IND vs SA: ಇಂದಿನಿಂದ ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿ: ಎಷ್ಟು ಗಂಟೆಗೆ ಪಂದ್ಯ ಶುರು?

India vs South Africa 1st ODI: ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ 91 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 50 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 38 ಪಂದ್ಯಗಳನ್ನು ಗೆದ್ದುಕೊಂಡಿತ್ತು. ಮೇಲ್ನೋಟಕ್ಕೆ ಇಲ್ಲಿ ಸೌತ್ ಆಫ್ರಿಕಾ ತಂಡ ಬಲಿಷ್ಠ ಎನಿಸಿಕೊಂಡರೂ ಇತ್ತೀಚಿನ ಏಕದಿನ ವಿಶ್ವಕಪ್​ನಲ್ಲಿ ಹರಿಣರ ಪಡೆಗೆ ಸೋಲುಣಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು.

IND vs SA: ಇಂದಿನಿಂದ ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿ: ಎಷ್ಟು ಗಂಟೆಗೆ ಪಂದ್ಯ ಶುರು?
IND vs SA
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 17, 2023 | 7:14 AM

ಜೋಹಾನ್ಸ್​ಬರ್ಗ್​​ನ ನ್ಯೂ ವಂಡರರ್ಸ್​ ಸ್ಟೇಡಿಯಂನಲ್ಲಿ ಇಂದು ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಇದಾಗಿದ್ದು, ಹೀಗಾಗಿ ಉಭಯ ತಂಡಗಳು ಶುಭಾರಂಭ ಮಾಡುವ ಇರಾದೆಯಲ್ಲಿದೆ. ಅದರಲ್ಲೂ ಏಕದಿನ ವಿಶ್ವಕಪ್ ಫೈನಲ್ ಪಂದ್ಯದ ಸೋಲಿನ ಬಳಿಕ ಟೀಮ್ ಇಂಡಿಯಾ ಮೊದಲ ಏಕದಿನ ಪಂದ್ಯವಾಡುತ್ತಿದೆ. ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಶಮಿ ಅಲಭ್ಯರಾಗಿದ್ದಾರೆ. ಈ ಸರಣಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಟೀಮ್ ಇಂಡಿಯಾ ನಾಯಕ ಯಾರು?

ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಸರಣಿಯ ಎಲ್ಲಾ ಪಂದ್ಯಗಳು ಮಧ್ಯಾಹ್ನ 1.30 ರಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 1 ಗಂಟೆಗೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್​ಸ್ಟಾರ್ ಆ್ಯಪ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಯಾವ ತಂಡ ಬಲಿಷ್ಠ?

ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ 91 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 50 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 38 ಪಂದ್ಯಗಳನ್ನು ಗೆದ್ದುಕೊಂಡಿತ್ತು. ಮೇಲ್ನೋಟಕ್ಕೆ ಇಲ್ಲಿ ಸೌತ್ ಆಫ್ರಿಕಾ ತಂಡ ಬಲಿಷ್ಠ ಎನಿಸಿಕೊಂಡರೂ ಇತ್ತೀಚಿನ ಏಕದಿನ ವಿಶ್ವಕಪ್​ನಲ್ಲಿ ಹರಿಣರ ಪಡೆಗೆ ಸೋಲುಣಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಹೀಗಾಗಿ ಸಮಬಲದ ಪೈಪೋಟಿಯನ್ನು ನಿರೀಕ್ಷಿಸಬಹುದು.

ಸೌತ್ ಆಫ್ರಿಕಾ ತಂಡ: ರೀಝ ಹೆಂಡ್ರಿಕ್ಸ್, ಟೋನಿ ಡಿ ಜೊರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್ , ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ, ಲಿಝಾಡ್ ವಿಲಿಯಮ್ಸ್, ವಿಯಾನ್ ಮುಲ್ಡರ್, ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮಿಹ್ಲಾಲಿ ಎಂಪೊಂಗ್ವಾನಾ, ಕೈಲ್ ವೆರ್ರೆನ್ನೆ.

ಇದನ್ನೂ ಓದಿ: IPL 2024: ಈ ಬಾರಿಯ ಐಪಿಎಲ್​ನೊಂದಿಗೆ 3 ಆಟಗಾರರು ವಿದಾಯ..!

ಭಾರತ ತಂಡ: ರಜತ್ ಪಾಟಿದಾರ್, ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಯುಜ್ವೇಂದ್ರ ಚಹಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಆಕಾಶ್ ದೀಪ್.

ಏಕದಿನ ಸರಣಿ ವೇಳಾಪಟ್ಟಿ:

  • ಡಿಸೆಂಬರ್ 17- ಮೊದಲ ಏಕದಿನ ಪಂದ್ಯ (ಜೋಹಾನ್ಸ್​ಬರ್ಗ್​)
  • ಡಿಸೆಂಬರ್ 19- ಎರಡನೇ ಏಕದಿನ ಪಂದ್ಯ (ಗೆಬ್ಬೆಗಾ)
  • ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ (ಪಾರ್ಲ್​)

Published On - 6:58 am, Sun, 17 December 23

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್