India vs South Africa: 2ನೇ ಏಕದಿನ ಪಂದ್ಯ ಎಲ್ಲಿ?, ಎಷ್ಟು ಗಂಟೆಗೆ ಆರಂಭ?, ಯಾವುದರಲ್ಲಿ ನೇರಪ್ರಸಾರ?

South Africa vs India 2nd ODI: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಆರಂಭದ ಏಕದಿನ ಸರಣಿಯ ಮೊದಲ ಪಂದ್ಯದಲ್ಲೂ ಸೋಲುಂಡ ಭಾರತ ಇದೀಗ ಎರಡನೇ ಕದನಕ್ಕೆ ಸಜ್ಜಾಗಿದೆ. ಎರಡನೇ ಏಕದಿನ ಪಂದ್ಯ ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?, ಭಾರತ ತಂಡ ಹೇಗಿದೆ? ಎಂಬ ಬಗೆಗಿನ ಮಾಹಿತಿಯನ್ನು ನೋಡುವುದಾದರೆ…

India vs South Africa: 2ನೇ ಏಕದಿನ ಪಂದ್ಯ ಎಲ್ಲಿ?, ಎಷ್ಟು ಗಂಟೆಗೆ ಆರಂಭ?, ಯಾವುದರಲ್ಲಿ ನೇರಪ್ರಸಾರ?
india vs south africa Second ODI
Follow us
TV9 Web
| Updated By: Vinay Bhat

Updated on: Jan 21, 2022 | 9:13 AM

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 31 ರನ್‌ಗಳಿಂದ ಸೋಲು ಅನುಭವಿಸಿರುವ ಟೀಮ್ ಇಂಡಿಯಾ (Team India) ಶುಕ್ರವಾರ ಬೊಲೆಂಡ್‌ ಪಾರ್ಕ್‌ನಲ್ಲಿ ನಡೆಯುವ ಎರಡನೇ ಹಣಾಹಣಿಗೆ ಸಜ್ಜಾಗುತ್ತಿದೆ. ಮೂರು ಪಂದ್ಯಗಳ ಏಕದಿನ ಸರಣಿಯನ್ನು ವಶಪಡಸಿಕೊಳ್ಳಬೇಕಾದರೆ ಕೆಎಲ್ ರಾಹುಲ್ ಪಡೆ ಈ ಎರಡನೇ ಪಂದ್ಯದಲ್ಲಿ ಗೆಲ್ಲುವುದು ಅನಿವಾರ್ಯ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಕೆಎಲ್ ರಾಹುಲ್ (KL Rahul) ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ರಾಹುಲ್​ ತಾನೊಬ್ಬ ಶ್ರೇಷ್ಠ ನಾಯಕ ಎಂಬುದನ್ನು ಸಾಬೀತು ಪಡಿಸಬೇಕಾದ ಒತ್ತಡದಲ್ಲಿದ್ದಾರೆ. ದ್ವಿತೀಯ ಕದನಕ್ಕೆ ತಂಡದಲ್ಲಿ ಬದಲಾವಣೆ ಖಚಿತ ಜೊತೆಗೆ ಅನಿವಾರ್ಯಕೂಡ. ಬ್ಯಾಟಿಂಗ್ ವಿಭಾಗದಲ್ಲಂತು ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಹಾಗಾದ್ರೆ ಇಂಡೋ-ಆಫ್ರಿಕಾ ಎರಡನೇ ಏಕದಿನ ಪಂದ್ಯ ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?, ಭಾರತ ತಂಡ ಹೇಗಿದೆ? ಎಂಬ ಬಗೆಗಿನ ಮಾಹಿತಿಯನ್ನು ನೋಡುವುದಾದರೆ…

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ ಜನವರಿ 21 ರಂದು ನಡೆಯಲಿದೆ.

ಈ ಪಂದ್ಯ ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ನಲ್ಲಿ ಆಯೋಜಿಸಲಾಗಿದೆ.

ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ ಸ್ಟಾರ್ ಸ್ಫೋರ್ಟ್ಸ್​ ನೆಟ್​ವರ್ಕ್​​ನಲ್ಲಿ ನೇರಪ್ರಸಾರ ಕಾಣಲಿದೆ. ಡಿಸ್ನಿ+ ಹಾಟ್​ಸ್ಟಾರ್​ನಲ್ಲೂ ಲೈವ್ ಸ್ಟ್ರೀಮ್ ಆಗಲಿದೆ.

ಮೊದಲ ಏಕದಿನದಲ್ಲಿ ಶಿಖರ್ ಧವನ್, ವಿರಾಟ್ ಕೊಹ್ಲಿ ಜೋಡಿ ಅಗ್ರ ಕ್ರಮಾಂಕದಲ್ಲಿ ಭಾರತದ ಚೇಸಿಂಗ್‌ಗೆ ಬಲ ತುಂಬಿದ್ದರೂ, ಮಧ್ಯಮ ಕ್ರಮಾಂಕದ ಕುಸಿತ ಗುರಿ ತಲುಪಲು ಅಡ್ಡಿಯಾಗಿತ್ತು. ನಾಯಕ ಕೆ ಎಲ್ ರಾಹುಲ್ ಕೂಡ ಆರಂಭದಲ್ಲೆ ಎಡವಿದ್ದರು. ಕೊಹ್ಲಿ ನಾಯಕತ್ವ ಬಿಟ್ಟ ನಂತರ ಬ್ಯಾಟಿಂಗ್‌ನಲ್ಲಿ ಹೇಗೆ ಮಿಂಚುತ್ತಾರೆ ಎಂಬ ಕುತೂಹಲಕ್ಕೆ ಬುಧವಾರದ ಪಂದ್ಯದಲ್ಲಿ ಉತ್ತರ ಸಿಕ್ಕಿದೆ. ಅವರು ತಮ್ಮ ಅರ್ಧಶತಕದ ಮೂಲಕ ತಮ್ಮ ರನ್‌ಗಳ ಹಸಿವು ಇನ್ನೂ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಆದರೆ, ಶ್ರೇಯಸ್ ಅಯ್ಯರ್ ಮತ್ತು ರಿಷಭ್ ಪಂತ್ ಕಳಪೆ ಆಟ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇವರ ವೈಫಲ್ಯದಿಂದಲೇ ತಂಡ ಕಳೆದ ಪಂದ್ಯದಲ್ಲಿ ದಿಢೀರ್ ಕುಸಿತ ಕಂಡಿತು. ಹೀಗಾಗಿ ಅಯ್ಯರ್​ ಅವರನ್ನು ಬೆಂಚ್ ಕೂರಿಸುವ ಯೋಚನೆ ಮ್ಯಾನೇಜ್ಮೆಂಟ್​ನಲ್ಲಿ ಮೂಡಿರಬಹುದು. ವೆಂಕಟೇಶ್ ಅಯ್ಯರ್ ಅವರನ್ನು ಆಲ್ರೌಂಡರ್ ಆಗಿ ತಂಡದಲ್ಲಿ ಸೇರಿಸಿಕೊಂಡಿದ್ದರೂ ಅವರಿಗೆ ಬೌಲಿಂಗ್ ನೀಡದಿರುವುದು ಅಚ್ಚರಿ ಎನಿಸಿದೆ. ಮೊದಲ ಪಂದ್ಯದಲ್ಲಿ ಮಾಡಿದ ಎಡವಟ್ಟನ್ನು ಸರಿಪಡಿಸಿ ಈ ಬಾರಿ ಆತ್ಮವಿಆಶ್ವಾಸದೊಂದಿಗೆ ಕಣಕ್ಕಿಳಿಯಲು ಭಾರತ ತಯಾರಾಗಿದೆ.

ಉಭಯ ತಂಡಗಳು ಇಂತಿವೆ:

ಭಾರತ ತಂಡ: ಕೆ.ಎಲ್.ರಾಹುಲ್ (ನಾಯಕ), ಜಸ್‌ಪ್ರೀತ್ ಬುಮ್ರಾ (ಉಪ-ನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ಯುಜ್ವೇಂದ್ರ ಚಹಾಲ್, ಆರ್. ಅಶ್ವಿನ್, ಭುವನೇಶ್ವರ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್ ಹಾಗೂ ನವದೀಪ್ ಸೈನಿ.

ದ. ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕೇಶವ್ ಮಹಾರಾಜ್ (ಉಪನಾಯಕ), ಕ್ವಿಂಟನ್ ಡಿ ಕಾಕ್, ಯನಮಾನ್ ಮಲನ್, ಜುಬೇರ್ ಹಮ್ಜಾ, ಮಾರ್ಕೊ ಯಾನ್ಸನ್, ಸಿಸಂದಾ ಮಂಗ್ಲಾ, ಏಡನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ವೇಯ್ನ್ ಪಾರ್ನೆಲ್, ಆಂಡಿಲ್ ಫೆಹ್ಲುಕ್ವಾಯೊ, ಡ್ವೇಯ್ನ್ ಪ್ರಿಟೋರಿಯಸ್, ಕಾಗಿಸೋ ರಬಡಾ , ತಬ್ರೇಜ್ ಶಂಬಾಡಾ , ರಾಸಿ ವಾನ್ ಡೆರ್ ಡುಸ್ಸೆನ್, ಕೈಲ್ ವೆರೆನ್.

South Africa vs India: ಇಂದು ಭಾರತ- ದಕ್ಷಿಣ ಆಫ್ರಿಕಾ ಎರಡನೇ ಏಕದಿನ: ಗೆಲ್ಲಲೇ ಬೇಕಾದ ಒತ್ತಡದಲ್ಲಿ ರಾಹುಲ್ ಪಡೆ

ICC T20 World Cup 2022 ವೇಳಾಪಟ್ಟಿ ಪ್ರಕಟ: ಭಾರತದ ಮೊದಲ ಎದುರಾಳಿ ಪಾಕಿಸ್ತಾನ, ಯಾವಾಗ ಪಂದ್ಯ?