India vs South Africa: ಮೂರನೇ ದಿನಕ್ಕೂ ಇದೆಯೇ ಮಳೆಯ ಕಾಟ?: ಸೆಂಚುರಿಯನ್ ವಾತಾವರಣ ಹೇಗಿದೆ?

Centurion Weather Report: ಭಾರತ ಹಾಗೂ ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್​ನ ಎರಡನೇ ದಿನಕ್ಕೆ ಅಡ್ಡಿ ಪಡಿಸಿದ್ದ ವರುಣ ಮೂರನೇ ದಿನಕ್ಕೂ ಕಾಟ ಕೊಡುತ್ತಾನಾ?. ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಮತ್ತು ನಾಳೆ, ಅಂದರೆ 3 ಮತ್ತು 4ನೇ ದಿನದಂದು ಮಳೆ ಬರುವ ಸಾಧ್ಯತೆ ಕಡಿಮೆ ಇದೆ.

India vs South Africa: ಮೂರನೇ ದಿನಕ್ಕೂ ಇದೆಯೇ ಮಳೆಯ ಕಾಟ?: ಸೆಂಚುರಿಯನ್ ವಾತಾವರಣ ಹೇಗಿದೆ?
India vs South Africa
Follow us
TV9 Web
| Updated By: Vinay Bhat

Updated on: Dec 28, 2021 | 8:52 AM

ಸೆಂಚುರಿಯನ್​ನ (Centurion) ಸೂಪರ್ ಸ್ಪೋರ್ಟ್ ಪಾರ್ಕ್​ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದ ಮೊದಲ ದಿನ ಬೊಂಬಾಟ್ ಪ್ರದರ್ಶನ ತೋರಿದ ಭಾರತ (India vs South Africa) ಎರಡನೇ ದಿನ ದೊಡ್ಡ ಮೊತ್ತ ಕಲೆಹಾಕುವ ಪ್ಲಾನ್​ನಲ್ಲಿತ್ತು. ಆದರೆ, ಬೆಂಬಿಡದೆ ಸುರಿದ ಮಳೆರಾಯ ಟೀಮ್ ಇಂಡಿಯಾದ (Team India) ಎಲ್ಲ ಯೋಜನೆಯನ್ನು ತಲೆಕೆಳಗಾಗಿಸಿತು. ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಒಂದೂ ಎಸೆತ ಕಾಣದೆ ಮಳೆಯಿಂದಾಗಿ ಸಂಪೂರ್ಣ ರದ್ದಾಯಿತು. ಭಾರತದ ಮೊತ್ತ 3 ವಿಕೆಟ್ ಕಳೆದುಕೊಂಡು 272 ರನ್​ನಲ್ಲೇ ಇದೆ. ಇಂದು ಮೂರನೇ ದಿನದಾಟ ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಹಾಗಾದ್ರೆ ಇಂದಿನ ಮೂರನೇ ದಿನದಾಟಕ್ಕೂ ವರುಣ ಅಡ್ಡಿ ಪಡಿಸಲಿದ್ದಾನಾ?, ಸೆಂಚುರಿಯನ್ ವಾತಾವರಣ ಹೇಗಿದೆ?, ಇಲ್ಲಿದೆ ಮಾಹಿತಿ.

ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಮತ್ತು ನಾಳೆ, ಅಂದರೆ 3 ಮತ್ತು 4ನೇ ದಿನದಂದು ಮಳೆ ಬರುವ ಸಾಧ್ಯತೆ ಕಡಿಮೆ ಇದೆ. ಹವಾಮಾನ ವೆಬ್‌ಸೈಟ್ ಅಕ್ಯೂವೆದರ್ ಪ್ರಕಾರ, ಸೆಂಚುರಿಯನ್‌ನಲ್ಲಿ ಸೋಮವಾರ ರಾತ್ರಿಯವರೆಗೆ ನಿರಂತರವಾಗಿ ಮಳೆ ಸುರಿಯಲಿದೆ. ಆದರೆ ಮಂಗಳವಾರದಂದು ಮೋಡ ಕವಿದ ವಾತಾವರಣವಿದ್ದರೂ ಮಳೆ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ. ನಿಜ, ಮೂರನೇ ಹಾಗೂ ನಾಲ್ಕನೇ ದಿನದಾಟಕ್ಕೆ ಮಳೆ ಅಡ್ಡಿಯುಂಟು ಮಾಡುವುದಿಲ್ಲ. ಆದರೆ, ಅಂತಿಮ ದಿನದಾಟಕ್ಕೆ ಮತ್ತೆ ಮಳೆ ಕಾಡುವ ಸಾಧ್ಯತೆಗಳಿವೆ. ಹೀಗಾಗಿ ಪಂದ್ಯದ ಫಲಿತಾಂಶದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ. ಮುಂದಿನ ಮೂರು ದಿನಗಳ ಕಾಲ ತಲಾ 98 ಓವರ್‌ಗಳ ಆಟ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಮೊದಲ ದಿನದಾಟದ ಅಂತ್ಯದಲ್ಲಿ ಭಾರತ ತಂಡ ಉತ್ತಮ ಸ್ಥಿತಿ ಕಾಯ್ದುಕೊಂಡಿತ್ತು. ಆರಂಭಿಕ ಜೋಡಿ ಕೆಎಲ್ ರಾಹುಲ್ ಹಾಗೂ ಮಯಂಕ್ ಅಗರ್ವಾಲ್ ದಕ್ಷಿಣ ಆಫ್ರಿಕಾ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಭದ್ರ ಅಡಿಪಾಯ ಹಾಕುವಲ್ಲಿ ನೆರವಾದರು. ಇವರಿಬ್ಬರು ಮೊದಲ ವಿಕೆಟ್‌ಗೆ ಶತಕದ (117 ರನ್) ಜೊತೆಯಾಟ ಕಟ್ಟಿದರು. 123 ಎಸೆತಗಳನ್ನು ಎದುರಿಸಿದ ಅಗರವಾಲ್ ಒಂಬತ್ತು ಬೌಂಡರಿಗಳ ನೆರವಿನಿಂದ 60 ರನ್ ಗಳಿಸಿದರು.

ಈ ಹಂತದಲ್ಲಿ ದಾಳಿಗಿಳಿದ ಲುಂಗಿ ಗಿಡಿ, ಉತ್ತಮವಾಗಿ ಆಡುತ್ತಿದ್ದ ಮಯಂಕ್ ಜೊತೆಗೆ ಚೇತೇಶ್ವರ್ ಪೂಜಾರ (0) ಅವರನ್ನು ಸತತ ಎರಡು ಎಸೆತಗಳಲ್ಲಿ ಪೆವಿಲಿಯನ್‌ಗೆ ಅಟ್ಟಿದರು. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ 3ನೇ ವಿಕೆಟ್​ಗೆ 82 ರನ್ ಜೊತೆಯಾಟ ಆಡಿದರು. ಕೊಹ್ಲಿ 35 ರನ್​ಗೆ ಔಟ್ ಆಗುವ ಮೂಲಕ ಅವರ ಶತಕರಹಿತ ಇನ್ನಿಂಗ್ಸ್ ಸಂಖ್ಯೆ ಮುಂದುವರಿಯಿತು.

ಇನ್ನೊಂದೆಡೆ ಉಪ ನಾಯಕನ ಹೆಚ್ಚುವರಿ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ರಾಹುಲ್, ಟೆಸ್ಟ್ ‌ಕ್ರಿಕೆಟ್‌ನಲ್ಲಿ ಏಳನೇ ಶತಕದ ಸಾಧನೆ ಮಾಡಿದರು. ಅವರಿಗೆ ಅಜಿಂಕ್ಯಾ ರಹಾನೆ ಅವರಿಂದಲೂ ಉತ್ತಮ ಬೆಂಬಲ ದೊರಕಿತು. ನಾಲ್ಕನೇ ವಿಕೆಟ್‌ಗೆ ಈ ಜೋಡಿ 73 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. 81 ಎಸೆತಗಳನ್ನು ಎದುರಿಸಿದ ರಹಾನೆ 8 ಬೌಂಡರಿಗಳ ನೆರವಿನಿಂದ 40 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ರಾಹುಲ್ 248 ಎಸೆತಗಳನ್ನು ಎದುರಿಸಿ 122 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ.

AUS vs ENG 3rd Test: 68 ರನ್​ಗೆ ಇಂಗ್ಲೆಂಡ್ ಆಲೌಟ್: ಮೂರೇ ದಿನಕ್ಕೆ ಮುಗಿಯಿತು ಆ್ಯಶಸ್ 3ನೇ ಟೆಸ್ಟ್: ಸರಣಿ ಆಸ್ಟ್ರೇಲಿಯಾ ಪಾಲು

(South Africa vs India 1st Test Day 3 Centurion Weather LIVE Updates Fans would hope that play resumes today)

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ