯ್ದರು. ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಬರಗಾಲ ಆವರಿಸಿದ ಹಿನ್ನೆಲೆಯಲ್ಲಿ ಅದ್ಧೂರಿ ದಸರಾಗೆ ವಿರೋಧಿಸಿದ್ದರು.
ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಝ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯಟ್ಝಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲಿಝಾಡ್ ವಿಲಿಯಮ್ಸ್.
ಬಾಂಗ್ಲಾದೇಶ್ (ಪ್ಲೇಯಿಂಗ್ XI): ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮೆಹಿದಿ ಹಸನ್ ಮಿರಾಝ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡದ ಹಂಗಾಮಿ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
Published On - 1:33 pm, Tue, 24 October 23