ಜೋಹಾನ್ಸ್ಬರ್ಗ್ನ ನ್ಯೂ ವಂಡರರ್ಸ್ ಸ್ಟೇಡಿಯಂನಲ್ಲಿ ಇಂದು ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಲ್ಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಇದಾಗಿದ್ದು, ಹೀಗಾಗಿ ಉಭಯ ತಂಡಗಳು ಶುಭಾರಂಭ ಮಾಡುವ ಇರಾದೆಯಲ್ಲಿದೆ. ಅದರಲ್ಲೂ ಏಕದಿನ ವಿಶ್ವಕಪ್ ಫೈನಲ್ ಪಂದ್ಯದ ಸೋಲಿನ ಬಳಿಕ ಟೀಮ್ ಇಂಡಿಯಾ ಮೊದಲ ಏಕದಿನ ಪಂದ್ಯವಾಡುತ್ತಿದೆ. ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಶಮಿ ಅಲಭ್ಯರಾಗಿದ್ದಾರೆ. ಈ ಸರಣಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
ಟೀಮ್ ಇಂಡಿಯಾ ನಾಯಕ ಯಾರು?
ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.
ಎಷ್ಟು ಗಂಟೆಗೆ ಪಂದ್ಯ ಶುರು?
ಈ ಸರಣಿಯ ಎಲ್ಲಾ ಪಂದ್ಯಗಳು ಮಧ್ಯಾಹ್ನ 1.30 ರಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 1 ಗಂಟೆಗೆ ನಡೆಯಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ಸ್ಟಾರ್ ಆ್ಯಪ್ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.
ಯಾವ ತಂಡ ಬಲಿಷ್ಠ?
ಉಭಯ ತಂಡಗಳು ಏಕದಿನ ಕ್ರಿಕೆಟ್ನಲ್ಲಿ 91 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 50 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 38 ಪಂದ್ಯಗಳನ್ನು ಗೆದ್ದುಕೊಂಡಿತ್ತು. ಮೇಲ್ನೋಟಕ್ಕೆ ಇಲ್ಲಿ ಸೌತ್ ಆಫ್ರಿಕಾ ತಂಡ ಬಲಿಷ್ಠ ಎನಿಸಿಕೊಂಡರೂ ಇತ್ತೀಚಿನ ಏಕದಿನ ವಿಶ್ವಕಪ್ನಲ್ಲಿ ಹರಿಣರ ಪಡೆಗೆ ಸೋಲುಣಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಹೀಗಾಗಿ ಸಮಬಲದ ಪೈಪೋಟಿಯನ್ನು ನಿರೀಕ್ಷಿಸಬಹುದು.
ಸೌತ್ ಆಫ್ರಿಕಾ ತಂಡ: ರೀಝ ಹೆಂಡ್ರಿಕ್ಸ್, ಟೋನಿ ಡಿ ಜೊರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್ , ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ, ಲಿಝಾಡ್ ವಿಲಿಯಮ್ಸ್, ವಿಯಾನ್ ಮುಲ್ಡರ್, ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮಿಹ್ಲಾಲಿ ಎಂಪೊಂಗ್ವಾನಾ, ಕೈಲ್ ವೆರ್ರೆನ್ನೆ.
ಇದನ್ನೂ ಓದಿ: IPL 2024: ಈ ಬಾರಿಯ ಐಪಿಎಲ್ನೊಂದಿಗೆ 3 ಆಟಗಾರರು ವಿದಾಯ..!
ಭಾರತ ತಂಡ: ರಜತ್ ಪಾಟಿದಾರ್, ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಯುಜ್ವೇಂದ್ರ ಚಹಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಆಕಾಶ್ ದೀಪ್.
ಏಕದಿನ ಸರಣಿ ವೇಳಾಪಟ್ಟಿ:
Published On - 6:58 am, Sun, 17 December 23