AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟಾಸ್ ಗೆದ್ದ ಸೌತ್ ಆಫ್ರಿಕಾ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11

South Africa vs India: ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ ಮಳೆಗೆ ಅಹುತಿಯಾಗಿತ್ತು. ಹೀಗಾಗಿ ಇಂದಿನ ಪಂದ್ಯವು ಉಭಯ ತಂಡಗಳಿಗೂ ಸರಣಿ ಗೆಲ್ಲಲು ನಿರ್ಣಾಯಕ. ಏಕೆಂದರೆ ಉಳಿದಿರುವ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದ ತಂಡ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

IND vs SA: ಟಾಸ್ ಗೆದ್ದ ಸೌತ್ ಆಫ್ರಿಕಾ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11
South Africa vs India
TV9 Web
| Edited By: |

Updated on:Dec 12, 2023 | 8:40 PM

Share

ಗೆಬ್ಬೆಗಾದ ಸೇಂಟ್ ಜಾರ್ಜ್​ ಪಾರ್ಕ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ  ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ ಮಳೆಗೆ ಅಹುತಿಯಾಗಿತ್ತು. ಹೀಗಾಗಿ ಇಂದಿನ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಏಕೆಂದರೆ ಉಳಿದಿರುವ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದ ತಂಡ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

ಹೀಗಾಗಿ ಉಭಯ ತಂಡಗಳು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸಿದೆ. ಇತ್ತ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ಹಾಗೂ ಇಶಾನ್ ಕಿಶನ್ ಅವಕಾಶ ವಂಚಿತರಾಗಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಸ್ಥಾನದಲ್ಲಿ ಜಿತೇಶ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿವೆ.

ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಮ್ಯಾಥ್ಯೂ ಬ್ರೀಟ್ಝ್​ಕ್, ರೀಝಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ.

ಸೌತ್ ಆಫ್ರಿಕಾ ಟಿ20 ತಂಡ: ರೀಝಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಝ್​ಕ್, ಟ್ರಿಸ್ಟಾನ್ ಸ್ಟಬ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಝಿ, ನಾಂಡ್ರೆ ಬರ್ಗರ್, ತಬ್ರೈಝ್ ಶಮ್ಸಿ, ಡೊನ್ಕೊ ಜಾರ್ಟನ್ಸ್, ಡೊನ್ಕೊ ಜಾರ್ಟನ್ಸ್ ಫೆರೇರಾ, ಲಿಜಾಡ್ ವಿಲಿಯಮ್ಸ್.

ಇದನ್ನೂ ಓದಿ: IPL 2024 Auction: ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 333 ಆಟಗಾರರ ಪಟ್ಟಿ ಇಲ್ಲಿದೆ

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದೀಪಕ್ ಚಹರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮುಕೇಶ್ ಕುಮಾರ್, ವಾಷಿಂಗ್ಟನ್ ಸುಂದರ್ , ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕುಲ್ದೀಪ್ ಯಾದವ್.

Published On - 8:08 pm, Tue, 12 December 23

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!