IND vs SA 1st Test: ಇಂದು ಭಾರತ-ದ. ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಆರಂಭ: ಎಷ್ಟು ಗಂಟೆಗೆ?

|

Updated on: Dec 26, 2023 | 7:01 AM

South Africa vs India Frist Test Preview: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಇಂದು ಚಾಲನೆ ಸಿಗಲಿದೆ. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಮಧ್ಯಾಹ್ನ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ತೆಂಬಾ ಬವುಮಾ ಆಫ್ರಿಕಾ ನಾಯಕನಾಗಿದ್ದಾರೆ.

IND vs SA 1st Test: ಇಂದು ಭಾರತ-ದ. ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಆರಂಭ: ಎಷ್ಟು ಗಂಟೆಗೆ?
SA vs IND 1st Test
Follow us on

ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ (India vs South Africa) ಅದ್ಭುತ ಪ್ರದರ್ಶನ ತೋರುತ್ತಿದೆ. ಮೊದಲಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟಿ20 ಸರಣಿಯನ್ನು ಸಮಬಲ ಮಾಡಿಕೊಂಡಿದ್ದ ಟೀಮ್ ಇಂಡಿಯಾ, ಬಳಿಕ ಕೆಎಲ್ ರಾಹುಲ್ ನಾಯಕತ್ವದಲ್ಲಿ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತು. ಇದೀಗ ಉಭಯ ತಂಡಗಳು ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಟೆಸ್ಟ್​ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ತೆಂಬಾ ಬವುಮಾ ಆಫ್ರಿಕಾ ನಾಯಕನಾಗಿದ್ದಾರೆ.

ಭಾರತ- ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಯಾವಾಗ?

ಇಂದು ಡಿಸೆಂಬರ್ 26 ರಿಂದ ಡಿ. 30 ವರೆಗೆ ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ
IPL 2024: ಯಶ್ ದಯಾಳ್ RCB ಗೆ ಪಂದ್ಯ ಗೆಲ್ಲಿಸಿ ಕೊಡ್ತಾರೆ..!
Virat Kohli: ಮತ್ತೊಂದು ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
IND vs SA: ಕೆಎಲ್ ರಾಹುಲ್ ಆಯ್ಕೆಯ ಬಗ್ಗೆ ಚಕಾರವೆತ್ತಿದ ಪಾರ್ಥಿವ್ ಪಟೇಲ್
IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್.

ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಸೆಂಚುರಿಯನ್​ನ ಸೂಪರ್ ಸ್ಪೋರ್ಟ್ಸ್ ಪಾರ್ಕ್​ನಲ್ಲಿ ನಡೆಯಲಿದೆ.

SA vs IND 1st Test: ಬಾಕ್ಸಿಂಗ್ ಡೇ ಟೆಸ್ಟ್​ಗೆ ಭಾರತ ರೆಡಿ: ಬಿಸಿಸಿಐ ಹಂಚಿಕೊಂಡಿದೆ ವಿಡಿಯೋ

ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ.

ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.

ಟೆಸ್ಟ್ ಸರಣಿಗೆ ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ, ಕೆಎಸ್ ಭರತ್ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್.

ದ. ಆಫ್ರಿಕಾ ಟೆಸ್ಟ್ ತಂಡ: ತೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ಆಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರೆನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 am, Tue, 26 December 23