South Africa vs Bangladesh: 5.3 ಓವರ್​​ಗೆ 60 ರನ್: ಬಾಂಗ್ಲಾ ವಿರುದ್ಧ ದಕ್ಷಿಣ ಆಫ್ರಿಕಾ ಸ್ಫೋಟಕ ಬ್ಯಾಟಿಂಗ್

SA vs BAN, T20 World Cup: ಟಾಸ್ ಗೆದ್ದ ದಕ್ಷಿಣ ಆಪ್ರಿಕಾ ತಂಡದ ನಾಯಕ ತೆಂಬಾ ಬವುಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಓಪನರ್​ಗಳಾಗಿ ಕ್ರೀಸ್​ಗೆ ಬಂದ ತೆಂಬಾ ಬವುಮಾ ಹಾಗೂ ಕ್ವಿಂಟನ್ ಡಿಕಾಕ್ ಪೈಕಿ ಟಸ್ಕರ್ ಅಹ್ಮದ್ ಬೌಲಿಂಗ್​ನ ಮೊದಲ ಓವರ್​ನಲ್ಲೇ ಬವುಮಾ 2 ರನ್​ಗೆ ಔಟಾದರು.

South Africa vs Bangladesh: 5.3 ಓವರ್​​ಗೆ 60 ರನ್: ಬಾಂಗ್ಲಾ ವಿರುದ್ಧ ದಕ್ಷಿಣ ಆಫ್ರಿಕಾ ಸ್ಫೋಟಕ ಬ್ಯಾಟಿಂಗ್
SA vs BAN
Follow us
TV9 Web
| Updated By: Vinay Bhat

Updated on: Oct 27, 2022 | 9:37 AM

ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಗ್ರೂಪ್ 2 ಸೂಪರ್ 12ನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ (South Africa vs Bangladesh) ತಂಡಗಳು ಸೆಣೆಸಾಟ ನಡೆಯುತ್ತಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಈಗಾಗಲೇ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಹರಿಣಗಳು ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಮೊದಲ ಓವರ್​ನಲ್ಲೇ ವಿಕೆಟ್ ಕಳೆದುಕೊಂಡರೂ ನಂತರ ಕ್ವಿಂಟನ್ ಡಿಕಾಕ್ ಹಾಗೂ ರಿಲೀ ರಾಸ್ಸೋ (Rilee Rossouw) ಬಿರುಸಿನ ಬ್ಯಾಟಿಂಗ್ ಮಾಡಿದರು. ಆದರೆ ಇವರ ಆರ್ಭಟಕ್ಕೆ ವರುಣ ಬ್ರೇಕ್ ಹಾಕಿ ಕೆಲ ಸಮಯ ಮಳೆಯಿಂದಾಗಿ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿತು.

ಟಾಸ್ ಗೆದ್ದ ದಕ್ಷಿಣ ಆಪ್ರಿಕಾ ತಂಡದ ನಾಯಕ ತೆಂಬಾ ಬವುಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಓಪನರ್​ಗಳಾಗಿ ಕ್ರೀಸ್​ಗೆ ಬಂದ ತೆಂಬಾ ಬವುಮಾ ಹಾಗೂ ಕ್ವಿಂಟನ್ ಡಿಕಾಕ್ ಪೈಕಿ ಟಸ್ಕರ್ ಅಹ್ಮದ್ ಬೌಲಿಂಗ್​ನ ಮೊದಲ ಓವರ್​ನಲ್ಲೇ ಬವುಮಾ 2 ರನ್​ಗೆ ಔಟಾದರು. ನಂತರ ದ್ವಿತೀಯ ವಿಕೆಟ್​ಗೆ ಜೊತೆಯಾದ ಡಿಕಾಕ್ ಹಾಗೂ ರಿಲೀ ರಾಸ್ಸೋ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಪವರ್ ಪ್ಲೇನಲ್ಲಿ ಬಿರುಸಿನ ಆಟವಾಡಿದ ಈ ಜೋಡಿ ಆರಂಭದಲ್ಲೇ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದರು.

ದಕ್ಷಿಣ ಆಫ್ರಿಕಾ ತಂಡ 5.3 ಓವರ್​​ನಲ್ಲಿ 1 ವಿಕೆಟ್ ನಷ್ಟಕ್ಕೆ 60 ರನ್ ಗಳಿಸಿದೆ ಸಮಯ ಮಳೆ ಬಂದ ಪರಿಣಾಮ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿತು. ಡಿಕಾಕ್ 12 ಎಸೆತಗಳಲ್ಲಿ 3 ಫೋರ್, 1 ಸಿಕ್ಸರ್​ನೊಂದಿಗೆ ಅಜೇಯ 21 ರನ್ ಗಳಿಸಿದ್ದರೆ, ರಿಲೀ ರಾಸ್ಸೋ ಕೇವಲ 17 ಎಸೆತಗಳಲ್ಲಿ 2 ಫೋರ್, 3 ಸಿಕ್ಸರ್ ಸಿಡಿಸಿ ಅಜೇಯ 35 ರನ್ ಚಚ್ಚಿದ್ದಾರೆ. ಬಾಂಗ್ಲಾ ಪರ ಟಸ್ಕಿನ್ ಅಹ್ಮದ್ 1 ವಿಕೆಟ್ ಪಡೆದಿದ್ದಾರೆ. ಇದೀಗ ಪಂದ್ಯ ಪುನಃ  ಆರಂಭವಾಗಿದೆ.

ಇದನ್ನೂ ಓದಿ
Image
India vs Netherlands: ಭಾರತ-ನೆದರ್​ಲೆಂಡ್ಸ್ ಪಂದ್ಯಕ್ಕೆ ಮಳೆಯ ಕಾಟ?: ಸಿಡ್ನಿ ಹವಾಮಾನ ವರದಿ ಇಲ್ಲಿದೆ ನೋಡಿ
Image
IND vs NED: ಟಿ20 ವಿಶ್ವಕಪ್​ನಲ್ಲಿಂದು ಭಾರತ-ನೆದರ್​ಲೆಂಡ್ಸ್ ಮುಖಾಮುಖಿ: ರೋಹಿತ್ ಪಡೆಯಲ್ಲಿ ಏನು ಬದಲಾವಣೆ?
Image
ರೋಹಿತ್ ಬಳಿಕ ಟೀಂ ಇಂಡಿಯಾದ ನಾಯಕ ಯಾರು? ಪಾಕ್ ಮಾಜಿ ಕ್ರಿಕೆಟಿಗರ ಆಯ್ಕೆ ಯಾರು ಗೊತ್ತಾ?
Image
T20 World Cup 2022: ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ ರಾಬಿನ್ ಉತ್ತಪ್ಪ

ಪ್ಲೇಯಿಂಗ್ XI:

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ತೆಂಬಾ ಬವುಮಾ (ನಾಯಕ), ರಿಲೀ ರಾಸ್ಸೋ, ಆ್ಯಡೆನ್ ಮರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.

ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನೂರುಲ್ ಹಸನ್ (ವಿಕೆಟ್ ಕೀಪರ್), ಮೊಸದ್ದೆಕ್ ಹೊಸೈನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್.

ಭಾರತ- ನೆದರ್​ಲೆಂಡ್ಸ್ ಪಂದ್ಯ:

ಐಸಿಸಿ ಟಿ20 ವಿಶ್ವಕಪ್​ನಲ್ಲಿಂದು ಮತ್ತೊಂದು ರೋಚಕ ಕದನ ನಡೆಯಲದೆ. ಮಧ್ಯಾಹ್ನ 12:30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಭಾರತ ಹಾಗೂ ನೆದರ್​ಲೆಂಡ್ಸ್ ತಂಡ ಮುಖಾಮುಖಿ ಆಗುತ್ತಿದೆ. ಈಗಾಗಲೇ ಪಾಕಿಸ್ತಾನ ವಿರುದ್ಧ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಮತ್ತೊಂದು ಜಯ ಸಾಧಿಸಿ ಟೇಬಲ್ ಟಾಪರ್ ಮೇಲೆ ಕಣ್ಣಿಟ್ಟಿದ್ದರೆ, ಅತ್ತ ಬಾಂಗ್ಲಾ ಎದುರು ಸೋತ ನೆದರ್​ಲೆಂಡ್ಸ್ ಚೊಚ್ಚಲ ಗೆಲುವನ್ನು ಎದುರು ನೋಡುತ್ತಿದೆ. ರೋಹಿತ್ ಪಡೆ ನೆದರ್​ಲೆಂಡ್ಸ್ ತಂಡವನ್ನು ಹಗುರವಾಗಿ ಪರಿಗಣಿಸದೆ ಗೇಮ್ ಪ್ಲಾನ್ ರೂಪಿಸುತ್ತಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಸಾಕ್ಷಿಯಾಗಲಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ