ಜೋಹಾನ್ಸ್ಬರ್ಗ್ನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ-ಸೌತ್ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಪಾದಾರ್ಪಣೆ ಮಾಡಿದ್ದಾರೆ. ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ಪರ ಅದ್ಭುತ ಪ್ರದರ್ಶನದೊಂದಿಗೆ ಗಮನ ಸೆಳೆದಿದ್ದ ಸಾಯಿ ಇದೀಗ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.
ಸೌತ್ ಆಫ್ರಿಕಾ (ಪ್ಲೇಯಿಂಗ್ XI): ರೀಝ ಹೆಂಡ್ರಿಕ್ಸ್, ಟೋನಿ ಡಿ ಜೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್ , ಆಂಡಿಲೆ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ.
ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು ಇದುವರೆಗೆ 91 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 38 ಪಂದ್ಯಗಳಲ್ಲಿ ಮಾತ್ರ. ಅದೇ ಸೌತ್ ಆಫ್ರಿಕಾ ಒಟ್ಟು 50 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇನ್ನು ಮೂರು ಮ್ಯಾಚ್ಗಳು ಫಲಿತಾಂಶರಹಿತವಾಗಿತ್ತು.
ಇದಾಗ್ಯೂ ಈ ಬಾರಿ ಏಕದಿನ ವಿಶ್ವಕಪ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಇನ್ನು ನ್ಯೂ ವಾಂಡರರ್ಸ್ ಮೈದಾನವು ಬ್ಯಾಟಿಂಗ್ಗೆ ಸಹಕಾರಿ. ಹೀಗಾಗಿ ಇಂದಿನ ಪಂದ್ಯದಲ್ಲೂ ಕೆಲ ದಾಖಲೆಗಳನ್ನು ಎದುರು ನೋಡಬಹುದಾಗಿದೆ.
ಸೌತ್ ಆಫ್ರಿಕಾ ತಂಡ: ರೀಝ ಹೆಂಡ್ರಿಕ್ಸ್, ಟೋನಿ ಡಿ ಜೊರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್ , ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ, ಲಿಝಾಡ್ ವಿಲಿಯಮ್ಸ್, ವಿಯಾನ್ ಮುಲ್ಡರ್, ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮಿಹ್ಲಾಲಿ ಎಂಪೊಂಗ್ವಾನಾ, ಕೈಲ್ ವೆರ್ರೆನ್ನೆ.
ಇದನ್ನೂ ಓದಿ: IPL 2024: ಈ ಬಾರಿಯ ಐಪಿಎಲ್ನೊಂದಿಗೆ 3 ಆಟಗಾರರು ವಿದಾಯ..!
ಭಾರತ ತಂಡ: ರಜತ್ ಪಾಟಿದಾರ್, ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಯುಜ್ವೇಂದ್ರ ಚಹಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಆಕಾಶ್ ದೀಪ್.
Published On - 1:03 pm, Sun, 17 December 23