IND vs SA: ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾಗೆ ಭರ್ಜರಿ ಜಯ

South Africa vs India: ಆ ಬಳಿಕ ಬಂದ ಎಡಗೈ ದಾಂಡಿಗ ತಿಲಕ್ ವರ್ಮಾ 20 ಎಸೆತಗಳಲ್ಲಿ 29 ರನ್ ಬಾರಿಸಿದರೂ ಹೆಚ್ಚು ಹೊತ್ತು ಕ್ರೀಸ್​ನಲ್ಲಿರಲಿಲ್ಲ. ಈ ಹಂತದಲ್ಲಿ ಜೊತೆಗೂಡಿದ ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತರು.

IND vs SA: ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾಗೆ ಭರ್ಜರಿ ಜಯ
South Africa Batters
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 13, 2023 | 12:26 AM

ಗೆಬ್ಬೆಗಾದ ಸೇಂಟ್ ಜಾರ್ಜ್​ ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ ಟೀಮ್ ಇಂಡಿಯಾ (Team India) ವಿರುದ್ಧದ  2ನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (0) ಮಾರ್ಕೊ ಯಾನ್ಸೆನ್ ಎಸೆದ ಮೊದಲ ಓವರ್​ನ 3ನೇ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಇದರ ಬೆನ್ನಲ್ಲೇ ವಿಲಿಯಮ್ಸ್ ಎಸೆತದಲ್ಲಿ ಶುಭ್​ಮನ್ ಗಿಲ್ (0) ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದರು.

ಆ ಬಳಿಕ ಬಂದ ಎಡಗೈ ದಾಂಡಿಗ ತಿಲಕ್ ವರ್ಮಾ 20 ಎಸೆತಗಳಲ್ಲಿ 29 ರನ್ ಬಾರಿಸಿದರೂ ಹೆಚ್ಚು ಹೊತ್ತು ಕ್ರೀಸ್​ನಲ್ಲಿರಲಿಲ್ಲ. ಈ ಹಂತದಲ್ಲಿ ಜೊತೆಗೂಡಿದ ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಟೀಮ್ ಇಂಡಿಯಾಗೆ ಆಸರೆಯಾಗಿ ನಿಂತರು.

ಒಂದೆಡೆ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರೆ ರಿಂಕು ಸಿಂಗ್ ಉತ್ತಮ ಸಾಥ್ ನೀಡಿದರು. ಪರಿಣಾಮ ಕೇವಲ 29 ಎಸೆತಗಳಲ್ಲಿ ಸೂರ್ಯಕುಮಾರ್ ಅರ್ಧಶತಕ ಪೂರೈಸಿದರು. ಆ ಬಳಿಕ ಕೂಡ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ ಸೂರ್ಯ 36 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 56 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ನಾಯಕ ನಿರ್ಗಮಿಸುತ್ತಿದ್ದಂತೆ ರಿಂಕು ಸಿಂಗ್ ಅಬ್ಬರ ಶುರು ಮಾಡಿದ್ದರು. ಅಂತಿಮ ಓವರ್​ಗಳಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರಿಂಕು ಸಿಂಗ್ 30 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕ ಪೂರೈಸಿದರು.

ಅರ್ಧಶತಕ ಬಳಿಕ ಹೊಡಿಬಡಿ ಆಟಕ್ಕೆ ಒತ್ತು ನೀಡಿದ ರಿಂಕು ಸಿಂಗ್ ಕೇವಲ 39 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 68 ರನ್​ ಚಚ್ಚಿದರು. ಟೀಮ್ ಇಂಡಿಯಾ 19.3 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್​ಗಳಿಸಿದ್ದ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಇನ್ನು ಮಳೆ ನಿಂತ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್​ ಕಡಿತಗಳೊಂದಿಗೆ ಸೌತ್ ಆಫ್ರಿಕಾ ತಂಡಕ್ಕೆ 15 ಓವರ್​ಗಳಲ್ಲಿ 152 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡಕ್ಕೆ ರೀಝ ಹೆಂಡ್ರಿಕ್ಸ್ ಹಾಗೂ ಮ್ಯೂಥ್ಯೂ ಬ್ರೀಟ್ಝ್​ಕೆ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ 2 ಓವರ್​ಗಳಲ್ಲಿ 38 ರನ್ ಬಾರಿಸಿ ಬೃಹತ್ ಮೊತ್ತದ ಚೇಸಿಂಗ್​ಗೆ ಉತ್ತಮ ಅಡಿಪಾಯ ಹಾಕಿಕೊಂಡಿದ್ದರು.

ಉತ್ತಮ ಆರಂಭದ ಬೆನ್ನಲ್ಲೇ ಮ್ಯಾಥ್ಯೂ ಬ್ರೀಟ್ಝ್​​ಕೆ (17) ರನೌಟ್​ಗೆ ಬಲಿಯಾದರು. ಇದಾಗ್ಯೂ ಮೊದಲ 5 ಓವರ್​ಗಳಲ್ಲಿ 68 ರನ್​ ಬಾರಿಸಿ ಸೌತ್ ಆಫ್ರಿಕಾ ಬ್ಯಾಟರ್​ಗಳು ಅಬ್ಬರಿಸಿದರು. ಈ ಹಂತದಲ್ಲಿ ಹೆಂಡ್ರಿಕ್ಸ್ ಜೊತೆಗೂಡಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಐಡೆನ್ ಮಾರ್ಕ್ರಾಮ್ (30) ಔಟಾದರು. ಆದರೆ ಅಷ್ಟರಲ್ಲಾಗಲೇ ಸೌತ್ ಆಫ್ರಿಕಾ ತಂಡವು 8 ಓವರ್​ಗಳಲ್ಲಿ 98 ರನ್ ಕಲೆಹಾಕಿತ್ತು.

ಈ ಹಂತದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಮ್ ಇಂಡಿಯಾ ಬೌಲರ್​ಗಳು ರೀಝ ಹೆಂಡ್ರಿಕ್ಸ್ (49) ಹಾಗೂ ಹೆನ್ರಿಕ್ ಕ್ಲಾಸೆನ್ (7) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ಐದನೇ ವಿಕೆಟ್​ಗೆ ಜೊತೆಗೂಡಿದ ಡೇವಿಡ್ ಮಿಲ್ಲರ್ ಹಾಗೂ ಟ್ರಿಸ್ಟಾನ್ ಸ್ಟಬ್ಸ್​ ಉತ್ತಮ ಜೊತೆಯಾಟ ಪ್ರದರ್ಶಿಸಿದರು.

ಅಂತಿಮವಾಗಿ ಸೌತ್ ಆಫ್ರಿಕಾ ತಂಡವು 13.5 ಓವರ್​ಗಳಲ್ಲಿ 5 ವಿಕೆಟ್​ ಕಳೆದುಕೊಂಡು 154 ರನ್ ಬಾರಿಸುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಮ್ಯಾಥ್ಯೂ ಬ್ರೀಟ್ಝ್​ಕೆ, ರೀಝ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೇಝ್ ಶಮ್ಸಿ.

ಇದನ್ನೂ ಓದಿ: ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್

ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮುಕೇಶ್ ಕುಮಾರ್.

ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ